IND – ENG 5TH TEST | ಟಾಸ್‌ ಗೆದ್ದ ಇಂಗ್ಲೆಂಡ್‌; ಟೀಮ್ ಇಂಡಿಯಾದಲ್ಲಿ ಹಲವು ಬದಲಾವಣೆ

Date:

ಓವಲ್‌ನಲ್ಲಿ ನಡೆಯುತ್ತಿರುವ ತೆಂಡೂಲ್ಕರ್ – ಆಂಡರ್‌ಸನ್‌ ಟ್ರೋಫಿಯ ಭಾರತ ಹಾಗೂ ಇಂಗ್ಲೆಂಡ್ ನಡುವಣ ಐದನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌ ಬೌಲಿಂಗ್‌ ಆಯ್ದುಕೊಂಡಿದ್ದು, ಟೀಂ ಇಂಡಿಯಾವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಹಲವು ಬದಲಾವಣೆ ಮಾಡಲಾಗಿದ್ದು, ಮೂವರು ಕನ್ನಡಿಗರಾದ ಕೆ ಎಲ್‌ ರಾಹುಲ್, ಕರುಣ್‌ ನಾಯರ್‌ ಹಾಗೂ ಪ್ರಸಿದ್ಧ್‌ ಕೃಷ್ಣ ಅವರಿಗೆ ಸ್ಥಾನ ಲಭಿಸಿದೆ. ಹಾಗೆಯೇ ಜಸ್‌ಪ್ರೀತ್‌ ಬುಮ್ರಾ, ರಿಷಭ್‌ ಪಂತ್‌ ಅವರನ್ನು ಕೈಬಿಡಲಾಗಿದೆ. ಬದಲಿಗೆ ಆಕಾಶ್‌ ದೀಪ್‌, ಧ್ರವ್‌ ಜುರೆಲ್‌ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಪಂದ್ಯವು ಉಭಯ ತಂಡಗಳಿಗೂ ಮಹತ್ವದಾಗಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ, ಸರಣಿಯಲ್ಲಿ ಸಮಬಲ ಸಾಧಿಸುವ ಇರಾದೆ ಭಾರತ ತಂಡದ್ದಾಗಿದೆ. ಇನ್ನು ಇಂಗ್ಲೆಂಡ್ ತಂಡ ಸಹ ಪಂದ್ಯದ ಗೆಲುವಿನ ಮೇಲೆ ಚಿತ್ತ ನೆಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಓವಲ್‌ ಅಂಗಳದಲ್ಲಿ ಟೀಮ್ ಇಂಡಿಯಾ ಸಾಧನೆ ಉತ್ತಮವಾಗಿಲ್ಲ. ಟೀಮ್ ಇಂಡಿಯಾ ಈ ಅಂಗಳದಲ್ಲಿ 2 ಗೆಲುವು ದಾಖಲಿಸಿದೆ. ಈಗ ಮೂರನೇ ಗೆಲುವಿನ ಹುಡುಕಾಟದಲ್ಲಿದೆ. ಕಳೆದ ಬಾರಿ ಈ ಮೈದಾನದಲ್ಲಿ ಪಂದ್ಯ ನಡೆದಾಗ ರೋಹಿತ್‌ ಶರ್ಮಾ ಶತಕ ಬಾರಿಸಿ ಅಬ್ಬರಿಸಿದ್ದರು. ಈಗ ಅವರು ನಿವೃತ್ತರಾಗಿದ್ದಾರೆ. ಹೀಗಾಗಿ ಎಲ್ಲರ ಕಣ್ಣುಗಳು ಟೀಮ್ ಇಂಡಿಯಾ ನಾಯಕ ಶುಭಮನ್‌ ಗಿಲ್ ಅವರ ಮೇಲೆ ನೆಟ್ಟಿದೆ. ಗಿಲ್‌ ಈ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿದ್ದು, ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಐದನೇ ಪಂದ್ಯದಲ್ಲೂ ಇದೇ ಪ್ರದರ್ಶನ ಮುಂದುವರೆಸಿದಲ್ಲಿ, ಗಿಲ್ ಮತ್ತೆ ಹಲವು ದಾಖಲೆ ಬರೆಯಬಹುದು.

ಇದನ್ನು ಓದಿದ್ದೀರಾ? ಕ್ರಿಕೆಟಿಗ ನಿತೀಶ್‌ ಕುಮಾರ್‌ ರೆಡ್ಡಿ ವಿರುದ್ಧ 5 ಕೋಟಿ ರೂ. ಪಾವತಿಸಲು ಮೊಕದ್ದಮೆ

ಈಗಾಗಲೇ ಈ ಪಂದ್ಯಕ್ಕಾಗಿ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ನಾಲ್ಕು ಬದಲಾವಣೆಗಳೊಂದಿಗೆ ತಂಡ ಕಣಕ್ಕೆ ಇಳಿಯಲಿದೆ. ನಾಯಕ ಬೆನ್‌ ಸ್ಟೋಕ್ಸ್‌ ಈ ಪಂದ್ಯದಲ್ಲಿ ಕಣಕ್ಕೆ ಇಳಿಯುತ್ತಿಲ್ಲ. ಅವರು ಭುಜದ ಗಾಯದ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇವರಲ್ಲದೇ ಇನ್ನು ಮೂವರು ಆಟಗಾರರನ್ನು ತಂಡದ ಆಡಳಿತ ಕೈ ಬಿಟ್ಟಿದೆ.

ಪ್ರಸಕ್ತ ಸರಣಿಯಲ್ಲಿ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಆಟಗಾರರಲ್ಲಿ ಕನ್ನಡಿಗ ಕೆ ಎಲ್ ರಾಹುಲ್ ಅವರಿಗೆ ಸ್ಥಾನ ನೀಡಲಾಗಿದೆ. ಇವರು ಈಗಾಗಲೇ ತಾವೊಬ್ಬ ನುರಿತ ಬ್ಯಾಟರ್ ಎಂಬುದನ್ನು ಸಾಬೀತು ಪಡಿಸಿದ್ದಾರೆ. ಹೀಗಾಗಿ ಇವರ ಮೇಲೆ ವಿಶ್ವಾಸ ಹೆಚ್ಚಿದೆ. ಯಶಸ್ವಿ ಜೈಸ್ವಾಲ್‌ ಈ ಪಂದ್ಯದಲ್ಲಿ ಅಬ್ಬರಿಸುವ ಅನಿವಾರ್ಯತೆ ಇದೆ. ಟೀಮ್ ಇಂಡಿಯಾ ನಾಯಕ ಶುಭಮನ್‌ ಗಿಲ್‌ ಈ ಪಂದ್ಯದಲ್ಲಿ ಅಬ್ಬರದ ಆಟವನ್ನು ಆಡಿ ತಂಡಕ್ಕೆ ಗೆಲುವಿನ ಮಾಲೆ ತೊಡಿಸುವ ಯೋಜನೆ ಮಾಡಿಕೊಂಡಿದ್ದಾರೆ.

ಆಲ್‌ರೌಂಡರ್ ಕೋಟಾವನ್ನು ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್ ಭದ್ರಪಡಿಸಿಕೊಂಡಿದ್ದಾರೆ. ಮೊಹಮ್ಮದ್‌ ಸಿರಾಜ್‌ 11ರ ಇಲೆವೆನ್‌ ಭಾಗವಾಗಲಿದ್ದಾರೆ.

ಉಭಯ ತಂಡಗಳ 11ರ ಬಳಗ

ಭಾರತ:
ಶುಭಮನ್ ಗಿಲ್(ನಾಯಕ) ಯಶಸ್ವಿ ಜೈಸ್ವಾಲ್, ಕೆ ಎಲ್ ರಾಹುಲ್, ಸಾಯಿ ಸುದರ್ಶನ್, ಕರುಣ್ ನಾಯರ್, ಧ್ರುವ್ ಜುರೆಲ್(ವಿಕೆಟ್ ಕೀಪರ್), ರವೀಂದ್ರ ಜಡೇಜ, ವಾಷಿಂಗ್ಟನ್ ಸುಂದರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

ಇಂಗ್ಲೆಂಡ್‌:
ಝ್ಯಾಕ್ ಕ್ರಾಲಿ, ಬೆನ್ ಡಕೆಟ್, ಓಲಿ ಪೋಪ್ (ನಾಯಕ), ಜೋ ರೂಟ್, ಹ್ಯಾರಿ ಬ್ರೂಕ್, ಜಾಕೋಬ್ ಬೆಥೆಲ್, ಜೇಮೀ ಸ್ಮಿತ್ (ವಿಕೆಟ್‌ ಕೀಪರ್), ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ಸನ್, ಜೇಮೀ ಓವರ್ಟನ್, ಜೋಶ್ ಟಂಗ್.

ಪಂದ್ಯ ಆರಂಭ; 3.30

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...