IND – ENG Test | ಡ್ರೆಸಿಂಗ್ ರೂಮ್‌ನಲ್ಲಿ ರಿಷಬ್ ಪಂತ್‌ಗೆ ಕೈಮುಗಿದು ಸ್ವಾಗತಿಸಿದ ಕೆ ಎಲ್‌ ರಾಹುಲ್

Date:

ಆತಿಥೇಯ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ ಮೇಲುಗೈ ಸಾಧಿಸಿದೆ. ಮೊದಲ ದಿನವಾದ ಶುಕ್ರವಾರ ಭಾರತ ತಂಡ 85 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 359 ರನ್ ಗಳಿಸಿ ಪ್ರಾಬಲ್ಯ ಮೆರೆಯಿತು.

ಭಾರತದ ಪರ ಇಬ್ಬರು ಬ್ಯಾಟರ್ ಗಳು ಶತಕ ಸಿಡಿಸಿದರೆ, ಓರ್ವ ಬ್ಯಾಟರ್ ಅರ್ಧಶತಕ ಸಿಡಿಸಿದ್ದಾರೆ. ಈ ನಡುವೆ ದಿನದಾಟ ಮುಕ್ತಾಯದ ಬಳಿಕ ಡ್ರೆಸಿಂಗ್ ರೂಮ್‌ಗೆ ಬಂದ ರಿಷಬ್ ಪಂತ್ ರನ್ನು ತಂಡದ ಮತ್ತೋರ್ವ ಆಟಗಾರ ಕೆಎಲ್ ರಾಹುಲ್ ಕೈಮುಗಿದು ಸ್ವಾಗತಿಸಿದರು. ಈ ವಿಡಿಯೋ ಈಗ ವೈರಲ್ ಆಗುತ್ತಿದೆ.

ಇಂಗ್ಲೆಂಡ್ ನ ಲೀಡ್ಸ್ ನ ಹೆಡಿಂಗ್ಲೇ ಕ್ರೀಡಾಂಗಣದಲ್ಲಿ ಟೆಸ್ಟ್ ಪಂದ್ಯ ನಡೆಯುತ್ತಿದೆ. ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ತಂಡ ದಿನದಾಟದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 359 ರನ್ ಗಳಿಸಿ ಬೃಹತ್ ಮೊತ್ತದತ್ತ ದಾಪುಗಾಲಿರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದ ಪರ ಯಶಸ್ವಿ ಜೈಸಾಲ್ ಮತ್ತು ನಾಯಕ ಶುಭ್ ಮನ್ ಗಿಲ್ ಶತಕ ಸಿಡಿಸಿದರೆ, ರಿಷಬ್ ಪಂತ್ ಅಜೇಯ 65 ರನ್ ಗಳಿಸಿ 2ನೇ ದಿನದಾಟಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

ಗಿಲ್ ಅವರು ನಾಯಕನಾಗಿ ಮೊದಲ ಪಂದ್ಯದಲ್ಲೇ ಶತಕ ಬಾರಿಸಿದ ಭಾರತದ ‘ಆಯ್ದ ಆಟಗಾರರ’ ಕ್ಲಬ್‌ಗೆ ಸೇರಿದರು.
ಈ ಹಿಂದೆ ವಿಜಯ್ ಹಜಾರೆ (164*), ಸುನಿಲ್ ಗಾವಸ್ಕರ್ (116), ದಿಲೀಪ್ ವೆಂಗಸರ್ಕರ್ (102) ಮತ್ತು ವಿರಾಟ್ ಕೊಹ್ಲಿ (141) ಅವರೂ ನಾಯಕರಾಗಿ ಮೊದಲ ಟೆಸ್ಟ್‌ ನಲ್ಲೇ ಶತಕ ಬಾರಿಸಿದ್ದರು.

ಪದಾರ್ಪಣೆ ಪಂದ್ಯ ಆಡಿದ ಸಾಯಿ ಸುದರ್ಶನ್ ಕೇವಲ ನಾಲ್ಕು ಎಸೆತ ಎದುರಿಸಿದರು. ಆದರೆ ಅವರಿಗೆ ಖಾತೆ ತೆರೆಯಲು ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಬಿಡಲಿಲ್ಲ. ಜೇಮಿ ಸ್ಮಿತ್ ಪಡೆದ ಚೆಂದದ ಕ್ಯಾಚ್‌ಗೆ ಸಾಯಿ ನಿರ್ಗಮಿಸಿದರು.

ಪಂದ್ಯದ ಎರಡನೇ ದಿನದಂದು ಭಾರತ ತಂಡ ಬ್ಯಾಟಿಂಗ್ ಮಾಡಲು ಬಂದಾಗ, ಸ್ಕೋರ್ ಅನ್ನು 500 ರನ್‌ಗಳಿಗಿಂತ ಹೆಚ್ಚು ಗಳಿಸಲು ಪ್ರಯತ್ನಿಸುತ್ತದೆ. ಟೀಮ್ ಇಂಡಿಯಾ 500 ರನ್ ಗಳಿಸಿದರೆ, ಇಂಗ್ಲೆಂಡ್ ಮೇಲೆ ಹೆಚ್ಚುವರಿ ಒತ್ತಡ ಹೇರಲಾಗುತ್ತದೆ. ಇಂದಿನ ಪಂದ್ಯ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...