ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಂ ಇಂಡಿಯಾದ ನಾಯದ ಕೆ ಎಲ್ ರಾಹುಲ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.ಇನ್ನೊಂದು ಗಮನಿಸಬೇಕಾದ ಸಂಗತಿ ಏನಂದರೆ ಸತತ 20 ಪಂದ್ಯದ ನಂತರ ಭಾರತ ಟಾಸ್ ಗೆದ್ದಿದೆ.
ಸರಣಿ ಈಗಾಗಲೇ 1-1 ಸಮಬಲ ಸಾಧಿಸಿದ್ದು, ಸರಣಿ ಗೆಲ್ಲಲು ಉಭಯ ತಂಡಗಳಿಗೂ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಲಿದೆ.
ದಕ್ಷಿಣ ಆಫ್ರಿಕಾ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನು ಈ ಪಂದ್ಯಕ್ಕೆ ದಕ್ಷಿಣ ಆಫ್ರಿಕಾ ತಂಡದ ಇಬ್ಬರು ಆಟಗಾರರು ಅಲಭ್ಯರಾಗಿದ್ದಾರೆ.
ರಾಯ್ಪುರದಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಬೌಲಿಂಗ್ ಮಾಡುವ ವೇಳೆ ಗಾಯಗೊಂಡಿದ್ದ ನಾಂಡ್ರೆ ಬರ್ಗರ್ ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಹಾಗೆಯೇ ಬ್ಯಾಟಿಂಗ್ ವೇಳೆ ಕಾಲು ನೋವಿಗೆ ತುತ್ತಾಗಿದ್ದ ಎಡಗೈ ದಾಂಡಿಗ ಟೋನಿ ಡಿ ಝೋರ್ಝಿ ಸಹ ಈ ಮ್ಯಾಚ್ಗೆ ಅಲಭ್ಯರಾಗಿದ್ದಾರೆ.
ಇದನ್ನು ಓದಿದ್ದೀರಾ? “ನಾನು ಕೋಚ್ ಆಗಿದ್ದರೆ ಸೋಲಿನ ಹೊಣೆ ಮೊದಲು ಹೊರುತ್ತಿದ್ದೆ”: ಗಂಭೀರ್ ವಿರುದ್ಧ ರವಿ ಶಾಸ್ತ್ರಿ ವಾಗ್ದಾಳಿ
ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಮಾಡಿಕೊಂಡಿದೆ. ಅದರಂತೆ ವಾಷಿಂಗ್ಟನ್ ಸುಂದರ್ ಸ್ಥಾನದಲ್ಲಿ ಇಂದಿನ ಪಂದ್ಯದಲ್ಲಿ ತಿಲಕ್ ವರ್ಮಾ ಕಣಕ್ಕಿಳಿಯಲಿದ್ದಾರೆ.
ನಿರ್ಣಾಯಕ ಪಂದ್ಯ:
ಸರಣಿಯಲ್ಲಿ ಈ ಪಂದ್ಯ ನಿರ್ಣಾಯಕ. ಏಕೆಂದರೆ ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ, ದ್ವಿತೀಯ ಮ್ಯಾಚ್ನಲ್ಲಿ ದಕ್ಷಿಣ ಆಫ್ರಿಕಾ ತಂಡ ಜಯ ಸಾಧಿಸಿದೆ. ಅದರಂತೆ ಈ ಪಂದ್ಯದಲ್ಲಿ ಗೆಲ್ಲುವ ತಂಡ ಟ್ರೋಫಿ ಎತ್ತಿ ಹಿಡಿಯಲಿದೆ.
ಭಾರತ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಕೆಎಲ್ ರಾಹುಲ್ (ನಾಯಕ), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.
ದಕ್ಷಿಣ ಆಫ್ರಿಕಾ: ತೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಯಾನ್ ರಿಕೆಲ್ಟನ್, ಐಡೆನ್ ಮಾರ್ಕ್ರಾಮ್ , ಮ್ಯಾಥ್ಯೂ ಬ್ರೀಟ್ಝ್ಕೆ, ಡೆವಾಲ್ಡ್ ಬ್ರೆವಿಸ್, ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್, ಲುಂಗಿ ಎನ್ಗಿಡಿ, ಕೇಶವ್ ಮಹಾರಾಜ್, ಒಟ್ನೀಲ್ ಬಾರ್ಟ್‌ಮ್ಯಾನ್.





