Ind – SA T20 | ಒಂದೇ ಪಂದ್ಯದಲ್ಲಿ ಬುಮ್ರಾ, ಪಾಂಡ್ಯ, ಅರ್ಷದೀಪ್‌ ದಾಖಲೆ

Date:

ಕಟಕ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 175 ರನ್‌ ಸೇರಿಸಿತು. ಈ ವೇಳೆ ಹಾರ್ದಿಕ್ ಪಾಂಡ್ಯ 28 ಎಸೆತಗಳಲ್ಲಿ 6 ಬೌಂಡರಿ, 4 ಸಿಕ್ಸರ್ ಸಹಾಯದಿಂದ 59 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 12.3 ಓವರ್‌ಗಳಲ್ಲಿ 74 ರನ್‌ಗಳಿಗೆ ಆಲೌಟ್ ಆಯಿತು. ಭಾರತ 101 ರನ್‌ಗಳಿಂದ ಜಯ ಸಾಧಿಸಿ 5 ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್‌ ಜಸ್ಪ್ರೀತ್ ಬುಮ್ರಾ, ಸ್ಟಾರ್ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಹಾಗೂ ಮತ್ತೊಬ್ಬ ವೇಗಿ ಅರ್ಷದೀಪ್‌ ಸಿಂಗ್ ಹೊಸ ದಾಖಲೆಗಳನ್ನು ತಮ್ಮದಾಗಿಸಿಕೊಂಡರು.

ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್‌ ಜಸ್ಪ್ರೀತ್ ಬುಮ್ರಾ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಪಂದ್ಯದಲ್ಲಿ ಅಬ್ಬರಿಸಿದ್ದಾರೆ. ಕಟಕ್‌ನಲ್ಲಿ ಬಿಗುವಿನ ದಾಳಿ ನಡೆಸಿದ ಜಸ್ಪ್ರೀತ್ ಬುಮ್ರಾ, ಪ್ರವಾಸಿ ತಂಡದ ಬೌಲರ್‌ಗಳನ್ನು ಕಾಡಿದರು. ಈ ಮೂಲಕ ಜಸ್ಪ್ರೀತ್ ಬುಮ್ರಾ ಹೊಸದೊಂದು ದಾಖಲೆ ಬರೆದಿದ್ದಾರೆ. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಅರ್ಷದೀಪ್‌ ಬಳಿಕ ಈ ಸಾಧನೆ ಮಾಡಿದ ಎರಡನೇ ಬೌಲರ್‌ ಎಂಬ ಖ್ಯಾತಿ ತಮ್ಮದಾಗಿಸಿಕೊಂಡಿದ್ದಾರೆ.

ಮಂಗಳವಾರ ನಡೆದ ಪಂದ್ಯದಲ್ಲಿ ಜಸ್ರೀತ್ ಬುಮ್ರಾ ಶಿಸ್ತು ಬದ್ಧ ದಾಳಿ ಮಾಡಿ ಸಂಘಟಿಸಿದರು. ಇವರು ಇನಿಂಗ್ಸ್‌ನ 11ನೇ ಓವರ್‌ನ ಎರಡನೇ ಎಸೆತದಲ್ಲಿ ಡೇವಾಲ್ಡ್ ಬ್ರೇವಿಸ್ ಅವರಿಗೆ ಶಾರ್ಪ್‌ ಬ್ಯಾಕ್ ಆಫ್ ಲೆಂತ್ ಎಸೆತವನ್ನು ತಪ್ಪಾಗಿ ಗ್ರಹಿಸಿ ವಿಕೆಟ್ ಕೀಪರ್ ಜಿತೇಶ್ ಶರ್ಮಾ ಅವರು ಹಿಡಿದ ಕ್ಯಾಚ್‌ಗೆ ಔಟಾದರು. ಈ ಮೂಲಕ ಜಸ್ಪ್ರೀತ್ ಬುಮ್ರಾ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್‌ ಪಡೆದ ಸಾಧನೆ ಮಾಡಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್ ಪಡೆದ ಎರಡನೇ ಬೌಲರ್‌ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

32 ವರ್ಷದ ವೇಗದ ಬೌಲರ್‌ ಜಸ್ಪ್ರೀತ್ ಬುಮ್ರಾ 2016ರಲ್ಲಿ ಟಿ20 ಮಾರದಿಗೆ ಪದಾರ್ಪಣೆ ಮಾಡಿದರು. ಇವರು ಅಲ್ಲಿಂದ ಚುಟುಕು ತಂಡದ ಅವಿಭಾಜ್ಯ ಅಂಗವಾಗಿದ್ದಾರೆ. ಜಸ್ಪ್ರೀತ್ ಬುಮ್ರಾ 80 ಪಂದ್ಯಗಳನ್ನು ಆಡಿ 101 ವಿಕೆಟ್‌ ಕಬಳಿಸಿದ್ದಾರೆ. ಈ ವೇಳೆ ಇವರ ಎಕಾನಮಿ 6.36 ಆಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ 2 ವಿಕೆಟ್‌ ಪಡೆಯುತ್ತಲೇ ಚುಟುಕು ಕ್ರಿಕೆಟ್‌ನಲ್ಲಿ 100ಕ್ಕೂ ಹೆಚ್ಚು ವಿಕೆಟ್‌ ಪಡೆದ ಸಾಧನೆ ಮಾಡಿದರು.

ಇದನ್ನು ಓದಿದ್ದೀರಾ? IND – SA ODI | ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಗೆದ್ದ ಭಾರತ: ಜೈಸ್ವಾಲ್‌ ದಾಖಲೆಯ ಚೊಚ್ಚಲ ಶತಕ

ಅರ್ಷದೀಪ್‌ಗೆ ಅಗ್ರ ಸ್ಥಾನ
ಟೀಮ್ ಇಂಡಿಯಾದ ವೇಗದ ಬೌಲರ್‌ ಅರ್ಷದೀಪ್ ಸಿಂಗ್ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್‌ ಪಡೆದ ಬೌಲರ್ ಎಂಬ ಖ್ಯಾತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರು 69 ಪಂದ್ಯಗಳಲ್ಲಿ 107 ವಿಕೆಟ್‌ ಪಡೆದು ಹೆಚ್ಚು ವಿಕೆಟ್‌ ಪಡೆದ ಭಾರತೀಯ ಬೌಲರ್‌ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಇದ್ದು, ಇವರು 121 ಪಂದ್ಯಗಳಲ್ಲಿ 99 ವಿಕೆಟ್‌ ಪಡೆದಿದ್ದಾರೆ. ಇನ್ನು ನಾಲ್ಕನೇ ಸ್ಥಾನದಲ್ಲಿ ಯುಜುವೇಂದ್ರ ಚಹಾಲ್‌ 96 ವಿಕೆಟ್‌ ಪಡೆದಿದ್ದು, ಭುವನೇಶ್ವರ್ ಕುಮಾರ್ 90 ವಿಕೆಟ್‌ ಪಡೆದು ಐದನೇ ಸ್ಥಾನದಲ್ಲಿದ್ದಾರೆ.

Arshdeep singh

ಪಾಂಡ್ಯ ಸಿಕ್ಸರ್ ದಾಖಲೆ

ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಕಂ ಬ್ಯಾಕ್ ಮಾಡುತ್ತಲೇ ಅಬ್ಬರಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅಮೋಘ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ ನೀಡಿದರು. ಹಾರ್ದಿಕ್ ಪಾಂಡ್ಯ ದಕ್ಷಿಣ ಆಫ್ರಿಕಾ ವಿರುದ್ಧ 2 ವಿಕೆಟ್‌ ಕಬಳಿಸಿ ಇತಿಹಾಸ ನಿರ್ಮಿಸುವ ಕನಸಿನಲ್ಲಿದ್ದರು. ಆದರೆ 1 ವಿಕೆಟ್‌ ಮಾತ್ರ ಪಡೆದರು. ಆದರೂ ಸಹ ಹಾರ್ದಿಕ್ ವಿಶೇಷ ಕ್ಲಬ್‌ಗೆ ಎಂಟ್ರಿ ಪಡೆದಿದ್ದಾರೆ.

32 ವರ್ಷದ ಹಾರ್ದಿಕ್ ಪಾಂಡ್ಯ 2016 ರಿಂದ ಟೀಮ್ ಇಂಡಿಯಾದ ಪರ ಟಿ20 ಕ್ರಿಕೆಟ್‌ ಆಡುತ್ತಿದ್ದಾರೆ. ಇವರು ತಮ್ಮ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿ ಮಿಂಚಿದ್ದಾರೆ. ಈಗಲೂ ಇದೇ ರೀತಿಯ ಪ್ರದರ್ಶನ ನೀಡಿದ್ದಾರೆ. ಏಷ್ಯಾ ಕಪ್‌ ಟಿ20 ಕ್ರಿಕೆಟ್‌ ವೇಳೆ ಗಾಯಕ್ಕೆ ತುತ್ತಾಗಿದ್ದ ಹಾರ್ದಿಕ್ ಪಾಂಡ್ಯ, ಚೇತರಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ದೇಶೀಯ ಟೂರ್ನಿಗಳಲ್ಲೂ ಆರ್ಭಟ ನಡೆಸಿದ್ದರು. ಈಗ ಇದೇ ಫಾರ್ಮ್‌ನ್ನು ಅಂತಾರಾಷ್ಟ್ರೀಯ ಪಂದ್ಯಗಳಲ್ಲೂ ಮುಂದುವರೆಸಿದ್ದಾರೆ. ಮೊದಲ ಪಂದ್ಯದಲ್ಲಿ ಆಲ್‌ರೌಂಡರ್‌ ಆಟದ ಪ್ರದರ್ಶನದ ನೀಡಿದ ಹಾರ್ದಿಕ್‌ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಸಹ ಬಂದಿದೆ.

ಟೀಮ್ ಇಂಡಿಯಾದ ಟಾಪ್‌ ಆರ್ಡರ್ ಬ್ಯಾಟರ್‌ಗಳು ಕಟಕ್‌ನಲ್ಲಿ ರನ್‌ ಕಲೆ ಹಾಕುವಲ್ಲಿ ವಿಫಲರಾದರು. ಆಗ ಭಾರತ ಸಾಧಾರಣ ಮೊತ್ತ ಕಲೆ ಹಾಕುತ್ತದೆ ಎಂಬ ಲೆಕ್ಕಾಚಾರವನ್ನು ಅಭಿಮಾನಿಗಳು ಹಾಕಿಕೊಂಡಿದ್ದರು. ಆದರೆ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಬಂದ ಹಾರ್ದಿಕ್ ಪಾಂಡ್ಯ, ಬಿರುಸಿನ ಆಟಕ್ಕೆ ಮುಂದಾದರು. ಇವರು 6 ಬೌಂಡರಿ, 4 ಸಿಕ್ಸರ್ ಸಹಾಯದಿಂದ ಅಜೇಯ 59 ರನ್ ಬಾರಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಈ ವೇಳೆ ಹಾರ್ದಿಕ್ ಪಾಂಡ್ಯ ಅವರ ಸ್ಟ್ರೈಕ್‌ ರೇಟ್‌ 210 ಆಗಿತ್ತು. ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನಾಲ್ಕು ಸಿಕ್ಸರ್ ಬಾರಿಸುತ್ತಲೇ ಹಾರ್ದಿಕ್ ಪಾಂಡ್ಯ ಟಿ20 ಕ್ರಿಕೆಟ್‌ನಲ್ಲಿ 100 ಸಿಕ್ಸರ್ ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ನೂರು ಸಿಕ್ಸರ್ ಬಾರಿಸಿದ ಭಾರತದ ನಾಲ್ಕನೇ ಬ್ಯಾಟರ್‌ ಎಂಬ ಖ್ಯಾತಿ ಪಡೆದಿದ್ದಾರೆ.

ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ಸ್‌ ಬಾರಿಸಿದವರು
ರೋಹಿತ್ ಶರ್ಮಾ, 159 ಪಂದ್ಯ, 205 ಸಿಕ್ಸರ್
ಸೂರ್ಯಕುಮಾರ್ ಯಾದವ್, 96 ಪಂದ್ಯ, 155 ಸಿಕ್ಸರ್
ವಿರಾಟ್‌ ಕೊಹ್ಲಿ, 125 ಪಂದ್ಯ, 124 ಸಿಕ್ಸರ್
ಹಾರ್ದಿಕ್ ಪಾಂಡ್ಯ, 121 ಪಂದ್ಯ, 100 ಸಿಕ್ಸರ್
ಕೆ ಎಲ್ ರಾಹುಲ್, 72 ಪಂದ್ಯ, 99 ಸಿಕ್ಸರ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...