IND – SA T20 | ಗೆಲುವಿನೊಂದಿಗೆ ವಿಶೇಷ ದಾಖಲೆ ನಿರ್ಮಿಸಿದ ಹಾರ್ದಿಕ್‌, ಅಭಿಷೇಕ್

Date:

ಧರ್ಮಶಾಲಾದಲ್ಲಿ ನಡೆದ ರೋಚಕ ಮೂರನೇ ಟಿ20 ಪಂದ್ಯದಲ್ಲಿ ಭಾರತ, ದಕ್ಷಿಣ ಆಫ್ರಿಕಾವನ್ನು 7 ವಿಕೆಟ್‌ಗಳಿಂದ ಸೋಲಿಸಿ ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿತು. ಬೌಲರ್‌ಗಳ ಪರಿಣಾಮಕಾರಿ ದಾಳಿಯಿಂದಾಗಿ ದಕ್ಷಿಣ ಆಫ್ರಿಕಾ ಕೇವಲ 117 ರನ್‌ಗಳಿಗೆ ಆಲೌಟ್ ಆಯಿತು. ನಂತರ, ಅಭಿಷೇಕ್ ಶರ್ಮಾ ಅವರ ತ್ವರಿತ 35 ರನ್ ಸೇರಿದಂತೆ, ಭಾರತ 15.5 ಓವರ್‌ಗಳಲ್ಲಿ 120 ರನ್ ಗಳಿಸಿ ಪಂದ್ಯ ಗೆದ್ದುಕೊಂಡಿತು. ಇದು ಸರಣಿ ಗೆಲುವಿನತ್ತ ಭಾರತದ ಮಹತ್ವದ ಹೆಜ್ಜೆಯಾಗಿದೆ. ಅಲ್ಲದೆ ಈ ಪಂದ್ಯದಲ್ಲಿ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಹಾಗೂ ಯುವ ಆಟಗಾರ ಅಭಿಷೇಕ್‌ ಶರ್ಮಾ ನೂತನ ವಿಶ್ವ ದಾಖಲೆ ನಿರ್ಮಿಸಿದರು.

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ 100 ವಿಕೆಟ್‌ ಸಾಧನೆ ಮಾಡಿದ 3ನೇ ಭಾರತೀಯ ಬೌಲರ್‌ ಎಂಬ ಶ್ರೇಯಕ್ಕೆ ಹಾರ್ದಿಕ್ ಪಾತ್ರರಾದರು. ಇದಕ್ಕೂ ಮೊದಲು ಈ ಸಾಧನೆಯನ್ನು ಎಡಗೈ ವೇಗದ ಬೌಲರ್‌ ಅರ್ಷದೀಪ್‌ ಸಿಂಗ್, ಯಾರ್ಕರ್‌ ಪರಿಣಿತ ಜಸ್ಪ್ರೀತ್ ಬುಮ್ರಾ ಮಾಡಿದ್ದರು.

ಅಲ್ಲದೆ 100 ವಿಕೆಟ್‌ ಹಾಗೂ ಸಾವಿರಕ್ಕೂ ಹೆಚ್ಚು ರನ್‌ಗಳನ್ನು ಬಾರಿಸಿದ ವಿಶ್ವದ ಮೊದಲ ವೇಗದ ಬೌಲಿಂಗ್‌ ಆಲ್‌ರೌಂಡರ್ ಎಂಬ ಹೆಗ್ಗಳಿಕೆ ಈಗ ಹಾರ್ದಿಕ್ ಪಾಲಾಗಿದೆ. ಇದಕ್ಕೂ ಮೊದಲು ಬಾಂಗ್ಲಾದೇಶದ ಶಾಕಿಬ್ ಅಲ್-ಹಸನ್, ಅಫ್ಘಾನಿಸ್ತಾನದ ಮೊಹಮ್ಮದ್ ನಬಿ ಮತ್ತು ಜಿಂಬಾಬ್ವೆ ತಂಡದ ಸಿಕಂದರ್ ರಾಜಾ ಮಾಡಿದ್ದರು. ಆದರೆ ಈ ಮೂವರು ಆಟಗಾರರು ಸ್ಪಿನ್ ಬೌಲಿಂಗ್ ಆಲ್‌ರೌಂಡರ್‌ಗಳಾಗಿದ್ದಾರೆ. ಹಾರ್ದಿಕ್‌ ವೇಗದ ಬೌಲಿಂಗ್‌ ಆಲ್‌ರೌಂಡರ್‌ ಆಗಿ ಈ ಸಾಧನೆ ಮಾಡಿದ ವಿಶ್ವದ ಮೊದಲ ಆಟಗಾರ ಎಂಬ ಶ್ರೇಯ ತಮ್ಮದಾಗಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? Ind – SA T20 | ಒಂದೇ ಪಂದ್ಯದಲ್ಲಿ ಬುಮ್ರಾ, ಪಾಂಡ್ಯ, ಅರ್ಷದೀಪ್‌ ದಾಖಲೆ

ಅಭಿಷೇಕ್ ಶರ್ಮಾ ವಿಶ್ವ ದಾಖಲೆ ನಿರ್ಮಾಣ

ಚುಟುಕು ಕ್ರಿಕೆಟ್​​ನಲ್ಲಿ ಅಭಿಷೇಕ್ ಶರ್ಮಾ ಆರ್ಭಟ ಮುಂದುವರೆದಿದೆ. ಈ ವರ್ಷ ಟಿ20 ಕ್ರಿಕೆಟ್​​ನಲ್ಲಿ ನೂರಕ್ಕೂ ಅಧಿಕ ಸಿಕ್ಸ್ ಸಿಡಿಸಿದ್ದಾರೆ. ಇದರಲ್ಲಿ 50 ಕ್ಕಿಂತ ಹೆಚ್ಚು ಸಿಕ್ಸ್ ಮೂಡಿಬಂದಿರುವುದು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಎಂಬುದು ವಿಶೇಷ

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ20 ಪಂದ್ಯಗಳಲ್ಲಿ ಅಭಿಷೇಕ್ ಶರ್ಮಾ ಬಾರಿಸಿದ ಒಟ್ಟು ಸಿಕ್ಸರ್​​ಗಳ ಸಂಖ್ಯೆ 6 ಸಿಕ್ಸ್ ಸಿಡಿಸಿದ್ದಾರೆ. ಈ ಆರು ಸಿಕ್ಸರ್​​ಗಳೊಂದಿಗೆ ಅಭಿ ಈ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್​​ನಲ್ಲಿ 50 ಸಿಕ್ಸ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಒಂದೇ ವರ್ಷದೊಳಗೆ ಸಿಕ್ಸರ್​​ಗಳ ಅರ್ಧಶತಕ ಪೂರೈಸಿದ ವಿಶ್ವದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಈ ವಿಶ್ವ ದಾಖಲೆ ಆಸ್ಟ್ರೀಯಾದ 30 ವರ್ಷದ ಕರನ್​​ಬೀರ್ ಸಿಂಗ್ ಹೆಸರಿನಲ್ಲಿತ್ತು. 2025 ರಲ್ಲಿ 32 ಪಂದ್ಯಗಳನ್ನಾಡಿರುವ ಕರನ್​​​ಬೀರ್ ಸಿಂಗ್ 50 ಕ್ಕಿಂತ ಹೆಚ್ಚು ಸಿಕ್ಸ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಅಭಿಷೇಕ್ ಶರ್ಮಾ ಅಳಿಸಿ ಹಾಕಿದ್ದಾರೆ.

ಈ ವರ್ಷ 20 ಟಿ20 ಪಂದ್ಯಗಳನ್ನಾಡಿರುವ 25 ವರ್ಷದ ಅಭಿಷೇಕ್ ಶರ್ಮಾ ಒಟ್ಟು 53 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಒಂದು ಕ್ಯಾಲೆಂಡರ್ ವರ್ಷದೊಳಗೆ ಸಿಕ್ಸರ್​​ಗಳ ಅರ್ಧಶತಕ ಪೂರೈಸಿದ ವಿಶ್ವದ ಅತ್ಯಂತ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

ಹಾಗೆಯೇ ಒಂದೇ ವರ್ಷದೊಳಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 50 ಕ್ಕಿಂತ ಹೆಚ್ಚು ಸಿಕ್ಸ್​ ಸಿಡಿಸಿದ ಭಾರತದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ 2022 ರಲ್ಲಿ ಸೂರ್ಯಕುಮಾರ್ ಯಾದವ್ 68 ಸಿಕ್ಸ್ ಬಾರಿಸಿದ್ದರು. ಇದೀಗ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಅಭಿಷೇಕ್ ಶರ್ಮಾ ಒಟ್ಟು 53 ಸಿಕ್ಸ್ ಸಿಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...