ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯ ಶುರುವಾಗಿದೆ. ಕ್ಯಾನ್ಬೆರಾದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಟೀಮ್ ಇಂಡಿಯಾಕ್ಕೆ ಮೊದಲು ಬ್ಯಾಟ್ ಮಾಲು ಆಹ್ವಾನಿಸಿದ್ದಾರೆ.
ತಂಡವಾಡುವ ಉಭಯ ತಂಡಗಳು
ಭಾರತ: ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ
ಆಸ್ಟ್ರೇಲಿಯಾ:: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಟಿಮ್ ಡೇವಿಡ್, ಮಿಚೆಲ್ ಓವನ್, ಮಾರ್ಕಸ್ ಸ್ಟೊಯಿನಿಸ್, ಜೋಶ್ ಫಿಲಿಪ್, ಕ್ಸೇವಿಯರ್ ಬಾರ್ಟ್ಲೆಟ್, ನಾಥನ್ ಎಲ್ಲಿಸ್, ಮ್ಯಾಥ್ಯೂ ಕುಹ್ನೆಮನ್, ಜೋಶ್ ಹೇಝಲ್ವುಡ್.
ಇದನ್ನು ಓದಿದ್ದೀರಾ? ICC Women’s World Cup: ನ್ಯೂಜಿಲೆಂಡ್ ಮಣಿಸಿ ಸೆಮಿಫೈನಲ್ ಪ್ರವೇಶಿಸಿದ ಭಾರತ
ಟಿ20 ಸರಣಿಯ ಸಂಪೂರ್ಣ ವೇಳಾಪಟ್ಟಿ
ಅಕ್ಟೋಬರ್ 29: ಮೊದಲ ಟಿ20 ಪಂದ್ಯ – ಮನುಕಾ ಓವಲ್, ಕ್ಯಾನ್‌ಬೆರಾ
ಅಕ್ಟೋಬರ್ 31: ಎರಡನೇ ಟಿ20 ಪಂದ್ಯ– ಮೆಲ್ಬೋರ್ನ್ ಕ್ರಿಕೆಟ್ ಮೈದಾನ
ನವೆಂಬರ್ 2,: ಮೂರನೇ ಟಿ20 ಪಂದ್ಯ– ಬೆಲ್ಲೆರಿವ್ ಓವಲ್, ಹೋಬಾರ್ಟ್
ನವೆಂಬರ್ 6: ನಾಲ್ಕನೇ ಟಿ20 ಪಂದ್ಯ – ಗೋಲ್ಡ್ ಕೋಸ್ಟ್ ಕ್ರೀಡಾಂಗಣ, ಕ್ಯಾರಾರಾ
ನವೆಂಬರ್ 8: ಐದನೇ ಟಿ20 ಪಂದ್ಯ– ದಿ ಗಬ್ಬಾ, ಬ್ರಿಸ್ಬೇನ್.
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಚಾನೆಲ್ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್ಸ್ಟಾರ್ ಆ್ಯಪ್ ಹಾಗೂ ವೆಬ್ಸೈಟ್ನಲ್ಲೂ ಈ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಇರಲಿದೆ.
5 ಪಂದ್ಯಗಳ ಟಿ20 ಸರಣಿಯು ಭಾರತೀಯ ಕಾಲಮಾನ ಮಧ್ಯಾಹ್ನ 1.45 ಕ್ಕೆ ಶುರುವಾಗಲಿದೆ.





