ಇಂದಿನಿಂದ ಬಾಂಗ್ಲಾ ನಡುವಿನ 2ನೇ ಟೆಸ್ಟ್: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

Date:

ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯುತ್ತಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿತ್ತು. ಇದೀಗ ಎರಡನೇ ಟೆಸ್ಟ್ ಪಂದ್ಯ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆಯಲಿದೆ.

ಇಂದು ಆರಂಭವಾಗುವ ಎರಡನೇ ಟೆಸ್ಟ್‌ಗೆ ಮಳೆಯ ಭೀತಿ ಇದೆ. ಹವಾಮಾನ ವರದಿಯ ಪ್ರಕಾರ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್‌ ಪಂದ್ಯದ ಮೊದಲ ದಿನ ಮಳೆಯಾಗುವ ಸಾಧ್ಯತೆ ಶೇಕಡಾ 92ರಷ್ಟಿದೆ. ಮಳೆಯಿಂದಾಗಿ ಒಂದು ಗಂಟೆ ಟಾಸ್‌ ಕೂಡ ವಿಳಂಬವಾಗಿದ್ದು, ಟಾಸ್‌ ಗೆದ್ದಿರುವ ಭಾರತ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದೆ.

ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಡಲಾಗಿದೆ. ಏಕೆಂದರೆ ಈ ಇಬ್ಬರೂ ಆಟಗಾರರು ಚೆನ್ನೈ ಟೆಸ್ಟ್‌ನಲ್ಲಿ ದಯನೀಯವಾಗಿ ವಿಫಲರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪ್ಯಾರಾಲಿಂಪಿಕ್ಸ್: ದಾಖಲೆಯ 29 ಪದಕಗಳನ್ನು ಗೆದ್ದ ಭಾರತ

ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶವನ್ನು 280 ರನ್ ಗಳಿಂದ ಸೋಲಿಸಿತು. ಅದರೊಂದಿಗೆ ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ ಭಾರತವು ಮೊದಲ ಬಾರಿಗೆ ಸೋಲಿಗಿಂತ ಹೆಚ್ಚು ಗೆಲುವು ದಾಖಲಿಸಿತು. ಸೆಪ್ಟೆಂಬರ್ 27ರಿಂದ ಕಾನ್ಪುರದಲ್ಲಿ ನಡೆಯಲಿರುವ ಎರಡನೇ ಟೆಸ್ಟ್‌ ಗೆಲುವಿನೊಂದಿಗೆ ಭಾರತವು ಕ್ಲೀನ್ ಸ್ವೀಪ್ ಮಾಡಲು ಎದುರು ನೋಡುತ್ತಿದೆ.

ನಿವೃತ್ತಿ ಖಚಿತಪಡಿಸಿದ ಬಾಂಗ್ಲಾ ಆಲ್‌ರೌಂಡರ್

ಬಾಂಗ್ಲಾದೇಶ ಕ್ರಿಕೆಟ್‌ ತಂಡದ ಹಿರಿಯ ಆಲ್‌ರೌಂಡರ್‌ ಶಕೀಬ್ ಅಲ್ ಹಸನ್ ಈಗಾಗಲೇ ಟಿ20 ಪಂದ್ಯಗಳಿಂದ ನಿವೃತ್ತಿ ಘೋಷಿಸಿದ್ದಾರೆ. ಇದೀಗ ಕಾನ್ಪುರದಲ್ಲಿ ನಡೆಯಲಿರುವ ಭಾರತ ವಿರುದ್ಧ ದಎರಡನೇ ಟೆಸ್ಟ್ ಪಂದ್ಯದ ಮೂಲಕ ತಮ್ಮ ಟೆಸ್ಟ್ ವೃತ್ತಿಜೀವನಕ್ಕೆ ವಿದಾಯ ಹೇಳುವ ಸುಳಿವು ನೀಡಿದ್ದಾರೆ.

“ಮೀರ್‌ಪುರದಲ್ಲಿ ನನ್ನ ಕೊನೆಯ ಟೆಸ್ಟ್ ಆಡುವ ಬಯಕೆಯನ್ನು ನಾನು ವ್ಯಕ್ತಪಡಿಸಿದ್ದೇನೆ. ಅದು ಸಾಧ್ಯವಾಗದಿದ್ದರೆ, ಭಾರತ ವಿರುದ್ಧದ ಎರಡನೇ ಟೆಸ್ಟ್ ನನ್ನ ಕೊನೆಯ ಟೆಸ್ಟ್ ಆಗಿರುತ್ತದೆ. ಬಾಂಗ್ಲಾದೇಶ ಕ್ರಿಕೆಟ್ ನನಗೆ ತುಂಬಾ ನೀಡಿದೆ. ನಾನು ಸುದೀರ್ಘ ಸ್ವರೂಪದಲ್ಲಿ ನನ್ನ ಕೊನೆಯ ಪಂದ್ಯವನ್ನು ಆಡಲು ಬಯಸುತ್ತೇನೆ” ಎಂದು ಅವರು ಹೇಳಿದ್ದಾರೆ

ಪಂದ್ಯವಾಡುವ ಉಭಯ ತಂಡಗಳು

ಭಾರತ ತಂಡ:

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೆಲ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ ಮತ್ತು ಯಶ್ ದಯಾಳ್.

ಬಾಂಗ್ಲಾದೇಶ ತಂಡ:

ನಜ್ಮುಲ್ ಹುಸೇನ್ ಶಾಂಟೊ (ನಾಯಕ), ಜಾಕಿರ್ ಹಸನ್, ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಾದ್ಮನ್ ಇಸ್ಲಾಂ, ಶಕೀಬ್ ಅಲ್ ಹಸನ್, ಮೆಹದಿ ಹಸನ್ ಮಿರಾಜ್, ಝಾಕರ್ ಅಲಿ ಅನಿಕ್, ತಸ್ಕಿನ್ ಅಹ್ಮದ್, ಲಿಟನ್ ದಾಸ್, ಹಸನ್ ಮಹಮೂದ್, ತೈಜುಲ್ ಇಸ್ಲಾಂ, ಮಹ್ಮುದುಲ್ ಹಸನ್ ಜಾಯ್, ನಹಿದ್ ರಾಣಾ, ಖಾಲಿದ್ ಅಹ್ಮದ್.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...