ಚಾಂಪಿಯನ್ಸ್ ಟ್ರೋಫಿ-IND vs BAN | ಚೊಚ್ಚಲ ಪಂದ್ಯದಲ್ಲೇ ಶುಭ್​ಮನ್ ಗಿಲ್ ಎರಡು ದಾಖಲೆ

Date:

2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಟೂರ್ನಿಯನ್ನು ಆರಂಭಿಸಿದೆ. ದುಬೈನಲ್ಲಿ ನಡೆದ ಪಂದ್ಯದಲ್ಲಿ ಭಾರತವು ಬಾಂಗ್ಲಾದೇಶವನ್ನು ಆರು ವಿಕೆಟ್‌ಗಳಿಂದ ಸೋಲಿಸಿತು.

ಮಹತ್ವದ ಈ ಗೆಲುವಿನಲ್ಲಿ ಶುಭ್​ಮನ್ ಗಿಲ್ ಅವರ ಪಾತ್ರ ಅಪಾರವಾಗಿದೆ. ತಮ್ಮ ಚೊಚ್ಚಲ ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿದ ಸಾಧನೆ ಮಾಡಿದ್ದಲ್ಲದೆ, ಐಸಿಸಿ ಟೂರ್ನಿಯಲ್ಲಿ ಮೊದಲ ಶತಕ ಬಾರಿಸಿದ ದಾಖಲೆಗೂ ಪಾತ್ರರಾಗಿದ್ದಾರೆ.

ರನ್‌ರೇಟ್‌ ದಿಢೀರ್ ಕುಸಿತದ ನಡುವೆ ತಾಳ್ಮೆಯ ಇನ್ನಿಂಗ್ಸ್ ಕಟ್ಟಿದ ಗಿಲ್ ಅಜೇಯ 101 ರನ್‌ಗಳ ಇನ್ನಿಂಗ್ಸ್‌ ಆಡಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಶತಕದೊಂದಿಗೆ ಗಿಲ್ ಅವರು ಐಸಿಸಿ ಈವೆಂಟ್‌ನಲ್ಲಿ ಮೊದಲ ಬಾರಿಗೆ ಶತಕ ಬಾರಿಸಿದ ಸಾಧನೆಯೂ ಮಾಡಿದ್ದಾರೆ. ಇದು ಅವರ ಏಕದಿನ ವೃತ್ತಿಜೀವನದ 8ನೇ ಶತಕವಾಗಿದ್ದು, ಇದಕ್ಕೂ ಮುನ್ನ ಅವರು ತಮ್ಮ ಕೊನೆಯ ಏಕದಿನ ಪಂದ್ಯದಲ್ಲಿಯೂ ಇಂಗ್ಲೆಂಡ್ ವಿರುದ್ಧವೂ ಶತಕ ಬಾರಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 125 ಎಸೆತಗಳನ್ನು ಎದುರಿಸಿದ ಗಿಲ್ 100 ರನ್ ಪೂರ್ಣಗೊಳಿಸಿದರು. ಇದರಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್‌ಗಳು ಸೇರಿವೆ. ಇಷ್ಟೇ ಅಲ್ಲ, ಗಿಲ್ ಕಳೆದ 4 ಏಕದಿನ ಇನ್ನಿಂಗ್ಸ್‌ಗಳಲ್ಲಿ 50+ ರನ್‌ಗಳ ಗಡಿಯನ್ನು ದಾಟಿದ್ದು, ಇದು ಅವರ ಉತ್ತಮ ಫಾರ್ಮ್‌ ಅನ್ನು ತೋರಿಸುತ್ತದೆ.

57 ಏಕದಿನ ಇನ್ನಿಂಗ್ಸ್‌ಗಳಲ್ಲಿ 8 ಶತಕಗಳನ್ನು ಬಾರಿಸಿದ್ದ ದಾಖಲೆ ಶಿಖರ್ ಧವನ್ ಅವರ ಹೆಸರಿನಲ್ಲಿತ್ತು. ಧವನ್‌ ದಾಖಲೆ ಮುರಿಯುವ ಮೂಲಕ ಭಾರತ ಪರ ಏಕದಿನ ಪಂದ್ಯಗಳಲ್ಲಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 8 ಶತಕಗಳನ್ನು ಬಾರಿಸಿದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಗಿಲ್ ಪಾತ್ರರಾಗಿದ್ದಾರೆ. ಗಿಲ್ 51 ಏಕದಿನ ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.

ಹಾಗೆಯೇ ಈ ಶತಕದೊಂದಿಗೆ ಶುಭ್​ಮನ್ ಗಿಲ್ ಕೂಡ ಸಚಿನ್ ತೆಂಡೂಲ್ಕರ್ ಅವರ ವಿಶೇಷ ಪಟ್ಟಿಗೆ ಸೇರಿಕೊಂಡಿದ್ದಾರೆ. ಚಾಂಪಿಯನ್ಸ್ ಟ್ರೋಫಿಯ ಚೊಚ್ಚಲ ಪಂದ್ಯದಲ್ಲೇ ಶತಕ ಗಳಿಸಿದ ನಾಲ್ಕನೇ ಭಾರತೀಯ ಎನಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ಸಚಿನ್ ತೆಂಡೂಲ್ಕರ್, ಮೊಹಮ್ಮದ್ ಕೈಫ್ ಹಾಗೂ ಶಿಖರ್ ಧವನ್ ಈ ಸಾಧನೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...