IND vs ENG 2ND Test | ಭಾರತದ ಗೆಲುವಿಗೆ ಅಡ್ಡಿಯಾದ ಮಳೆ; ಪಂದ್ಯ ತಾತ್ಕಾಲಿಕ ಸ್ಥಗಿತ

Date:

ಎಡ್ಜ್‌ಬಾಸ್ಟನ್‌ನಲ್ಲಿ ನಡೆಯುತ್ತಿರುವ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ತೀವ್ರ ಕುತೂಹಲದ ಹಂತ ತಲುಪಿದೆ. ಎರಡನೇ ಇನಿಂಗ್ಸ್‌ನಲ್ಲಿ 608 ರನ್‌ಗಳ ಬೃಹತ್‌ ಮೊತ್ತವನ್ನು ಬೆನ್ನಟ್ಟಿರುವ ಇಂಗ್ಲೆಂಡ್‌ ತಂಡ 72 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡಿದ್ದು, ಕೊನೆಯ ದಿನ 536 ರನ್‌ ಗಳಿಸಬೇಕಿದೆ. ಭಾರತ ಗೆಲುವು ಸಾಧಿಸಲು 7 ಆಂಗ್ಲ ಪಡೆಯ 7 ವಿಕೆಟ್‌ಗಳನ್ನು ಕಬಳಿಸಬೇಕಿದೆ. ಆದರೆ, ಹವಾಮಾನ ವೈಪರಿತ್ಯ ಭಾರತದ ಗೆಲುವಿಗೆ ಅಡ್ಡಿ ಆಗಬಹುದೆಂಬ ಆತಂಕ ಎದುರಾಗಿದೆ.

ಪಂದ್ಯ ಆರಂಭವಾಗುವ ಮುನ್ನವೇ ಮಳೆ ಶುರುವಾದ ಕಾರಣ 5ನೇ ಹಾಗೂ ಕೊನೆಯ ದಿನದ ಮೊದಲ ಆವೃತ್ತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪಿಚ್‌ನ ಮೇಲೆ ಹೊದಿಕೆಯನ್ನ ಹಾಸಿ 30 ನಿಮಿಷಗಳ ಕಾಲ ಪಂದ್ಯವನ್ನು ನಿಲ್ಲಿಸಲಾಗಿದ್ದು, ಭಾರತೀಯ ಕಾಲಮಾನದ ಪ್ರಕಾರ ಸಂಜೆ 4.30ರ ನಂತರ ಅಂಪೈರ್‌ಗಳು ಮೈದಾನವನ್ನು ಪರಿಶೀಲಿಸಿ ಮುಂದಿನ ನಿರ್ಧರಿಸಲಿದ್ದಾರೆ.

ಇದನ್ನು ಓದಿದ್ದೀರಾ? ಟೆಸ್ಟ್ ಕ್ರಿಕೆಟ್ | ದ್ವಿಶತಕ ಬಾರಿಸಿ ಹೊಸ ದಾಖಲೆ ಬರೆದ ಟೀಮ್ ಇಂಡಿಯಾ ನಾಯಕ ಶುಭಮನ್ ಗಿಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದ ಮೊದಲ ಇನಿಂಗ್ಸ್‌ನಲ್ಲಿ ಶುಭಮನ್‌ ಗಿಲ್ ಅವರ ಭರ್ಜರಿ ದ್ವಿಶತಕದ ನೆರವಿನಿಂದ 587 ರನ್ ಗಳಿಸಲಾಯಿತು. ಬಳಿಕ ಇಂಗ್ಲೆಂಡ್ 407 ರನ್‌ಗಳಿಗೆ ಆಲೌಟ್ ಆಯಿತು. ಎರಡನೇ ಇನಿಂಗ್ಸ್‌ನಲ್ಲಿ ಭಾರತ 427/6 ರನ್‌ಗಳಿಗೆ ಡಿಕ್ಲೇರ್ ಮಾಡಿಕೊಂಡು ಇಂಗ್ಲೆಂಡ್‌ಗೆ 608 ರನ್‌ಗಳ ಗುರಿಯನ್ನು ನೀಡಿತ್ತು. ನಾಲ್ಕನೇ ದಿನದ ಅಂತ್ಯದ ವೇಳೆಗೆ ಇಂಗ್ಲೆಂಡ್ 72 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡಿದ್ದು, ಪಂದ್ಯ ಭಾರತದ ಹಿಡಿತದಲ್ಲಿದೆ. ಆದರೆ ಮಳೆ ಬಂದಿರುವುದರಿಂದ ಪಂದ್ಯ ಆಂಗ್ಲರ ಪರ ವಾಲುವಂತೆ ಕಾಣುತ್ತಿದೆ.

ಸ್ಥಳೀಯ ಹವಾಮಾನದ ಪ್ರಕಾರ ಇಂಗ್ಲೆಂಡ್‌ನ ಕಾಲಮಾನದಲ್ಲಿ ಬೆಳಗ್ಗೆ 8 ರಿಂದ 11 ಗಂಟೆಯವರೆಗೆ ಮಳೆಯ ಸಾಧ್ಯತೆ ಶೇ. 90ರಷ್ಟಿದೆ. ಪಂದ್ಯ ಆರಂಭವು ಮಧ್ಯಾಹ್ನದವರೆಗೆ ವಿಳಂಬವಾಗಬಹುದು. ಆದರೆ, ಮಧ್ಯಾಹ್ನ 2 ಗಂಟೆ ನಂತರ ಮಳೆಯ ಪ್ರಮಾಣ ಕೇವಲ ಶೇ. 20 ರಷ್ಟು ಇರುತ್ತದೆ.ಸಂಜೆ 4 ರಿಂದ 5ರವರೆಗೆ ಮಳೆಯ ಯಾವುದೇ ಲಕ್ಷಣಗಳಿಲ್ಲ. ಮೋಡ ಮುಸುಕಿದ ವಾತಾವರಣ ಮತ್ತು ತಂಪಾದ ಹವಾಮಾನವು ಬೌಲಿಂಗ್‌ಗೆ ಅನುಕೂಲವಾಗಬಹುದು. ಆದರೆ ಪಂದ್ಯವು ಮಳೆ ನಿಲ್ಲುವುದರ ಮೇಲೆ ಅವಲಂಬಿತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...