IND – ENG 5TH TEST | ಎಂಟೂವರೆ ವರ್ಷಗಳ ಬಳಿಕ ಟೆಸ್ಟ್‌ನಲ್ಲಿ ಅರ್ಧ ಶತಕ ಬಾರಿಸಿದ ಕರುಣ್‌ ನಾಯರ್‌

Date:

ಇಂಗ್ಲೆಂಡ್‌ನ ಓವೆಲ್‌ನಲ್ಲಿ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯದಲ್ಲಿ ಕರ್ನಾಟಕದ ಆಟಗಾರ ಕರುಣ್ ನಾಯರ್‌ ಸ್ಥಿರ ಪ್ರದರ್ಶನ ನೀಡುವಲ್ಲಿ ಸಫಲರಾಗಿದ್ದಾರೆ. ಇವರು ಈ ಸರಣಿಯಲ್ಲಿ ಈ ಮೊದಲು ಸಿಕ್ಕ ಮೂರು ಅವಕಾಶಗಳಲ್ಲಿ ರನ್‌ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಆದರೆ ಓವಲ್‌ ಟೆಸ್ಟ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಅಲ್ಲದೆ ಅರ್ಧಶತಕ ಬಾರಿಸಿ ತಂಡಕ್ಕೆ ಆಧಾರವಾದರು. ಕರುಣ್‌ 98 ಎಸೆತಗಳಲ್ಲಿ 7 ಬೌಂಡರಿ ನೆರವಿನಿಂದ ಅಜೇಯ 52 ರನ್‌ ಬಾರಿಸಿದ್ದಾರೆ.

ಕರುಣ್‌ ಎಂಟೂವರೆ ವರ್ಷಗಳ ಬಳಿಕ ಅರ್ಧ ಶತಕ ಇದಕ್ಕೂ ಮೊದಲು 2016 ಡಿಸೆಂಬರ್‌ 19 ರಂದು ಚೆನ್ನೈನಲ್ಲಿ ಆರ್ಭಟ ನಡೆಸಿದ್ದರು. ಈ ಟೆಸ್ಟ್‌ ಪಂದ್ಯದಲ್ಲಿ ಕರುಣ್‌ ನಾಯರ್‌ ತ್ರಿಶತಕ ಬಾರಿಸಿ ಅಬ್ಬರಿಸಿದ್ದರು.

ಕರುಣ್‌ ನಾಯರ್‌ ಬಾರಿಸಿದ ಅರ್ಧಶತಕ ಹಾಗೂ ಆಲ್‌ರೌಂಡರ್‌ ವಾಷಿಂಗ್ಟನ್‌ ಸುಂದರ್‌ ಅವರ ಸ್ಥಿರ ಪ್ರದರ್ಶನದ ಫಲವಾಗಿ ಟೀಮ್ ಇಂಡಿಯಾ ಐದನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲ ದಿನದಾಟದ ಮುಕ್ತಾಯಕ್ಕೆ 6 ವಿಕೆಟ್‌ ಕಳೆದುಕೊಂಡು 204 ರನ್‌ ಸೇರಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮೂರು ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್‌ಗಳಿಗೆ ಇಂಗ್ಲೆಂಡ್ ಆತಿಥ್ಯ

ಐದನೇ ಟೆಸ್ಟ್‌ ಪಂದ್ಯದ ಮೊದಲ ದಿನ ಟೀಮ್ ಇಂಡಿಯಾ ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿತು. ಮಳೆ ಕೂಡ ಆಗಾಗ ಪಂದ್ಯಕ್ಕೆ ತೊಂದರೆ ನೀಡುತ್ತಿತ್ತು. ಈ ವೇಳೆ ಟೀಮ್ ಇಂಡಿಯಾದ ಆರಂಭಿಕ ಆಟಗಾರರು ಎಚ್ಚರಿಕೆಯ ಆಟಕ್ಕೆ ಮಣೆ ಹಾಕಿದರು. ಪಿಚ್‌ ವೇಗದ ಬೌಲರ್‌ಗಳಿಗೆ ನೆರವು ನೀಡುತ್ತದೆ ಎಂದೇ ಇಂಗ್ಲೆಂಡ್ ನಾಯಕ ಓಲಿ ಪೋಪ್‌ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದರು. ಇವರ ನಿರ್ಧಾರವನ್ನು ಇಂಗ್ಲೆಂಡ್ ವೇಗದ ಬೌಲರ್‌ಗಳು ಆರಂಭದಲ್ಲಿ ಸರಿ ಎಂದು ಸಾಬೀತು ಪಡಿಸಿದರು.

ಭಾರತ ತಂಡದ ಕೆಎಲ್ ರಾಹುಲ್ (14), ಯಶಸ್ವಿ ಜೈಸ್ವಾಲ್‌ (2), ಸಾಯಿ ಸುದರ್ಶನ್‌ (38), ಶುಭಮನ್‌ ಗಿಲ್‌ (21), ರವೀಂದ್ರ ಜಡೇಜಾ (9), ಧ್ರುವ್ ಜುರೇಲ್‌ (19) ದೊಡ್ಡ ಇನಿಂಗ್ಸ್‌ ಕಟ್ಟಲಿಲ್ಲ. 7ನೇ ವಿಕೆಟ್‌ಗೆ ಅರ್ಧಶತಕದ ಜೊತೆಯಾಟ ನೀಡಿರುವ ಕರುಣ್ ನಾಯರ್‌ (ಅಜೇಯ 52) ಹಾಗೂ ವಾಷಿಂಗ್ಟನ್‌ ಸುಂದರ್‌ (ಅಜೇಯ 19) ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...