ಟೆಸ್ಟ್ ಕ್ರಿಕೆಟ್: ಕೆ ಎಲ್ ರಾಹುಲ್‌ಗೆ ವಿಕೆಟ್ ಕೀಪಿಂಗ್ ಜವಾಬ್ದಾರಿಯಿಂದ ಮುಕ್ತಗೊಳಿಸಿದ ದ್ರಾವಿಡ್

Date:

ಟೀಂ ಇಂಡಿಯಾ ಕ್ರಿಕೆಟ್‌ನ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಯಿಂದ ಪ್ರಮುಖ ಆಟಗಾರ ಕೆ ಎಲ್ ರಾಹುಲ್ ಅವರಿಗೆ ವಿಕೆಟ್ ಕೀಪಿಂಗ್ ಜವಾಬ್ದಾರಿಯಿಂದ ಮುಕ್ತಗೊಳಿಸಿದ್ದಾರೆ. ಟೆಸ್ಟ್ ಸರಣಿಯಲ್ಲಿ ಬ್ಯಾಟ್ಸ್‌ಮನ್‌ ಆಗಿ ಮಾತ್ರ ಕಣಕ್ಕಿಳಿಯಲಿದ್ದಾರೆ.

ಹೈದರಾಬಾದ್‌ನಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ದ್ರಾವಿಡ್, ಈ ಸರಣಿಯಲ್ಲಿ ಕೆ ಎಲ್ ರಾಹುಲ್ ಅವರು ವಿಕೆಟ್ ಕೀಪರ್‌ ಆಗಿ ಆಡುವುದಿಲ್ಲ. ತಂಡವನ್ನು ಆಯ್ಕೆ ಮಾಡುವ ಸಂದರ್ಭದಲ್ಲಿಯೇ ಈ ಬಗ್ಗೆ ನಿರ್ಧರಿಸಿದ್ದೆವು. ನಾವು ಇನ್ನಿಬ್ಬರು ವಿಕೆಟ್ ಕೀಪರ್‌ ಅವರನ್ನುಆಯ್ಕೆ ಮಾಡಿದ್ದೇವೆ. ನಿಸ್ಸಂಶಯವಾಗಿ  ರಾಹುಲ್ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಉತ್ತಮವಾಗಿ ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾರೆ. ಸರಣಿ ಡ್ರಾ ಆಗಲು ಅವರ ಆಟ ನಮಗೆ ತುಂಬ ಸಹಾಯವಾಗಿದೆ. ಆದರೆ ಐದು ಪಂದ್ಯಗಳ ಈ ಸರಣಿಯನ್ನು ಪರಿಗಣಿಸಿದಾಗ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಇತರ ಇನ್ನಿಬ್ಬರು ಕೀಪರ್‌ಗಳು ನಿರ್ವಹಿಸಲಿದ್ದಾರೆ” ಎಂದು ತಿಳಿಸಿದರು.

ರಾಹುಲ್ ಬದಲಿಗೆ ಕೆ ಎಸ್ ಭರತ್ ಹಾಗೂ ಧ್ರವ ಜುರೆಲ್ ವಿಕೇಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತವರಿನ ಪಿಚ್‌ಗಳ ಬಗ್ಗೆ ಮಾತನಾಡಿದ ರಾಹುಲ್ ದ್ರಾವಿಡ್, ವೇಗಿಗಳಿಗೆ ಅನುಕೂಲ ತಂದುಕೊಡುವ ಬಗ್ಗೆ ನಮಗೆ ಖಚಿತವಿಲ್ಲ. ಆದರೆ ಸ್ಪಿನ್ನರ್‌ಗಳಿಗೆ ಸ್ಪಲ್ಪ ಅನುಕೂಲ ಸಾಧ್ಯತೆಯಿದೆ. ಆಟ ಪ್ರಾರಂಭವಾದ ನಂತರ ಇದರ ಬಗ್ಗೆ ತಿಳಿದುಕೊಳ್ಳುತ್ತೇವೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ದೈವಭಕ್ತಿ ಮತ್ತು ಕುಟುಂಬ ಕಲ್ಯಾಣ

ಮೊದಲ ಎರಡು ಟೆಸ್ಟ್‌ ಪಂದ್ಯಗಳಿಂದ ವಿರಾಟ್ ಕೊಹ್ಲಿ ಅಲಭ್ಯವಾಗುವ ಕಾರಣದಿಂದ ಯುವ ಆಟಗಾರ ಒಬ್ಬರು ಹೊರಹೊಮ್ಮಲು ಸಾಧ್ಯತೆಯಿದೆ ಎಂದು ದ್ರಾವಿಡ್ ತಿಳಿಸಿದ್ದಾರೆ.

ಕಳೆದ 9 ಇನಿಂಗ್ಸ್‌ಗಳಲ್ಲಿ ಶುಭ್‌ಮನ್‌ ಗಿಲ್ ಅವರ ನೀರಸ ಪ್ರದರ್ಶನದ ಬಗ್ಗೆ ಮಾತನಾಡಿದ ತಂಡದ ಮುಖ್ಯ ಕೋಚ್, ಗಿಲ್ ಅವರು ಉತ್ತಮ ಆಟಗಾರರಾಗಿದ್ದು, ಕ್ರಿಕೆಟಿಗನಾಗಿ ತಮ್ಮ ವೃತ್ತಿಯನ್ನು ಉತ್ತಮವಾಗಿ ಆರಂಭಿಸಿದ್ದಾರೆ. ಕೆಲವು ಸಂದರ್ಭದಲ್ಲಿ ನಾವು ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತೇವೆ. ಮತ್ತೆ ಕೆಲವು ಸಲ ಸಮಯ ತೆಗೆದುಕೊಳ್ಳಬೇಕಾಗುತ್ತದೆ. ಅವರು ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಉತ್ತಮವಾಗಿ ಆಟವಾಡಿದ್ದಾರೆ. ಗಿಲ್ ಕೂಡ ಹಲವು ಸವಾಲುಗಳ ನಡುವೆ ಉತ್ತಮ ಸಾಮರ್ಥ್ಯದೊಂದಿಗೆ ತಮ್ಮ ಆಟ ನಿರ್ವಹಿಸುತ್ತಿದ್ದಾರೆ. ಕಳೆದ ಋತುಗಳಲ್ಲಿ ನಮಗಾಗಿ ಶತಕಗಳನ್ನು ಸಿಡಿಸಿದ್ದರು. ಸದ್ಯ ಉತ್ತಮ ಲಯಕ್ಕೆ ಮರಳುತ್ತಿದ್ದಾರೆ” ಎಂದು ತಿಳಿಸಿದರು.

ಇಂಗ್ಲೆಂಡ್ ವಿರುದ್ದದ ಮೊದಲ ಟೆಸ್ಟ್ ನಾಳೆ (ಜ.25) ಹೈದರಾಬಾದ್‌ನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...