ಟಿ20 ವಿಶ್ವಕಪ್ ಸೆಮಿಫೈನಲ್ | ಸಂಜು ಸ್ಯಾಮ್ಸನ್‌ ಸ್ಫೋಟಕ ಆಟ; ಭಾರತ 253/7 ಬೃಹತ್ ಮೊತ್ತ

Date:

ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಇಂಗ್ಲೆಂಡ್ ಎದುರಿನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಟೀಮ್ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್‌ಗಳ ಬೃಹತ್ ಮೊತ್ತ ಕಲೆಹಾಕಿದೆ.

​ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡುವ ಇಂಗ್ಲೆಂಡ್ ತಂಡದ ನಿರ್ಧಾರವನ್ನು ಭಾರತದ ಬ್ಯಾಟರ್‌ಗಳು ಸಂಪೂರ್ಣವಾಗಿ ಸುಳ್ಳಾಗಿಸಿದರು. ಮಹತ್ವದ ಪಂದ್ಯದಲ್ಲಿ ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾದ ಭಾರತೀಯ ಬ್ಯಾಟರ್‌ಗಳು ಇಂಗ್ಲೆಂಡ್ ಬೌಲರ್‌ಗಳನ್ನು ಕಂಗೆಡಿಸುವಲ್ಲಿ ಯಶಸ್ವಿಯಾದರು.

ಕ್ರೀಸ್‌ಗೆ ಇಳಿದಾಗಿನಿಂದಲೇ ಅಬ್ಬರಿಸಿದ ಸಂಜು ಸ್ಯಾಮ್ಸನ್, ಇಂಗ್ಲೆಂಡ್ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. ಮೈದಾನದ ಎಲ್ಲ ಮೂಲೆಗಳಿಗೂ ಚೆಂಡನ್ನು ಅಟ್ಟಿದ ಅವರು 8 ಆಕರ್ಷಕ ಬೌಂಡರಿ ಹಾಗೂ 7 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 89 ರನ್ ಸಿಡಿಸಿ ಮಿಂಚಿದರು. ಕ್ರೀಡಾಭಿಮಾನಿಗಳನ್ನು ರಂಜಿಸಿದ ಅವರ ಈ ಜವಾಬ್ದಾರಿಯುತ ಹಾಗೂ ಸ್ಫೋಟಕ ಆಟ ಭಾರತದ ಬೃಹತ್ ಮೊತ್ತಕ್ಕೆ ಭದ್ರ ಬುನಾದಿ ಒದಗಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​ಸ್ಯಾಮ್ಸನ್ ಅವರ ಭರ್ಜರಿ ಆಟದ ಜೊತೆಗೆ ಮಧ್ಯಮ ಕ್ರಮಾಂಕದಲ್ಲಿ ಶಿವಂ ದುಬೆ ಕೂಡ ಬಿರುಸಿನ ಬ್ಯಾಟಿಂಗ್ ನಡೆಸಿದರು. 25 ಎಸೆತಗಳನ್ನು ಎದುರಿಸಿದ ದುಬೆ 43 ರನ್ ಗಳಿಸಿ ತಂಡದ ರನ್ ವೇಗವನ್ನು ಹೆಚ್ಚಿಸಿದರು. ಇಶಾನ್‌ ಕಿಶಾನ್‌ ಕೂಡ 18 ಚೆಂಡುಗಳಲ್ಲಿ 39 ರನ್‌ ಚಚ್ಚಿದರು.

ಉಪನಾಯಕ ಹಾರ್ದಿಕ್ ಪಾಂಡ್ಯ ಕೇವಲ 12 ಎಸೆತಗಳಲ್ಲಿ 27 ರನ್‌ ಬಾರಿಸಿದರು. ಇಂಗ್ಲೆಂಡ್ ಪರ ವೇಗಿಗಳಾದ ಸ್ಯಾಮ್ ಕರನ್ ಹಾಗೂ ಜೋಪ್ರ ಅರ್ಚರ್ ಅತ್ಯಂತ ದುಬಾರಿಯಾದರು

​ಸಂಕ್ಷಿಪ್ತ ಸ್ಕೋರ್:
ಭಾರತ: 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 253 ರನ್ (ಸಂಜು ಸ್ಯಾಮ್ಸನ್ 89, ಶಿವಂ ದುಬೆ 43, ಇಶಾನ್‌ ಕಿಶನ್‌ 39 ಹಾರ್ದಿಕ್ ಪಾಂಡ್ಯ 26)

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...