Ind vs Eng Test | ಭಾರತದ ಐದು ಶತಕ ವಿಫಲ, ಇಂಗ್ಲೆಂಡ್‌ಗೆ ರೋಚಕ ಗೆಲುವು

Date:

ಇಂಗ್ಲೆಂಡ್‌ನ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಐದು ಶತಕ ಗಳಿಸಿಯೂ ಭಾರತ ತಂಡವು ಸೋಲನುಭವಿಸಿದೆ.

ಐದು ವಿಕೆಟ್ ಅಂತರದ ಜಯ ಗಳಿಸಿರುವ ಇಂಗ್ಲೆಂಡ್, ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ. 371 ರನ್‌ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಬೆನ್ ಡಕೆಟ್ ಅಮೋಘ ಶತಕದ (149) ಬೆಂಬಲದೊಂದಿಗೆ ಇಂಗ್ಲೆಂಡ್ ರೋಚಕ ಗೆಲುವು ದಾಖಲಿಸಿತು.‌

ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್​ ಕಲೆಹಾಕಿದರೆ, ಇಂಗ್ಲೆಂಡ್ 465 ರನ್​ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 364 ರನ್​ಗಳಿಗೆ ಆಲೌಟ್ ಆದರು. ಅತ್ತ 371 ರನ್​ಗಳ ಗುರಿಯನ್ನು ಇಂಗ್ಲೆಂಡ್ 82 ಓವರ್​ಗಳಲ್ಲಿ ಚೇಸ್ ಮಾಡಿ ಭರ್ಜರಿ ಜಯ ಸಾಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ (101), ಶುಭ್​ಮನ್ (147) ಹಾಗೂ ರಿಷಭ್ ಪಂತ್ (134) ಶತಕ ಸಿಡಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಕೆಎಲ್ ರಾಹುಲ್ (137) ಹಾಗೂ ರಿಷಭ್ ಪಂತ್ (118) ಶತಕ ಬಾರಿಸಿದ್ದರು.

148 ವರ್ಷಗಳ ಟೆಸ್ಟ್‌ ಕ್ರಿಕೆಟ್ ಇತಿಹಾಸದಲ್ಲಿ ತಂಡವೊಂದು ಪಂದ್ಯವೊಂದರಲ್ಲಿ 5 ಶತಕ ಸಿಡಿಸಿರುವುದು ಕೇವಲ ಮೂರು ಬಾರಿ. ಹೀಗೆ 5 ಶತಕ ಸಿಡಿಸಿ ಅಬ್ಬರಿಸಿದ ತಂಡಗಳೆಲ್ಲವೂ ಭರ್ಜರಿ ಜಯ ಸಾಧಿಸಿದ್ದರೆ ಭಾರತ ಪಾಲಿಗೆ ಗೆಲುವಿನ ಅದೃಷ್ಟವಿಲ್ಲ.

ಪ್ರೇಕ್ಷಕರಿಗೆ ಮನರಂಜನೆ ಒದಗಿಸಿದ ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಒಟ್ಟು ಏಳು ಶತಕಗಳು ದಾಖಲಾದವು. ಅಂತಿಮ ದಿನದಾಟದಲ್ಲಿ ಬೆನ್ ಡಕೆಟ್ ಅವರ ಸೊಗಸಾದ ಶತಕ ಇಂಗ್ಲೆಂಡ್ ಗೆಲುವು ತಂದುಕೊಟ್ಟಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...