ಟಿ20 ವಿಶ್ವಕಪ್ ಫೈನಲ್: ಭಾರತ-ನ್ಯೂಜಿಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿಯಾದರೆ ನಿಯಮಗಳೇನು?

Date:

ಭಾನುವಾರ ಅಹಮದಾಬಾದ್‌ನ ಕ್ರೀಡಾಂಗಣದಲ್ಲಿ ನಡೆಯಲಿರುವ 2026ರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಬಲಿಷ್ಠ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದ್ದು, ಸೂರ್ಯಕುಮಾರ್ ಯಾದವ್ ನಾಯಕತ್ವದ ಪಡೆ ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಮೂಲಕ ಇತಿಹಾಸ ನಿರ್ಮಿಸುವ ತವಕದಲ್ಲಿದೆ.

​ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿರುವ ಭಾರತ, ಪಾಕಿಸ್ತಾನ ಮತ್ತು ಶ್ರೀಲಂಕಾ ಬಳಿಕ ಸತತ ಎರಡು ಬಾರಿ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿದ ವಿಶ್ವದ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆದರೆ, ಕಿವೀಸ್ ಪಡೆ ಅತ್ಯಂತ ಪ್ರಬಲ ಎದುರಾಳಿಯಾಗಿದ್ದು, ಈ ಹಿಂದಿನ ಟಿ20 ವಿಶ್ವಕಪ್ ಮುಖಾಮುಖಿಗಳಲ್ಲಿ ಭಾರತದ ವಿರುದ್ಧ ಇದುವರೆಗೂ ಸೋಲು ಕಂಡಿಲ್ಲ ಎಂಬುದು ಗಮನಾರ್ಹ.

​ಇಂತಹ ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಅಥವಾ ಮತ್ಯಾವುದೇ ಅನಿರೀಕ್ಷಿತ ಕಾರಣಗಳಿಂದ ಅಡ್ಡಿಯಾದರೆ ನಿಯಮಗಳೇನು ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ. ಐಸಿಸಿ ನಿಯಮಾವಳಿಗಳ ಪ್ರಕಾರ ಪಂದ್ಯದ ಸ್ವರೂಪ ಹೀಗಿರಲಿದೆ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

​ಮಳೆ ಬಂದರೆ ಏನಾಗಲಿದೆ?
​ನಿಗದಿತ ದಿನದಂದೇ ಯತ್ನ: ಮಳೆಯಿಂದಾಗಿ ಪಂದ್ಯದ ಓವರ್‌ಗಳನ್ನು ಕಡಿತಗೊಳಿಸಬೇಕಾಗಿ ಬಂದರೂ ಸಹ, ಮೊದಲ ಆದ್ಯತೆಯಾಗಿ ನಿಗದಿತ ದಿನದಂದೇ ಪಂದ್ಯವನ್ನು ಪೂರ್ಣಗೊಳಿಸಲು ಆಯೋಜಕರು ಪ್ರಯತ್ನಿಸುತ್ತಾರೆ.

ಇದನ್ನು ಓದಿದ್ದೀರಾ? ಟಿ20 ವಿಶ್ವಕಪ್‌: ಕಿವೀಸ್‌ ಫೈನಲ್‌ಗೆ, ಫಿನ್‌ ಅಲೆನ್‌ ವಿಶ್ವದಾಖಲೆಯ ಶತಕ; ಮತ್ತೆ ಮುಗ್ಗರಿಸಿದ ದ.ಆಫ್ರಿಕಾ

​ಮೀಸಲು ದಿನ: ನಿಗದಿತ ದಿನದಂದು ಪಂದ್ಯ ಪೂರ್ಣಗೊಳ್ಳದಿದ್ದರೆ, ಮೀಸಲು ದಿನದಂದು ಪಂದ್ಯ ನಡೆಯಲಿದೆ. ಪಂದ್ಯವನ್ನು ಮೊದಲಿನಿಂದ ಆರಂಭಿಸುವ ಬದಲು, ಎಲ್ಲಿ ಸ್ಥಗಿತಗೊಂಡಿತ್ತೋ ಅಲ್ಲಿಂದಲೇ ಆಟ ಮುಂದುವರಿಯಲಿದೆ.

​ಜಂಟಿ ವಿಜೇತರು: ಒಂದು ವೇಳೆ ಮೀಸಲು ದಿನದಂದೂ ಮಳೆಯಿಂದಾಗಿ ಪಂದ್ಯವನ್ನು ಪೂರ್ಣಗೊಳಿಸಲು ಸಾಧ್ಯವಾಗದಿದ್ದರೆ, ಭಾರತ ಮತ್ತು ನ್ಯೂಜಿಲೆಂಡ್ ಎರಡೂ ತಂಡಗಳನ್ನು ‘ಜಂಟಿ ವಿಜೇತ’ರೆಂದು ಘೋಷಿಸಲಾಗುತ್ತದೆ.

​ಪಂದ್ಯ ‘ಟೈ’ ಆದರೆ ಮುಂದೇನು?
​ಸೂಪರ್ ಓವರ್ ನಿಯಮ: ನಿಗದಿತ ಓವರ್‌ಗಳ ಮುಕ್ತಾಯಕ್ಕೆ ಪಂದ್ಯವು ಸಮಬಲಗೊಂಡರೆ (ಟೈ), ವಿಜೇತರನ್ನು ನಿರ್ಧರಿಸಲು ‘ಸೂಪರ್ ಓವರ್’ ಮೊರೆ ಹೋಗಲಾಗುತ್ತದೆ. ಇದರಲ್ಲಿ ಎರಡೂ ತಂಡಗಳಿಗೆ ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡಲು ತಲಾ ಒಂದು ಓವರ್ ಅವಕಾಶ ನೀಡಲಾಗುತ್ತದೆ.

​ಸತತ ಸೂಪರ್ ಓವರ್‌ಗಳು: ಒಂದು ವೇಳೆ ಸೂಪರ್ ಓವರ್ ಕೂಡ ಟೈ ಆದರೆ, ಸ್ಪಷ್ಟ ವಿಜೇತರು ಹೊರಹೊಮ್ಮುವವರೆಗೆ ಸತತವಾಗಿ ಸೂಪರ್ ಓವರ್‌ಗಳನ್ನು ಆಡಿಸಲಾಗುತ್ತದೆ.

​ಗಮನಿಸಿ: 2019ರ ಏಕದಿನ ವಿಶ್ವಕಪ್ ಫೈನಲ್‌ನ ವಿವಾದಾತ್ಮಕ ಅಂತ್ಯದ ಬಳಿಕ ಈ ನಿಯಮವನ್ನು ಬದಲಾಯಿಸಲಾಗಿದೆ. ಈ ಹಿಂದೆ, ಸೂಪರ್ ಓವರ್ ಟೈ ಆದರೆ, ಇಡೀ ಪಂದ್ಯದಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸಿದ ತಂಡವನ್ನು ವಿಜೇತರೆಂದು ಘೋಷಿಸುವ ನಿಯಮವಿತ್ತು. ಈಗ ಆ ‘ಬೌಂಡರಿ ಕೌಂಟ್’ ನಿಯಮವನ್ನು ಕೈಬಿಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...