IND v/s NZ | 462 ರನ್‌ಗೆ ಟೀಮ್-ಇಂಡಿಯಾ ಆಲ್‌ಔಟ್; ನ್ಯೂಜಿಲೆಂಡ್‌ ಗೆಲ್ಲಲು ಬೇಕಿದೆ 107 ರನ್‌

Date:

ಇಂಡಿಯಾ ಮತ್ತು ನ್ಯೂಜಿಲೆಂಡ್‌ ಕ್ರಿಕೆಟ್‌ ತಂಡಗಳ ನಡುವೆ ಟೆಸ್ಟ್‌ ಪಂದ್ಯಾವಳಿ ನಡೆಯುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲ ಟೆಸ್ಟ್‌ ಕ್ರಿಕೆಟ್‌ ನಡೆಯುತ್ತಿದ್ದು, ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ತಂಡವು 462 ರನ್‌ಗಳಿಸಿ, ಆಲ್‌ಔಟ್‌ ಆಗಿದೆ. ಮೊದಲ ಟೆಸ್ಟ್‌ನಲ್ಲಿ ನ್ಯೂಜಿಲೆಂಡ್‌ ಗೆಲ್ಲಲು 107 ರನ್‌ಗಳನ್ನು ಕಲೆ ಹಾಕಬೇಕಿದೆ.

ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 46 ರನ್‌ಗಳಿಸಿದ್ದ ಟೀಮ್ ಇಂಡಿಯಾ ಆಲ್‌ಔಟ್‌ ಆಗಿತ್ತು. ಬಳಿಕ ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್‌ ತಂಡ ಬರೋಬ್ಬರಿ 402 ರನ್‌ಗಳನ್ನು ಕಲೆಹಾಕಿತ್ತು.

ನ್ಯೂಜಿಲೆಂಡ್‌ ಭರ್ಜರಿ ರನ್‌ ಗಳಿಸಿದ್ದರಿಂದ, ಭಾರತ ತಂಡ 356 ರನ್‌ಗಳ ಹಿನ್ನಡೆ ಅನುಭವಿಸಿತ್ತು. ಇದೀಗ, ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದ ಟೀಮ್‌-ಇಂಡಿಯಾ 462 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡನೇ ಇನ್ನಿಂಗ್ಸ್‌ನಲ್ಲಿ ಸರ್ಫರಾಜ್ ಖಾನ್ (150), ರಿಷಭ್ ಪಂತ್ (99), ವಿರಾಟ್ ಕೊಹ್ಲಿ (70) ಹಾಗೂ ನಾಯಕ ರೋಹಿತ್ ಶರ್ಮಾ (52) ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ನಾಲ್ವರ ಉತ್ತಮ ಆಟದೊಂದಿಗೆ 99.3 ಓವರ್‌ಗಳಲ್ಲಿ ಭಾರತ ತಂಡ 462 ರನ್ ಗಳಿಸಿ, ಆಲ್‌ಔಟ್‌ ಆಗಿದೆ.

ಮೊದಲ ಮತ್ತು ಎರಡನೇ ಇನ್ನಿಂಗ್‌ನಲ್ಲಿ ಟೀಮ್ ಇಂಡಿಯಾ, 508 (462+46) ರನ್‌ ಕಲೆ ಹಾಕಿದೆ. ಈಗಾಗಲೇ ಮೊದಲ ಇನ್ನಿಂಗ್ಸ್‌ನಲ್ಲಿ 402 ರನ್‌ ಗಳಿಸಿರುವ ನ್ಯೂಜಿಲೆಂಡ್‌, ಮೊದಲ ಟೆಸ್ಟ್‌ ಗೆಲ್ಲಲು 107 ರನ್‌ಗಳ ಅಗತ್ಯವಿದೆ.

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸರ್ಫರಾಜ್ ಖಾನ್ ಅವರು ತಮ್ಮ ಮೊದಲ ಶತಕ ಬಾರಿಸಿದ್ದಾರೆ. ಅವರು 195 ಎಸೆತಗಳಿಗೆ 150 ರನ್‌ಗಳಿಸಿದ್ದಾರೆ. ಇನ್ನು, ರಿಷಬ್ ಪಂತ್ ಅವರು 99 ರನ್‌ಗಳಿಸಿ, ಔಟಾಗಿದ್ದು, ಶತಕ ವಂಚಿತರಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...