ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್‌ನ ಎರಡನೇ ದಿನವಾದ ಇಂದು ಭಾರತ ಮೊದಲ ಇನಿಂಗ್ಸ್‌ನಲ್ಲಿ ಭೋಜನ ವಿರಾಮದ ವೇಳೆಗೆ 45 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 138 ರನ್ ಗಳಿಸಿದ್ದು, ಇನಿಂಗ್ಸ್ ಮುನ್ನಡೆಗೆ 21 ರನ್ ಬೇಕಾಗಿದೆ.
ಈ ಟೆಸ್ಟ್‌ನಲ್ಲಿ ಸ್ಪೋಟಕ ಆಟಗಾರ ರಿಷಭ್ ಪಂತ್ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತೀಯರ ಪರವಾಗಿ ಅತೀ ಹೆಚ್ಚು ಸಿಕ್ಸರ್‌ಗಳ ದಾಖಲೆಗಳನ್ನು ಹೊಂದಿದ್ದ ಟೀಂ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಸರಿಗಟ್ಟಿದ್ದರೆ. ಸೆಹ್ವಾಗ್ 91 ಸಿಕ್ಸರ್ ದಾಖಲೆಯನ್ನು ಹೊಂದಿದ್ದರು. ಪಂತ್ 2 ಸಿಕ್ಸರ್ ಬಾರಿಸುವ ಮೂಲಕ 92 ಸಿಕ್ಸರ್‌ನೊಂದಿಗೆ ದಾಖಲೆಯನ್ನು ತಮ್ಮದಾಗಿಸಿಕೊಂಡರು.
ಇದನ್ನು ಓದಿದ್ದೀರಾ? ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಬಾಬರ್ ಅಜಂ
ಟೀಂ ಇಂಡಿಯಾ 4 ವಿಕೆಟ್ ಕಳೆದುಕೊಂಡಿದ್ದು, ಜಡೇಜಾ (11) ಮತ್ತು ವಿಕೆಟ್‌ಕೀಪರ್ ಧ್ರುವ್ ಜುರೆಲ್ (5) ಕ್ರೀಸ್‌ನಲ್ಲಿ ಉಳಿದುಕೊಂಡಿದ್ದಾರೆ. ಕೆ ಎಲ್ ರಾಹುಲ್ (39),ವಾಷಿಂಗ್ಟನ್ ಸುಂದರ್ (29),ರಿಷಬ್ ಪಂತ್ (27) ರನ್ ಗಳಿಸಿ ಔಟಾದರು. ನಾಲ್ಕು ರನ್ ಗಳಿಸಿದ್ದ ನಾಯಕ ಶುಭಮನ್ ಗಿಲ್ ಗಾಯಗೊಂಡು ನಿವೃತ್ತಿ ಹೊಂದಿದರು.
ದಕ್ಷಿಣ ಆಫ್ರಿಕಾ ಮೊದಲ ಇನಿಂಗ್ಸ್‌ನಲ್ಲಿ ಜಸ್ಪ್ರೀತ್ ಬೂಮ್ರಾ (5/27) ಮತ್ತು ಮೊಹಮ್ಮದ್ ಸಿರಾಜ್ (2/47) ಅವರ ಮಾರಕ ಬೌಲಿಂಗ್ ದಾಳಿಯಿಂದ 55 ಓವರ್‌ಗಳಲ್ಲಿ 159 ರನ್‌ಗಳಿಗೆ ಆಲೌಟ್ ಆಯಿತು.





