IND vs SA ODI: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ; ಸರಣಿ ಗೆಲ್ಲುವ ತವಕದಲ್ಲಿ ಭಾರತ

Date:

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ 2ನೇ ಏಕದಿನ ಪಂದ್ಯ ಶುರುವಾಗಿದ್ದು, ರಾಯ್​ಪುರದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಹರಿಣಗಳ ತಂಡದ ನಾಯಕ ತೆಂಬಾ ಬವುಮಾ ಟೀಂ ಇಂಡಿಯಾಗೆ ಬ್ಯಾಟಿಂಗ್‌ ಆಹ್ವಾನಿಸಿದ್ದಾರೆ.

ಭಾರತ ಏಕದಿನ ತಂಡದ ನಾಯಕ ಶುಭ್​ಮನ್ ಗಿಲ್ ಕುತ್ತಿಗೆ ನೋವಿನ ಸಮಸ್ಯೆಯಿಂದ ಬಳಲುತ್ತಿರುವ ಕಾರಣದಿಂದ ಈ ಪಂದ್ಯದಲ್ಲೂ ಟೀಮ್ ಇಂಡಿಯಾವನ್ನು ಕನ್ನಡಿಗ ಕೆ ಎಲ್ ರಾಹುಲ್ ಮುನ್ನಡೆಸುತ್ತಿದ್ದಾರೆ.

ಎರಡನೇ ಪಂದ್ಯವು ದಕ್ಷಿಣ ಆಫ್ರಿಕಾ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಪಂದ್ಯದಲ್ಲೂ ಟೀಮ್ ಇಂಡಿಯಾ ಗೆದ್ದರೆ 2-0 ಅಂತರದಿಂದ ಸರಣಿ ವಶಪಡಿಸಿಕೊಳ್ಳಲಿದೆ. ಹೀಗಾಗಿ ಇಂದಿನ ಪಂದ್ಯ ಗೆದ್ದು ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಾದ ಅನಿವಾರ್ಯತೆ ದಕ್ಷಿಣ ಆಫ್ರಿಕಾ ತಂಡಕ್ಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಂಚಿಯಲ್ಲಿ ನಡೆದ ದಕ್ಷಿಣ ಆಫ್ರಿಕಾ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಆಕರ್ಷಕ 135 ರನ್ ಸಿಡಿಸುವ ಮೂಲಕ ಆಯ್ಕೆ ಸಮಿತಿ ಹಾಗೂ ಗೌತಮ್ ಗಂಭೀರ್ ಅವರ ಪ್ರಶ್ನೆಗಳಿಗೆ ಬ್ಯಾಟ್‌ನಿಂದಲೇ ಉತ್ತರ ನೀಡಿದ್ದರು. ಕೊಹ್ಲಿ ರನ್ ಗಳಿಸುವ ರೀತಿ, ಬೌಂಡರಿ ಗಳಿಸುವ ರೀತಿ ಯುವಕರನ್ನು ನಾಚಿಸುವಂತಿತ್ತು. ಇನ್ನು ಮಾಜಿ ನಾಯಕ ರೋಹಿತ್ ಶರ್ಮಾ ಕೂಡಾ ಅದ್ಭುತ ಅರ್ಧಶತಕ ಸಿಡಿಸಿ ಮಿಂಚಿದ್ದರು.

ಇದನ್ನು ಓದಿದ್ದೀರಾ? ರಾಂಚಿಯಲ್ಲಿ ರನ್ ಮಳೆ, ದಾಖಲೆಗಳ ಸುರಿಮಳೆ: ರೋಹಿತ್, ಕೊಹ್ಲಿ, ಕುಲದೀಪ್ ಐತಿಹಾಸಿಕ ಸಾಧನೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನದ ಹೊರತಾಗಿಯೂ ಟೀಂ ಇಂಡಿಯಾ, ಮೊದಲ ಪಂದ್ಯದಲ್ಲಿ ಕೆಲವು ಪ್ರಶ್ನೆಗಳಿಗೆ ಉತ್ತರ ಕಂಡುಕೊಂಡಿಲ್ಲ. ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಋತುರಾಜ್ ಗಾಯಕ್ವಾಡ್ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ವಿಫಲವಾಗಿದ್ದರು. ಈ ಪಂದ್ಯದಲ್ಲಿ ಅವರು ಉತ್ತಮ ಅವಕಾಶ ನೀಡಬೇಕಿದೆ

ಇನ್ನು ರಾಂಚಿಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‌ಗಳು, ಹರಿಣಗಳ ಬಾಲಂಗೋಚಿಗಳ ವಿಕೆಟ್ ಕಬಳಿಸಲು ತಿಣುಕಾಡಿದ್ದರು. ಪ್ರಸಿದ್ದ್ ಕೃಷ್ಣ ಹಾಗೂ ವಾಷಿಂಗ್ಟನ್ ಸುಂದರ್ ಪರಿಣಾಮಕಾರಿ ದಾಳಿ ನಡೆಸಲು ವಿಫಲವಾಗಿದ್ದರು. ಟೀಂ ಇಂಡಿಯಾ ಬೌಲಿಂಗ್‌ನಲ್ಲಿ ಸುಧಾರಿತ ಪ್ರದರ್ಶನ ತೋರಬೇಕಿದೆ.

ಪದ್ಯವಾಡುವ ಉಭಯ ತಂಡಗಳು:

ಭಾರತ: ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಕೆ ಎಲ್ ರಾಹುಲ್ (ನಾಯಕ), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲ್‌ದೀಪ್‌ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ.

ದಕ್ಷಿಣ ಆಫ್ರಿಕಾ: ತೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಐಡೆನ್ ಮಾರ್ಕ್ರಾಮ್ , ಮ್ಯಾಥ್ಯೂ ಬ್ರೀಟ್ಝ್​​ಕೆ, ಟೋನಿ ಡಿ ಝೋರ್ಝಿ, ಡೆವಾಲ್ಡ್ ಬ್ರೆವಿಸ್, ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್, ನಾಂಡ್ರೆ ಬರ್ಗರ್, ಲುಂಗಿ ಎನ್​ಗಿಡಿ, ಕೇಶವ್ ಮಹಾರಾಜ್.

ಪಂದ್ಯದ ಆರಂಭ : ಮಧ್ಯಾಹ್ನ 1.30

ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್ ಹಾಗೂ ಜಿಯೋ ಹಾಟ್‌ ಸ್ಟಾರ್‌ ಒಟಿಟಿ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...