‘ಚಿನ್ನಸ್ವಾಮಿ’ಯಲ್ಲಿ ಮಹಿಳೆಯರ ಕಮಾಲ್: 4 ಶತಕಗಳು ದಾಖಲಾದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ

Date:

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಕ್ರಿಕೆಟ್‌ ಪ್ರೇಮಿಗಳಿಗೆ ಮನರಂಜನೆಯ ರಸದೌತಣ. ಸಿಕ್ಸರ್‌, ಬೌಂಡರಿ ಬಾರಿಸುವುದರಲ್ಲಿ ತಾವು ಪುರುಷರನ್ನು ಮೀರಿಸುತ್ತೇವೆ ಎಂಬುದನ್ನು ಮಹಿಳಾ ಬ್ಯಾಟರುಗಳು ತೋರಿಸಿಕೊಟ್ಟರು. ದಕ್ಷಿಣ ಆಫ್ರಿಕಾ ವಿರುದ್ಧದ ರೋಚಕ ಹಣಾಹಣಿಯ ಪಂದ್ಯದಲ್ಲಿ ಭಾರತದ ವನಿತೆಯರು 4 ರನ್‌ಗಳ ಅಂತರದಲ್ಲಿ ಜಯಗಳಿಸಿದರು. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ 2-0 ಮೂಲಕ ಗೆಲುವು ದಾಖಲಿಸಿತು.

ಒಂದೇ ಪಂದ್ಯದಲ್ಲಿ ತಲಾ ಎರಡು ಶತಕಗಳಂತೆ ಉಭಯ ತಂಡಗಳಿಂದ ನಾಲ್ಕು ಶತಕಗಳು ದಾಖಲಾಯಿತು. ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಹಾಗೂ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಶತಕದ ಮೂಲಕ ಅಬ್ಬರಿಸಿದರೆ, ಪಂದ್ಯ ಸೋತರೂ ದಕ್ಷಿಣ ಆಫ್ರಿಕಾ ಪರ ನಾಯಕಿ ಲೌರಾ ವೋಲ್ವರ್ಡ್ಸ್ ಹಾಗೂ ಮರಿಜಾನ್ನೆ ಕಪ್‌ ಸ್ಫೋಟಕ ಶತಕ ಬಾರಿಸಿ ಪ್ರೇಕ್ಷಕರ ಗಮನಸೆಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದ ವನಿತೆಯರು ನೀಡಿದ 326 ರನ್‌ಗಳ ಸವಾಲನ್ನು ಬೆನ್ನಟ್ಟಿದ ದಕ್ಷಿಣ ಅಫ್ರಿಕಾ 50 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 321 ರನ್‌ಗಳಿಸಿ ಗೆಲುವನ್ನು ಕೊನೆಯ ಕ್ಷಣದಲ್ಲಿ ಕೈಚೆಲ್ಲಿತು.

ದಕ್ಷಿಣ ಆಫ್ರಿಕಾ ಪರ ನಾಯಕಿ ಲೌರಾ ವೋಲ್ವರ್ಡ್ಸ್ 135 ಚೆಂಡುಗಳಲ್ಲಿ 12 ಬೌಂಡರಿ ಹಾಗೂ 3 ಸಿಕ್ಸರ್‌ ಸಹಿತ 135 ಬಾರಿಸಿದರೆ, ಮಧ್ಯಮ ಕ್ರಮಾಂಕದ ಆಟಗಾರ್ತಿ ಮರಿಜಾನ್ನೆ ಕಪ್‌ 94 ಎಸೆತಗಳಲ್ಲಿ 11 ಬೌಂಡರಿ, 3 ಸಿಕ್ಸರ್‌ ಸಿಡಿಸಿ 114 ರನ್‌ ಸ್ಫೋಟಿಸಿದರು.

ಈ ಸುದ್ದಿ ಓದಿದ್ದೀರಾ? ಗೌತಮ್ ಗಂಭೀರ್ ಬೇಡಿಕೆಗಳಿಗೆ ಬಿಸಿಸಿಐ ಒಪ್ಪಿಗೆ: ಟೀಂ ಇಂಡಿಯಾ ಕೋಚ್ ಸ್ಥಾನ ಬಹುತೇಕ ಖಚಿತ

ಕೊನೆಯ ಓವರ್‌ನಲ್ಲಿ ಬೌಲಿಂಗ್‌ ಮಾಡಿ 2 ವಿಕೆಟ್‌ ಕಬಳಿಸಿದ ಪೂಜಾ ವಸ್ತ್ರಾಕರ್‌ ಗೆಲುವಿನ ರೂವಾರಿಯಾದರು. ಇನ್ನುಳಿದಂತೆ ದೀಪ್ತಿ ಶರ್ಮಾ 56/2 ಹಾಗೂ ಸ್ಮೃತಿ ಮಂದಾನಾ ಹಾಗೂ ಅರುಂದತಿ ರೆಡ್ಡಿ ತಲಾ ಒಂದು ವಿಕೆಟ್ ಕಿತ್ತರು.

ಸ್ಮೃತಿ ಮಂದಾನ ದಾಖಲೆ

ಭಾರತ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಮಂದಾನ ಜೊತೆಗೆ ನಾಯಕಿ ಹರ್ಮನ್ ಪ್ರೀತ್ ಕೌರ್ ಕೂಡ ಭರ್ಜರಿ ಶತಕ ಸಿಡಿಸಿದರು. ಕೌರ್ 88 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಸಹಿತ ಅಜೇಯ 103 ರನ್‌ಗಳಿಸಿದರು. ಇವರಿಗೆ ಜೊತೆ ನೀಡಿದ ರಿಚಾ ಘೋಷ್ ಕೇವಲ 13 ಎಸೆತಗಳಲ್ಲಿ 3 ಬೌಂಡರಿ ಒಂದು ಸಿಕ್ಸರ್ ಸಹಿತ ಅಜೇಯ 25, ಶೆಫಾಲಿ ವರ್ಮಾ 20, ಹೇಮಲತಾ 24 ರನ್‌ ಬಾರಿಸಿದರು. ಅಂತಿಮವಾಗಿ ಭಾರತ ತಂಡ 50 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 325 ರನ್‌ ಗಳಿಸಿ ಸವಾಲಿನ ಗುರಿ ನೀಡಿತು.

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಮೊದಲ ಎರಡು ಪಂದ್ಯಗಳಲ್ಲೂ ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಸ್ಮೃತಿ ಮಂದಾನ ಸತತ ಎರಡು ಏಕದಿನ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಆ ಮೂಲಕ ಭಾರತ ಮಹಿಳಾ ತಂಡದ ಪರ ಅತ್ಯಧಿಕ ಶತಕ ಸಿಡಿಸಿದವರ ಪಟ್ಟಿಯಲ್ಲಿ ಜಂಟಿಯಾಗಿ ಅಗ್ರಸ್ಥಾನ ಪಡೆದಿದ್ದಾರೆ.

ಸತತ 2 ಶತಕ ಸಿಡಿಸಿದ ದಾಖಲೆ ಜೊತೆಗೆ ದ್ವಿಪಕ್ಷೀಯ ಸರಣಿಯೊಂದರಲ್ಲಿ 2 ಶತಕ ಸಿಡಿಸಿದ ಮೊದಲ ಭಾರತ ಮಹಿಳಾ ಕ್ರಿಕೆಟರ್ ಎಂಬ ದಾಖಲೆಯನ್ನ ಕೂಡ ಮಂದಾನ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಅಲ್ಲದೆ 136 ಮಂದಾನರ ಏಕದಿನ ಕ್ರಿಕೆಟ್‌ನ ಗರಿಷ್ಠ ಸ್ಕೋರ್ ಆಗಿದೆ.

ಎರಡನೇ ಏಕದಿನ ಪಂದ್ಯದಲ್ಲಿ 120 ಎಸೆತಗಳಲ್ಲಿ 18 ಬೌಂಡರಿ, 2 ಸಿಕ್ಸರ್ ಸಹಿತ 136 ರನ್ ಗಳಿಸಿದ್ದಾರೆ. ಮೊದಲ ಏಕದಿನ ಪಂದ್ಯದಲ್ಲಿ 127 ಎಸೆತಗಳಲ್ಲಿ 12 ಬೌಂಡರಿ, 1 ಸಿಕ್ಸರ್ ಸಹಿತ 117 ರನ್ ಗಳಿಸಿದ್ದರು

ದಕ್ಷಿಣ ಆಫ್ರಿಕಾ ಬೌಲರ್‌ಗಳಿಗೆ ಬೆವರಿಳಿಸಿದ ಸ್ಮೃತಿ, ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ 7 ಶತಕ ಪೂರೈಸಿ ಮಿಥಾಲಿ ರಾಜ್ ದಾಖಲೆ ಸರಿಗಟ್ಟಿದ್ದಾರೆ. ಮಿಥಾಲಿ ಕೂಡ 7 ಶತಕ ಬಾರಿಸಿದ ದಾಖಲೆ ಹೊಂದಿದ್ದಾರೆ.

ಮಿಥಾಲಿ 232 ಪಂದ್ಯಗಳಲ್ಲಿ ಏಳು ಶತಕ ಸಿಡಿಸಿದ್ದರು, ಆದರೆ ಸ್ಮೃತಿ 83 ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಾರೆ. ಮಹಿಳಾ ಏಕದಿನ ಕ್ರಿಕೆಟ್ನಲ್ಲಿ ಹೆಚ್ಚು ಶತಕ ಸಿಡಿಸಿದ ದಾಖಲೆ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟರ್ ಮೆಗ್ ಲ್ಯಾನಿಂಗ್ ಹೆಸರಿನಲ್ಲಿದೆ. ಲ್ಯಾನಿಂಗ್ 103 ಪಂದ್ಯಗಳಲ್ಲಿ 15 ಶತಕ ಸಿಡಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...