ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್ | 173 ರನ್‌ಗಳ ಹಿನ್ನಡೆಯೊಂದಿಗೆ ಭಾರತ ಆಲೌಟ್; ರಹಾನೆ, ಶಾರ್ದುಲ್‌ ಅರ್ಧ ಶತಕ

Date:

ಆಸ್ಟ್ರೇಲಿಯ ವೇಗದ ಬೌಲರ್‌ಗಳ ದಾಳಿಗೆ ಸಿಲುಕಿದ ಭಾರತ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 296 ರನ್‌ಗಳಿಗೆ ಆಲೌಟ್‌ ಆಗಿ 173 ರನ್‌ಗಳ ಹಿನ್ನಡೆ ಅನುಭವಿಸಿದೆ.

ಇಂಗ್ಲೆಂಡ್‌ನ ಓವಲ್‌ನಲ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಟೆಸ್ಟ್‌ ವಿಶ್ವ ಚಾಂಪಿಯನ್‌ಷಿಪ್‌ ಟೂರ್ನಿಯ ಫೈನಲ್ ಪಂದ್ಯದ ಮೂರನೇ ದಿನದಾಟದಲ್ಲಿ ಭಾರತ ತಂಡವು 69.4 ಓವರ್‌ಗಳಲ್ಲಿ 296 ರನ್‌ಗಳಿಗೆ ತನ್ನ ಎಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.

138 ರನ್‌ಗಳಿಗೆ 5 ವಿಕೆಟ್‌ ಕಳೆದುಕೊಂಡು ಮೂರನೇ ದಿನದಾಟ ಆರಂಭಿಸಿದ ಭಾರತ ತಂಡಕ್ಕೆ ಅನುಭವಿ ಆಟಗಾರ ಅಜಿಂಕ್ಯ ರಹಾನೆ ಹಾಗೂ ಆಲ್‌ರೌಂಡರ್‌ ಶಾರ್ದುಲ್ ಠಾಕೂರ್‌ ಅವರ ಅರ್ಥ ಶತಕದ ನೆರವಿನಿಂದ ಗೌರವಾನ್ವಿತ ಮೊತ್ತ ಗಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡನೇ ದಿನದಾಟದಲ್ಲಿ ರವೀಂದ್ರ ಜಡೇಜಾ (48) ಜೊತೆಗೂಡಿ 5ನೇ ವಿಕೆಟ್‌ಗೆ 100 ಎಸೆತಗಳಲ್ಲಿ 71 ರನ್‌ಗಳ ಜೊತೆಯಾಟವಾಡಿದ ಅಜಿಂಕ್ಯ ರಹಾನೆ, ಮೂರನೇ ದಿನದಂದು 7ನೇ ವಿಕೆಟ್‌ಗೆ ಆಲ್‌ರೌಂಡರ್‌ ಶಾರ್ದುಲ್ ಠಾಕೂರ್‌ ಜೊತೆಗೂಡಿ 109 ರನ್‌ಗಳ ಜೊತೆಯಾಟವಾಡಿದರು. ಈ ಮೂಲಕ ಭಾರತ ತಂಡದ ಮೊತ್ತವನ್ನು 250ರ ಗಡಿ ದಾಟುವಂತೆ ಮಾಡಿದರು. ಇವರಿಬ್ಬರ ಜೊತೆಯಾಟವು  ಟೆಸ್ಟ್‌ ಚಾಂಪಿಯನ್‌ಶಿಪ್ ಫೈನಲ್ ಫೈನಲ್ ಇತಿಹಾಸದಲ್ಲಿ ಭಾರತದ ಪರ ಮೂಡಿಬಂದ ಮೊದಲ ಶತಕದ ಜೊತೆಯಾಟವಾಗಿ ದಾಖಲೆ ಪುಟ ಸೇರಿದೆ.

62ನೇ ಓವರ್‌ನ ಕೊನೆಯ ಎಸೆತದಲ್ಲಿ ರಹಾನೆ 89 ರನ್‌ ಗಳಿಸಿದ್ದಾಗ ಆಸಿಸ್‌ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್‌ನಲ್ಲಿ ಬಿರುಸಿನ ಹೊಡತಕ್ಕೆ ಪ್ರಯತ್ನಿಸಿ ಗ್ರೀನ್‌ಗೆ ಕ್ಯಾಚ್‌ ನೀಡಿದರು. ಅವರ 129 ಚೆಂಡುಗಳ ಮನೋಮೋಹಕ ಆಟದಲ್ಲಿ 11 ಆಕರ್ಷಕ ಬೌಂಡರಿ ಹಾಗೂ ಒಂದು ಭರ್ಜರಿ ಸಿಕ್ಸರ್‌ ಒಳಗೊಂಡಿದ್ದವು.

ಈ ಸುದ್ದಿ ಓದಿದ್ದೀರಾ? ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ | 469 ರನ್‌ಗಳಿಗೆ ಆಸ್ಟ್ರೇಲಿಯಾ ಆಲೌಟ್‌

ಇವರ ನಂತರ ಬಂದ ಬೌಲರ್‌ ಉಮೇಶ್‌ ಯಾದವ್‌(5) ಕೂಡ ಹೆಚ್ಚು ಹೊತ್ತು ನಿಲ್ಲಲಿಲ್ಲ. ಮೊಹಮ್ಮದ್ ಶಮಿ ಕೂಡ 13 ರನ್‌ ಗಳಿಸಿ ಪೆವಿಇಯನ್‌ಗೆ ತೆರಳಿದರು. ಅರ್ಧ ಶತಕ ಪೂರೈಸಿದ ಶಾರ್ದುಲ್ ಠಾಕೂರ್‌ (51) ಗ್ರೀನ್‌ ಬೌಲಿಂಗ್‌ನಲ್ಲಿ ಔಟಾಗುವುದರೊಂದಿಗೆ ಭಾರತದ ಇನ್ನಿಂಗ್ಸ್ ಮುಕ್ತಾಯವಾಯಿತು. 109 ಎಸೆತಗಳನ್ನು ಎದುರಿಸಿದ  ಶಾರ್ಧೂಲ್‌ 6 ಬೌಂಡರಿಗಳನ್ನು ಸಿಡಿಸಿದರು.

ಆಸ್ಟ್ರೇಲಿಯಾ ಪರ ಪ್ಯಾಟ್ ಕಮಿನ್ಸ್ 83/3, ಮಿಚಲ್‌ ಸ್ಟಾರ್ಕ್‌ 71/2, ಸ್ಕಾಟ್‌ ಬೊಲಾಂಡ್ 59/2 ಹಾಗೂ ಕ್ಯಾಮರಾನ್‌ ಗ್ರೀನ್‌ 44/2 ವಿಕೆಟ್‌ ಕಬಳಿಸಿ ಯಶಸ್ವಿ ಬೌಲರ್‌ ಎನಿಸಿದರು.

5 ಸಾವಿರ ಟೆಸ್ಟ್‌ ರನ್ ಪೂರೈಸಿದ ರಹಾನೆ
ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಭಾರತ ಟೆಸ್ಟ್‌ ತಂಡಕ್ಕೆ ವಾಪಸ್‌ ಮಾಡಿರುವ ಅನುಭವಿ ಆಟಗಾರ ಅಜಿಂಕ್ಯ ರಹಾನೆ, ದಿಟ್ಟ ಬ್ಯಾಟಿಂಗ್‌ ನಡೆಸಿ ಟೆಸ್ಟ್‌ ವೃತ್ತಿ ಜೀವನವನ್ನು ಸ್ಮರಣೀಯವನ್ನಾಗಿಸಿಕೊಂಡಿದ್ದಾರೆ. ತಮ್ಮ ವೃತ್ತಿಬದುಕಿನ 83ನೇ ಟೆಸ್ಟ್‌ ಪಂದ್ಯದಲ್ಲಿ 5 ಸಾವಿರ ರನ್‌ಗಳ ಗಡಿ ದಾಟಿದ ಸಾಧನೆಯನ್ನು ಪೂರೈಸಿದರು.

ಆಸ್ಟ್ರೇಲಿಯಾಕ್ಕೆ ಆರಂಭಿಕ ಆಘಾತ

ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾಕ್ಕೆ ಭಾರತದ ವೇಗದ ಬೌಲರ್‌ ಮೊಹಮ್ಮದ್ ಸಿರಾಜ್‌ ಆರಂಭಿಕ ಆಘಾತ ನೀಡಿದರು. ನಾಲ್ಕನೇ ಓವರ್‌ನಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್‌ ವಾರ್ನರ್‌ರನ್ನು(1) ಔಟ್‌ ಮಾಡಿ ಪೆವಿಲಿಯನ್‌ಗೆ ಕಳಿಸಿದರು. ಉಸ್ಮಾನ್‌ ಖವಾಜ(7) ಹಾಗೂ ಮಾರ್ನಸ್‌ ಲಾಬುಶೇನ್‌ (3) ಆಟವಾಡುತ್ತಿದ್ದಾರೆ. ಆಸ್ಟ್ರೇಲಿಯ 9 ಓವರ್‌ಗಳಲ್ಲಿ ಒಂದು ವಿಕೆಟ್‌ ನಷ್ಟಕ್ಕೆ 19 ರನ್‌ ಗಳಿಸಿದೆ.   

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...