ಬಹುನಿರೀಕ್ಷಿತ ಟಿ20 ವಿಶ್ವಕಪ್ 2026ರ ಫೆಬ್ರವರಿ 7 ರಿಂದ ಶುರುವಾಗಲಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 4 ಗ್ರೂಪ್ಗಳಾಗಿ ವಿಂಗಡಿಸಲಾಗಿದೆ. ಗ್ರೂಪ್-1 ರಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಕಾಣಿಸಿಕೊಂಡಿದೆ.
ಪಾಕಿಸ್ತಾನ ಅಲ್ಲದೆ ಟೀಮ್ ಇಂಡಿಯಾ ಮೊದಲ ಸುತ್ತಿನಲ್ಲಿ ಯುಎಸ್ಎ, ನಮೀಬಿಯಾ ಮತ್ತು ನೆದರ್ಲೆಂಡ್ಸ್ ತಂಡಗಳನ್ನು ಎದುರಿಸಲಿದೆ.
ಟಿ20 ವಿಶ್ವಕಪ್ 2026 ಭಾರತದ ವೇಳಾಪಟ್ಟಿ:
ಫೆಬ್ರವರಿ 7: ಭಾರತ vs ಯುಎಸ್ಎ- (ಮುಂಬೈ)
ಫೆಬ್ರವರಿ 12: ಭಾರತ vs ನಮೀಬಿಯಾ- (ದೆಹಲಿ)
ಫೆಬ್ರವರಿ 15: ಭಾರತ vs ಪಾಕಿಸ್ತಾನ- (ಕೊಲಂಬೊ)
ಫೆಬ್ರವರಿ 18: ಭಾರತ vs ನೆದರ್ಲೆಂಡ್ಸ್- (ಅಹಮದಾಬಾದ್)
ಈ ನಾಲ್ಕು ಪಂದ್ಯಗಳ ಬಳಿಕ ಟೀಮ್ ಇಂಡಿಯಾ ಸೂಪರ್-8 ಸುತ್ತಿನಲ್ಲಿ ಕಣಕ್ಕಿಳಿಯಲಿದೆ. ಅಂದರೆ 4 ಗ್ರೂಪ್ಗಳ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಮುಂದಿನ ಹಂತಕ್ಕೆ ಅರ್ಹತೆ ಪಡೆಯಲಿದೆ. ಅದರಂತೆ ಮೊದಲ ಸುತ್ತಿನ ಬಳಿಕ ಸೂಪರ್-8 ಹಂತದ ಮುಖಾಮುಖಿ ಶುರುವಾಗಲಿದೆ. ಸೂಪರ್-8 ಅಂಕ ಪಟ್ಟಿಯಲ್ಲಿ ಟಾಪ್-4 ನಲ್ಲಿ ಕಾಣಿಸಿಕೊಳ್ಳುವ ನಾಲ್ಕು ತಂಡಗಳು ಸೆಮಿಫೈನಲ್ಗೆ ಅರ್ಹತೆ ಪಡೆಯಲಿದೆ.
ಇದನ್ನು ಓದಿದ್ದೀರಾ? Ashes ಸರಣಿ | ಟ್ರಾವಿಸ್ ಹೆಡ್ ಭರ್ಜರಿ ಶತಕ; ಇಂಗ್ಲೆಂಡ್ ವಿರುದ್ಧ ಆಸೀಸ್‌ಗೆ 8 ವಿಕೆಟ್ ಜಯ
ಸೆಮಿಫೈನಲ್ ಪಂದ್ಯ ನಡೆಯುವುದು ಎಲ್ಲಿ?
ಸೆಮಿಫೈನಲ್ ಪಂದ್ಯಗಳಿಗೆ ಮುಂಬೈ ಮತ್ತು ಕೊಲ್ಕತ್ತಾ ನಗರಗಳನ್ನು ಆಯ್ಕೆ ಮಾಡಲಾಗಿದೆ. ಒಂದು ವೇಳೆ ಪಾಕಿಸ್ತಾನ ತಂಡವು ಸೆಮಿಫೈನಲ್ಗೆ ಪ್ರವೇಶಿಸಿದರೆ ಆ ಪಂದ್ಯವನ್ನು ಕೊಲಂಬೊದಲ್ಲಿ ಆಡಲಾಗುತ್ತದೆ. ಇದರಿಂದ ಕೊಲ್ಕತ್ತಾದ ಸೆಮಿಫೈನಲ್ ಆತಿಥ್ಯ ಕೈ ತಪ್ಪಬಹುದು.
ಫೈನಲ್ ಪಂದ್ಯ?
ಟಿ20 ವಿಶ್ವಕಪ್ 2026ರ ಫೈನಲ್ ಪಂದ್ಯವು ಮಾರ್ಚ್ 8 ರಂದು ಅಹಮದಾಬಾದ್ನ ಸ್ಟೇಡಿಯಂನಲ್ಲಿ ಜರುಗಲಿದೆ. ಅತ್ತ ಪಾಕಿಸ್ತಾನ ತಂಡವು ಫೈನಲ್ಗೇರಿದರೆ ಅಂತಿಮ ಹಣಾಹಣಿ ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದೆ.
ಟಿ20 ವಿಶ್ವಕಪ್ನ 4 ಗ್ರೂಪ್ಗಳು:
ಗ್ರೂಪ್- 1
ಭಾರತ
ಪಾಕಿಸ್ತಾನ
ಯುಎಸ್ಎ
ನಮೀಬಿಯಾ
ನೆದರ್ಲೆಂಡ್ಸ್
ಗ್ರೂಪ್-2
ಆಸ್ಟ್ರೇಲಿಯಾ
ಶ್ರೀಲಂಕಾ
ಜಿಂಬಾಬ್ವೆ
ಐರ್ಲೆಂಡ್
ಒಮಾನ್
ಗ್ರೂಪ್-3
ಇಂಗ್ಲೆಂಡ್
ವೆಸ್ಟ್ ಇಂಡೀಸ್
ಇಟಲಿ
ಬಾಂಗ್ಲಾದೇಶ
ನೇಪಾಳ
ಗ್ರೂಪ್-4
ದಕ್ಷಿಣ ಆಫ್ರಿಕಾ
ನ್ಯೂಜಿಲೆಂಡ್
ಅಫ್ಘಾನಿಸ್ತಾನ
ಯುಎಇ
ಕೆನಡಾ





