ಬಾಂಗ್ಲಾ ವಿರುದ್ಧ ಟಿ20 ಸರಣಿ: ಭಾರತಕ್ಕೆ 7 ವಿಕೆಟ್ ಜಯ

Date:

ಪ್ರವಾಸಿ ಬಾಂಗ್ಲಾದೇಶ ವಿರುದ್ಧದ 3 ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿಯಲ್ಲಿ ಶುಭಾರಂಭ ಮಾಡಿದೆ. ಇಲ್ಲಿನ ನೂತನ ಮಾಧವ್‌ರಾವ್‌ ಸಿಂಧಿಯಾ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಭಾನುವಾರ (ಅ.6) ನಡೆದ ಪಂದ್ಯದಲ್ಲಿ ಎಲ್ಲ ವಿಭಾಗಗಳಲ್ಲಿ ಮಿಂಚಿನ ಆಟವಾಡಿ ಪ್ರವಾಸಿಗರ ವಿರುದ್ಧ ಭಾರತ ಟಿ20 ತಂಡ 7 ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ.

14 ವರ್ಷಗಳ ಬಳಿಕ ಮಧ್ಯ ಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದ ಮೊದಲ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಆತಿಥೇಯ ಟೀಮ್ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿತು. ಈ ಮೂಲಕ ಮೂರು ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿಯಲ್ಲಿ ಸೂರ್ಯಕುಮಾರ್‌ ಯಾದವ್‌ ಸಾರಥ್ಯದ ಭಾರತ ತಂಡ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ.

ಟಾಸ್‌ ಗೆದ್ದ ಭಾರತ ತಂಡ ಎದುರಾಳಿ ಬಾಂಗ್ಲಾದೇಶ ತಂಡವನ್ನು ಮೊದಲು ಬ್ಯಾಟ್‌ ಮಾಡುವಂತೆ ಆಹ್ವಾನಿಸಿತು. ನಾಯಕ ನಜ್ಮುಲ್‌ ಹುಸೇನ್‌ ಶಾಂತೊ (27) ಮತ್ತು ಆಲ್‌ರೌಂಡರ್‌ ಮೆಹ್ದಿ ಹಸನ್‌ ಮಿರಾಜ್‌ (35) ಅವರಿಂದ ಮೂಡಿಬಂದ ಅಲ್ಪ ಹೋರಾಟದ ಪರಿಣಾಮ ಬಾಂಗ್ಲಾದೇಶ ತಂಡ 127 ರನ್‌ಗಳಿಗೆ ಆಲೌಟ್‌ ಆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರೋಪ-ಪ್ರತ್ಯಾರೋಪಗಳೆಷ್ಟು ಕಾಲ? ಆಡಳಿತ, ಅಭಿವೃದ್ಧಿ, ಕಲ್ಯಾಣಕ್ಕೆಷ್ಟು ಸಮಯ?

127 ರನ್ ಗುರಿಯನ್ನು ಬೆನ್ನಟ್ಟಿದ ಭಾರತ ತಂಡ ಎಲ್ಲಿಯೂ ಕೂಡ ಒತ್ತಡಕ್ಕೆ ಸಿಲುಕಲಿಲ್ಲ. ಯುವ ಆರಂಭಿಕ ಅಭಿಷೇಕ್‌ ಶರ್ಮಾ, ಎದುರಿಸಿದ 7 ಎಸೆತಗಳಲ್ಲಿ 2 ಬೌಂಡರಿ ಮತ್ತೊಂದು ಸಿಕ್ಸರ್‌ನೊಂದಿಗೆ 16 ರನ್‌ ಬಾರಿಸಿ ಔಟಾದರು. ಆದರೆ, ಮತ್ತೊಬ್ಬ ಆರಂಭಿಕ ಆಟಗಾರ, ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಸಂಜು ಸ್ಯಾಮ್ಸನ್‌, 6 ಬೌಂಡರಿಗಳೊಂದಿಗೆ 19 ಎಸೆತಗಳಲ್ಲಿ 29 ರನ್‌ ಬಾರಿಸಿ ವಿಕೆಟ್‌ ಒಪ್ಪಿಸಿದರು.

ನಾಯಕ ಸೂರ್ಯಕುಮಾರ್‌ ಯಾದವ್‌, ಸ್ಪೋಟಕ ಬ್ಯಾಟಿಂಗ್‌ ನಡೆಸಿ 14 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್‌ಗಳೊಂದಿಗೆ 29 ರನ್‌ ಸಿಡಿಸಿ ದೊಡ್ಡ ಹೊಡೆತವನ್ನಾಡುವ ಪ್ರಯತ್ನದಲ್ಲಿ ವಿಕೆಟ್‌ ಕೈಚೆಲ್ಲಿದರು. ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ, 16 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ ಅಜೇಯ 39 ರನ್‌ ಬಾರಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಪದಾರ್ಪಣೆಯ ಪಂದ್ಯವನ್ನಾಡಿದ ಆಲ್‌ರೌಂಡರ್‌ ನಿತೀಶ್‌ ಕುಮಾರ್‌ ರೆಡ್ಡಿ 15 ಎಸೆತಗಳಲ್ಲಿ ಅಜೇಯ 16 ರನ್‌ ಗಳಿಸಿ ಉತ್ತಮ ಜೊತೆ ನೀಡಿದರು. 11.5 ಓವರ್‌ಗಳಲ್ಲೇ ಭಾರತ 132 ರನ್‌ ಬಾರಿಸಿ ಜಯಗಳಿಸಿತು. ಸರಣಿಯ ಎರಡನೇ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಅಕ್ಟೋಬರ್‌ 9ರಂದು ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...