ಎರಡನೇ ಟೆಸ್ಟ್ | ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾಗೆ ಭರ್ಜರಿ ಜಯ; ಮಿಂಚಿದ ಆಕಾಶ್ ದೀಪ್

Date:

ಎಡ್ಜ್‌ಬಾಸ್ಟನ್‌ನಲ್ಲಿ ಭಾನುವಾರ ಮುಕ್ತಾಯಗೊಂಡ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಶುಭಮನ್ ಗಿಲ್ ನೇತೃತ್ವದ ಟೀಮ್ ಇಂಡಿಯಾ, 336 ರನ್‌ಗಳ ಬೃಹತ್‌ ಅಂತರದಿಂದ ಗೆದ್ದುಕೊಂಡಿತು.

ತೀವ್ರ ಕುತೂಹಲದ ಹಂತ ತಲುಪಿದ್ದ ಎರಡನೇ ಟೆಸ್ಟ್ ಪಂದ್ಯದಲ್ಲಿ, ಎರಡನೇ ಇನಿಂಗ್ಸ್‌ನಲ್ಲಿ 608 ರನ್‌ಗಳ ಬೃಹತ್‌ ಮೊತ್ತವನ್ನು ಬೆನ್ನಟ್ಟುವಲ್ಲಿ ವಿಫಲವಾದ ಇಂಗ್ಲೆಂಡ್‌ ತಂಡ, ನಾಲ್ಕನೇ ದಿನದಾಟ ಅಂತ್ಯಕ್ಕೆ 72 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡಿತ್ತು.

ಕೊನೆಯ ದಿನ 536 ರನ್‌ ಗಳಿಸಬೇಕಿತ್ತು. ಭಾರತ ಗೆಲುವು ಸಾಧಿಸಲು 7 ಆಂಗ್ಲ ಪಡೆಯ 7 ವಿಕೆಟ್‌ಗಳನ್ನು ಕಬಳಿಸಬೇಕಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೀಮ್ ಇಂಡಿಯಾದ ಸಂಘಟಿತ ಬೌಲಿಂಗ್ ಎದುರಿಸುವಲ್ಲಿ ವಿಫಲವಾದ ಬೆನ್ ಸ್ಟೋಕ್ಸ್ ನೇತೃತ್ವದ ಆಂಗ್ಲನ್ನರು, 271 ರನ್ ಗಳಿಸುವ ವೇಳೆಗೆ ಆಲೌಟ್ ಆದರು. ಎಡ್ಜ್ ಬಾಸ್ಟನ್‌ನಲ್ಲಿ ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ಗೆದ್ದು, ಐತಿಹಾಸಿಕ ಸಾಧನೆ ಮಾಡಿದೆ.

ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಬುಮ್ರಾ ಅನುಪಸ್ಥಿತಿಯ ಹಿನ್ನೆಲೆಯಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದ ವೇಗದ ಬೌಲರ್ ಆಕಾಶ್ ದೀಪ್, ಎರಡನೇ ಇನ್ನಿಂಗ್ಸ್‌ನಲ್ಲಿ ಮಾರಕ ಬೌಲಿಂಗ್ ನಡೆಸುವ ಮೂಲಕ ಪ್ರಮುಖ 6 ವಿಕೆಟ್‌ಗಳನ್ನು ಪಡೆಯುವ ಮೂಲಕ ಮಿಂಚಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಆಕಾಶ್ ದೀಪ್ ನಾಲ್ಕು ವಿಕೆಟ್ ಪಡೆದಿದ್ದರು. ಒಟ್ಟಾರೆಯಾಗಿ ಎರಡನೇ ಟೆಸ್ಟ್ ಪಂದ್ಯದಲ್ಲಿ ಒಟ್ಟು 10 ವಿಕೆಟ್ ಪಡೆದು ಮಿಂಚಿದ್ದಾರೆ.

ಉಳಿದಂತೆ ಟೀಮ್ ಇಂಡಿಯಾ ಪರವಾಗಿ 2ನೇ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ ವಿಭಾಗದಲ್ಲಿ ಜಡೇಜಾ, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯವು ಕ್ರಿಕೆಟ್ ಕಾಶಿ ಎಂದೇ ಪರಿಗಣಿತವಾಗಿರುವ ಲಾರ್ಡ್ಸ್ ಮೈದಾನದಲ್ಲಿ ಜುಲೈ 10ರಿಂದ ಆರಂಭವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...