ನಾಲ್ಕನೇ ಟೆಸ್ಟ್ | ಜುರೆಲ್ 90, ಭಾರತ 307ಕ್ಕೆ ಆಲೌಟ್: 2ನೇ ಇನಿಂಗ್ಸ್‌ನಲ್ಲಿ ಅಂಗ್ಲರಿಗೆ ಆರಂಭಿಕ ಆಘಾತ

Date:

ವಿಕೆಟ್ ಕೀಪರ್ ಧ್ರುವ್ ಜುರೆಲ್ 90 ರನ್‌ಗಳ ಅಮೋಘ ಆಟದಿಂದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ 307 ರನ್‌ ಗಳಿಸಲು ನೆರವಾಯಿತು.

ರಾಂಚಿಯಲ್ಲಿ ನಡೆಯುತ್ತಿರುವ ಮೂರನೇ ದಿನದಲ್ಲಿ ಭೋಜನ ವಿರಾಮದ ವೇಳೆಗೆ ಭಾರತ 103.2 ಓವರ್‌ಗಳಲ್ಲಿ 307 ರನ್‌ಗಳಿಗೆ ಆಲೌಟ್‌ ಆಗಿ 46 ರನ್‌ಗಳ ಹಿನ್ನೆಡೆ ಪಡೆಯಿತು. ಟೀಂ ಇಂಡಿಯಾ ಪರ ಮೂರನೇ ದಿನ ಧ್ರವ್‌ ಜುರೆಲ್ ಉತ್ತಮ ಆಟವಾಡಿದರು.

ಕುಲ್‌ದೀಪ್‌(28) ಅವರೊಂದಿಗೆ 80 ರನ್‌ಗಳ ಜೊತೆಯಾಟವಾಡಿ 90 ರನ್‌ ಗಳಿಸಿದ ಜುರೆಲ್‌ 10 ರನ್‌ಗಳಿಂದ ಶತಕ ವಂಚಿತರಾದರು. ಜುರೆಲ್ ಸೊಗಸಾದ ಆಟದಲ್ಲಿ 6 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್‌ಗಳಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಪಕ್ಷ ನಾಯಕ ಅಶೋಕ್ ಮತ್ತು ಸಾರ್ವಜನಿಕ ಸಭ್ಯತೆ

ಇಂಗ್ಲೆಂಡ್ ಪರ ಶೋಹೆಬ್ ಬಷೀರ್ 119/5, ಟಾಮ್ ಹಾರ್ಟ್ಲಿ 68/3 ಹಾಗೂ ಜೇಮ್ಸ್‌ ಆಂಡರ್‌ಸನ್‌ 48/2 ವಿಕೆಟ್ ಕಬಳಿಸಿದರು.

ಎರಡನೇ ಇನಿಂಗ್ಸ್ ಆರಂಭಿಸಿರುವ ಇಂಗ್ಲೆಂಡ್ ಎರಡು ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೊಳಗಾಗಿದೆ. ಬೆನ್‌ ಡೆಕೆಟ್ (15) ಹಾಗೂ ಓಲಿ ಪೋಪ್ (0) ಅವರನ್ನು ಸ್ಪಿನ್ನರ್‌ ಆರ್‌ ಅಶ್ವಿನ್ ಪೆವಿಲಿಯನ್‌ಗೆ ಕಳಿಸಿದ್ದಾರೆ.

ಇತ್ತೀಚಿನ ವರದಿಗಳಂತೆ ಇಂಗ್ಲೆಂಡ್ 112 ಓವರ್‌ಗಳಲ್ಲಿ 52/2 ರನ್ ಗಳಿಸಿದೆ. ರೂಟ್(9) ಹಾಗೂ ಜಾಕ್ ಕ್ರಾಲಿ(28) ಆಟವಾಡುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...