ಮಹಿಳಾ ವಿಶ್ವ ಚೆಸ್‌ ಬ್ಲಿಟ್ಜ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಆರ್ ವೈಶಾಲಿಗೆ ಕಂಚು

Date:

ಮಹಿಳಾ ವಿಶ್ವ ಬ್ಲಿಟ್ಜ್‌(ಅತಿ ವೇಗದ) ಚೆಸ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಗ್ರ್ಯಾಂಡ್‌ ಮಾಸ್ಟರ್‌ ಆರ್ ವೈಶಾಲಿ, ಕಂಚಿನ ಪದಕ ಗೆದ್ದಿದ್ದಾರೆ.

ಅಮೆರಿಕದ ವಾಲ್‌ಸ್ಟ್ರೀಟ್‌ನಲ್ಲಿ ನಡೆದ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತದ ವೈಶಾಲಿ, ಚೀನಾದ ಜು ವೆಂಜುಮಿನ್‌ ವಿರುದ್ಧ 0.5-2.5 ಅಂಕಗಳ ಅಂತರದಲ್ಲಿ ಪರಾಭವಗೊಂಡರು. ಇದರೊಂದಿಗೆ ಫೈನಲ್‌ ತಲುಪುವ ಅವಕಾಶದಿಂದ ವಂಚಿತರಾದರೂ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾದರು.

ಈ ಮೊದಲು ಚೀನಾದವರೇ ಆದ ಝುಜಿನರ್ ಅವರನ್ನು 2.5-1.5ರ ಅಂಕಗಳ ಅಂತರದಿಂದ ಮಣಿಸಿದ್ದ ವೈಶಾಲಿ, ಅಂತಿಮ ನಾಲ್ಕರ ಘಟ್ಟಕ್ಕೆ ಪ್ರವೇಶಿಸಿದ್ದರು. ಈ ವಿಭಾಗದಲ್ಲಿ ಚೀನಾದ ಲೀ ಟಿಂಗ್ಜಿ ಅವರನ್ನು ಮಣಿಸಿದ ಜು ವೆಂಜುಮಿನ್‌ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೀರ್ತಿಶನಿ ಹೆಗಲೇರಿದರೆ, ಕ್ರೀಡಾಪಟುಗಳು ಕೂಡ ಕುರೂಪಿಗಳಾಗುತ್ತಾರೆ…

ವೈಶಾಲಿ ಅಮೋಘ ಸಾಧನೆಗೆ ಅಂತಾರಾಷ್ಟ್ರೀಯ ಚೆಸ್ ಫೆಡರೇಷನ್ (ಫಿಡೆ) ಉಪಾಧ್ಯಕ್ಷ, ಐದು ಬಾರಿಯ ವಿಶ್ವ ಚಾಂಪಿಯನ್ ಭಾರತದ ವಿಶ್ವನಾಥನ್ ಆನಂದ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈಗಷ್ಟೇ ಮಹಿಳಾ ವಿಶ್ವ ರ‍್ಯಾಪಿಡ್ ಚೆಸ್ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಕೊನೇರು ಹಂಪಿ ಕಿರೀಟ ಮುಡಿಗೇರಿಸಿಕೊಂಡಿದ್ದರು. ಆ ಮೂಲಕ 37 ವರ್ಷದ ಕೊನೇರು ಹಂಪಿ ಎರಡನೇ ಸಲ ರ‍್ಯಾಪಿಡ್ ಚೆಸ್ ಚಾಂಪಿಯನ್‌ಷಿಪ್‌ ಗೆದ್ದ ಸಾಧನೆ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...