U19 ಮಹಿಳೆಯರ ಏಷ್ಯಾಕಪ್: ಭಾರತ ತಂಡ ಚಾಂಪಿಯನ್

Date:

ಕೌಲಾಲಂಪುರ್​ನಲ್ಲಿ ನಡೆದ ಅಂಡರ್-19 ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ರೋಚಕ ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು ಮಣಿಸಿ ಟೀಮ್ ಇಂಡಿಯಾ ಟ್ರೋಫಿಯನ್ನು ಎತ್ತಿ ಹಿಡಿದಿದೆ.

ಟಾಸ್‌‍ ಸೋತು ಮೊದಲು ಬ್ಯಾಟ್‌‍ ಆರಂಭಿಸಿದ ನಿಕ್ಕಿ ಪ್ರಸಾದ್‌‍ ಸಾರಥ್ಯದ ಭಾರತ ತಂಡಕ್ಕೆ ಬಾಂಗ್ಲಾ ಯುವ ಬೌಲರ್‌ಗಳು ಆರಂಭದಲ್ಲೇ ವಿಕೆಟ್‌‍ ಉರುಳಿಸುವ ಮೂಲಕ ಆಘಾತ ನೀಡಿದರು. 25 ರನ್‌ಗಳಿಗೆ ಎರಡು ಪ್ರಮುಖ ವಿಕೆಟ್‌‍ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಭಾರತ ತಂಡಕ್ಕೆ ಆರಂಭಿಕ ಆಟಗಾರ್ತಿ ಗೊಂಗಾಡಿ ತ್ರಿಶಾ (52 ರನ್‌‍) ಹಾಗೂ ನಾಯಕಿ ನಿಕ್ಕಿ ಪ್ರಸಾದ್‌‍ (12 ರನ್‌‍) 3ನೇ ವಿಕೆಟ್‌ಗೆ 41 ರನ್‌ಗಳ ಜೊತೆಯಾಟ ನೀಡಿದರು. ಅಂತಿಮವಾಗಿ ಭಾರತ 20 ಓವರ್‌ಗಳಿಗೆ 117/7 ಮೊತ್ತ ಗಳಿಸಿತು. ಬಾಂಗ್ಲಾ ಪರ ಫಾರ್ಜನಾ ಎಸಿನ್‌‍ (31ಕ್ಕೆ 4) ವಿಕೆಟ್ ಕಬಳಿಸಿದರು.

ಈ ಸುದ್ದಿ ಓದಿದ್ದೀರಾ? ಆರ್‌ ಅಶ್ವಿನ್ | ಸಾಧಾರಣ ಕುಟುಂಬದ ಹುಡುಗ ಸ್ಟಾರ್‌ ಕ್ರಿಕೆಟಿಗನಾದ ಕತೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಅಲ್ಪ ಗುರಿ ಹಿಂಬಾಲಿಸಿದ್ದ ಬಾಂಗ್ಲಾದೇಶ ಪರ ಫಾಹೊಮಿಡಾ ಚೋಯಾ (18 ರನ್‌‍) ಹಾಗೂ ಜುರಿಯಾ ಫೆರೋಡಿಸ್‌‍ (22 ರನ್‌‍) ಬಿಟ್ಟರೆ ಉಳಿದ ಯಾವುದೇ ಆಟಗಾರ್ತಿಯರು ಎರಡಂಕಿ ದಾಟದೆ ಭಾರತದ ಬೌಲರ್‌ಗಳ ಬಲೆಯಲ್ಲಿ ಸೆರೆಯಾಗಿ 18.3 ಓವರ್‌ಗಳಲ್ಲಿ 76 ರನ್‌ಗಳಿಗೆ ಸರ್ವಪತನ ಕಂಡು 41 ರನ್‌ಗಳ ಮುಖಭಂಗ ಅನುಭವಿಸಿತು.

ಭಾರತ ಪರ ಆಯುಷಿ ಶುಕ್ಲಾ (17ಕ್ಕೆ 3) ಯಶಸ್ವಿ ಬೌಲರ್‌‍ ಎನಿಸಿದರೆ, ಪೂರ್ಣಿಕಾ ಸಿಸೋಡಿಯಾ (12ಕ್ಕೆ 2), ಸೋನಮ್‌‍ ಯಾದವ್‌‍ (13ಕ್ಕೆ2) ಹಾಗೂ ವಿಜೆ ಜೋಷಿತಾ ಒಂದು ವಿಕೆಟ್‌‍ ಪಡೆದು ಬಾಂಗ್ಲಾ ಆಟಗಾರ್ತಿಯರ ಬ್ಯಾಟಿಂಗ್‌‍ ಬಲ ಮುರಿದರು. ಗೊಂಗಾಡಿ ತ್ರಿಷಾ ಪಂದ್ಯ ಶ್ರೇಷ್ಠರಾದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...