ಟಿ20 ವಿಶ್ವಕಪ್ | ಬಾಂಗ್ಲಾ ವಿರುದ್ಧ ರೋಹಿತ್ ಪಡೆಗೆ ಭರ್ಜರಿ ಜಯ: ಸೆಮಿಫೈನಲ್ ಹಾದಿಯತ್ತ ಟೀಮ್ ಇಂಡಿಯಾ

Date:

ಆ್ಯಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ಇಂದು ಬಾಂಗ್ಲಾದೇಶ ವಿರುದ್ಧ 2024ರ ಟಿ20 ವಿಶ್ವಕಪ್‌ನ ಸೂಪರ್-8 ಪಂದ್ಯದಲ್ಲಿ ಟೀಮ್ ಇಂಡಿಯಾವು 50 ರನ್‌ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ.

ಟಾಸ್ ಸೋತ ಹಿನ್ನೆಲೆಯಲ್ಲಿ ಮೊದಲು ಬ್ಯಾಟಿಂಗ್ ಇಳಿದ ಟೀಮ್ ಇಂಡಿಯಾವು ಹಾರ್ದಿಕ್ ಪಾಂಡ್ಯ ಅವರ ಅರ್ಧಶತಕದ ನೆರವಿನಿಂದ 196 ರನ್ ಗಳಿಸುವ ಮೂಲಕ ಬಾಂಗ್ಲಾದೇಶಕ್ಕೆ 197 ರನ್‌ಗಳ ಗುರಿ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶವು ನಿಗದಿತ ಕುಲ್‌ದೀಪ್ ಯಾದವ್ ಅವರ ಸ್ಪಿನ್ ದಾಳಿಗೆ ನಲುಗಿ, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 146 ರನ್ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ 50 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾವು ಸೆಮಿಫೈನಲ್ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ. ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವನ್ನು ಸೋಲಿಸಿತ್ತು.

ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಉತ್ತಮ ಬೌಲಿಂಗ್ ದಾಳಿ ನಡೆಸಿದ ಕುಲ್‌ದೀಪ್ ಯಾದವ್, ಕೇವಲ 19 ರನ್ ನೀಡಿ 3 ವಿಕೆಟ್ ಗಳಿಸಿದರು. ಉಳಿದಂತೆ ಜಸ್‌ಪ್ರೀತ್ ಬುಮ್ರಾ ಹಾಗೂ ಅರ್ಷ್‌ದೀಪ್ ಸಿಂಗ್ ತಲಾ 2 ವಿಕೆಟ್ ಗಳಿಸಿದರೆ, ಹಾರ್ದಿಕ್ ಪಾಂಡ್ಯ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಬಾಂಗ್ಲಾ ಪರ ಬ್ಯಾಟಿಂಗ್‌ನಲ್ಲಿ ನಾಯಕ ನಜ್ಮುಲ್ ಹಸನ್ ಸಾಂಟೊ 40 ರನ್ ಗಳಿಸಿದರೆ, ತಂಝೀದ್ ಹಸನ್ 29 ರನ್ ಹಾಗೂ ರಿಶಾದ್ ಹುಸೇನ್ 24 ರನ್ ಗಳಿಸಿದರು.

ಹಾರ್ದಿಕ್ ಪಾಂಡ್ಯ ಅರ್ಧಶತಕ

ಟಾಸ್ ಗೆದ್ದಿದ್ದ ಬಾಂಗ್ಲಾದೇಶವು ಬೌಲಿಂಗ್ ಆಯ್ದುಕೊಂಡಿತ್ತು. ಮೊದಲಿಗೆ ಭಾರತ ತಂಡದಿಂದ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಬ್ಯಾಟ್ ಬೀಸಿ ಉತ್ತಮ ಆರಂಭ ನೀಡಿದರು. 11 ಎಸೆತಗಳಿಗೆ 23 ರನ್ ಸಿಡಿಸಿ ರೋಹಿತ್ ಶರ್ಮಾ ಔಟಾಗುವ ಮೂಲಕ ಟೀಂ ಇಂಡಿಯಾದ ಮೊದಲ ವಿಕೆಟ್ ಪತನಗೊಂಡಿತು. 11 ಬಾಲ್‌ಗಳಲ್ಲಿ ರೋಹಿತ್ ಶರ್ಮಾ 3 ಬೌಂಡರಿ ಹಾಗೂ 1 ಸಿಕ್ಸ್ ಸಿಡಿಸಿ ಒಟ್ಟು 23 ಅಂಕಗಳನ್ನು ತಂಡಕ್ಕೆ ಗಳಿಸಿಕೊಟ್ಟರು. ವಿರಾಟ್ ಕೊಹ್ಲಿ 28 ಎಸೆತಗಳಲ್ಲಿ ಒಟ್ಟು 37 ರನ್ ಸಿಡಿಸಿ 2ನೇ ವಿಕೆಟ್ ಬಿಟ್ಟುಕೊಟ್ಟರು.

ಬಳಿಕ ಕ್ರೀಸ್‌ಗೆ ಬಂದ ಸೂರ್ಯಕುಮಾರ್ ಯಾದವ್ ಮೊದಲ ಎಸೆತಕ್ಕೆ ಸಿಕ್ಸ್ ಬಾರಿಸಿ ಎರಡನೇ ಬಾಲ್ ಅನ್ನು ವಿಕೆಟ್ ಕೀಪರ್ ಕೈಗೆ ಕ್ಯಾಚ್ ನೀಡುವ ಮೂಲಕ ಒಟ್ಟು 6 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು. ರಿಷಭ್ ಪಂತ್ 4 ಬೌಂಡರಿ ಹಾಗೂ 2 ಸಿಕ್ಸ್ ಸಿಡಿಸಿ, 24 ಎಸೆತಗಳಲ್ಲಿ ಒಟ್ಟು 36 ರನ್, ಗಳಿಸಿ ವಿಕೆಟ್ ಒಪ್ಪಿಸಿದರು.

ಬಳಿಕ ಕ್ರೀಸ್‌ಗೆ ಬಂದ ಶಿವಂ ದುಬೆ 24 ಎಸೆತಗಳಿಗೆ 34 ರನ್ ಸಿಡಿಸಿ ಔಟಾದರು. ಶಿವಂ ದುಬೆ ಹಾಗೂ ಹಾರ್ದಿಕ್ ಪಾಂಡ್ಯ ಜೊತೆಯಾಟವಾಡಿ ತಂಡಕ್ಕೆ 54 ರನ್ ಗಳಿಸಿಕೊಟ್ಟರು.

ಅಕ್ಷರ್ ಪಟೇಲ್ 5 ಎಸೆತಗಳಿಗೆ 3 ರನ್ ಗಳಿಸಿ ಔಟಾಗದೇ ಆಟವನ್ನು ಕೊನೆಗೊಳಿಸಲು ಸಹಕರಿಸಿದರು. ಹಾರ್ದಿಕ್ ಪಾಂಡ್ಯ ಕೊನೆಯ 1 ಬಾಲ್‌ನಲ್ಲಿ ಫೋರ್ ಸಿಡಿಸಿ 27 ಎಸೆತಗಳಿಗೆ ಅರ್ಧಶತಕ ಪೂರ್ಣಗೊಳಿಸಿ ಔಟಾಗದೇ ಉಳಿದರು. ಕೊನೆಯಲ್ಲಿ ಟೀಮ್ ಇಂಡಿಯಾವು ನಿಗದಿತ 20 ಓವರ್‌ಗಳಲ್ಲಿ 196 ರನ್ ಗಳಿಸಿತು.

ಬಾಂಗ್ಲಾ ಪರ ಬೌಲಿಂಗ್‌ನಲ್ಲಿ ರಿಶಾದ್ ಹುಸೇನ್ ಹಾಗೂ ತಂಝೀಮ್ ಹಸನ್ ಸಾಕಿಬ್ 2 ವಿಕೆಟ್ ಗಳಿಸಿದರೆ, ಶಾಕಿಬುಲ್ ಹಸನ್ 1 ವಿಕೆಟ್ ಪಡೆಯಲು ಸಫಲರಾದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...