ಬಾಕ್ಸಿಂಗ್‌ ಡೇ ಟೆಸ್ಟ್‌ | ಭಾರತದ 5 ವಿಕೆಟ್ ಪತನ; ಟೀಂ ಇಂಡಿಯಾಗೆ ಇನಿಂಗ್ಸ್ ಹಿನ್ನಡೆ ಭೀತಿ

Date:

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಬಾರ್ಡರ್ – ಗವಾಸ್ಕರ್ ಟ್ರೋಫಿ ಸರಣಿಯ ಬಾಕ್ಸಿಂಗ್ ಡೇ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ಟೀಂ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ ಯಶಸ್ವಿ ಜೈಸ್ವಾಲ್ ಅರ್ಧ ಶತಕದ ನೆರವಿನಿಂದ 46 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 164 ರನ್‌ ಕಲೆ ಹಾಕಿದ್ದು, ಇನಿಂಗ್ಸ್‌ ಹಿನ್ನಡೆಯ ಭೀತಿಯಲ್ಲಿದೆ.

ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ನಲ್ಲಿ ನೀಡಿರುವ 474 ರನ್‌ಗಳಿಗೆ ಉತ್ತರವಾಗಿ ಮುನ್ನಡೆ ಪಡೆಯಲು 310 ರನ್‌ ಗಳಿಸಬೇಕಾಗಿದೆ. ನಾಯಕ ರೋಹಿತ್‌ ಶರ್ಮಾ ಆರಂಭಿಕನಾಗಿ ಕಣಕ್ಕಿಳಿದರೂ ಕೇವಲ 3 ರನ್‌ ಗಳಿಸಿ ಔಟಾದರು. ಅನುಭವಿ ಆಟಗಾರ ಕೆ ಎಲ್‌ ರಾಹುಲ್ 24 ರನ್‌ ಗಳಿಸಿ ಆಸೀಸ್‌ ನಾಯಕ್ ಕಮ್ಮಿನ್ಸ್‌ ಬೌಲಿಂಗ್‌ನಲ್ಲಿ ಬೌಲ್ಡ್‌ ಆದರು.

82 ರನ್‌ ಗಳಿಸಿದ್ದ ಯಶಸ್ವಿ ಜೈಸ್ವಾಲ್‌ ಬೇಡದ ರನ್‌ ಗಳಿಸಲು ಓಡಿ ರನ್‌ ಔಟಾದರು.118 ಚೆಂಡುಗಳ ಅವರ ಆಟದಲ್ಲಿ 11 ಬೌಂಡರಿ ಹಾಗೂ 1 ಸಿಕ್ಸರ್‌ ಒಳಗೊಂಡಿತ್ತು. ವಿರಾಟ್‌ ಕೊಹ್ಲಿ ಕೂಡ 36 ರನ್‌ ಗಳಿಸಿ ಬೋಲ್ಯಾಂಡ್‌ ಬೌಲಿಂಗ್‌ನಲ್ಲಿ ಅಲೆಕ್ಸ್‌ ಕ್ಯಾರಿಗೆ ಕ್ಯಾಚಿತ್ತು ನಿರ್ಗಮಿಸಿದರು. ಆಕಾಶ್ ದೀಪ್‌ ಕೂಡ ಬೋಲ್ಯಾಂಡ್‌ ಬೌಲಿಂಗ್‌ನಲ್ಲಿ ಶೂನ್ಯಕ್ಕೆ ಪೆವಿಲಿಯನ್‌ಗೆ ತೆರಳಿದರು. ದಿನಾದಾಂತ್ಯಕ್ಕೆ ರಿಷಬ್‌ ಪಂತ್‌(6) ಹಾಗೂ ರವೀಂದ್ರ ಜಡೇಜಾ(4) ಅಜೇಯರಾಗಿ ಆಟವಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸೀಸ್‌ ತನ್ನ ಮೊದಲ ಇನಿಂಗ್ಸ್‌ನಲ್ಲಿ 122.4 ಓವರ್‌ಗಳಲ್ಲಿ 474 ರನ್‌ಗಳಿಗೆ ಆಲೌಟ್ ಆಗಿದೆ. 311/6 ರನ್‌ನೊಂದಿಗೆ ಎರಡನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ ಸ್ಟೀವನ್‌ ಸ್ಮಿತ್‌ ಅವರ ಆಕರ್ಷಕ ಶತಕದ(140) ನೆರವಿನಿಂದಿಗೆ 470ರ ಗಡಿ ದಾಟಿತು.

ಈ ಸುದ್ದಿ ಓದಿದ್ದೀರಾ? ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನ

ಟೀಂ ಇಂಡಿಯಾ ಪರ ಜಸ್‌ಪ್ರೀತ್ ಬುಮ್ರಾ ಮತ್ತೆ ತಮ್ಮ ಕರಾರುವಾಕ್ಕಾದ ಬೌಲಿಂಗ್ ಮೂಲಕ 4 ವಿಕೆಟ್ ಪಡೆದರೆ, ರವೀಂದ್ರ ಜಡೇಜಾ 3 ಆಕಾಶ್ ದೀಪ್ 2, ವಾಷಿಂಗ್ಟನ್ ಸುಂದರ್ 1 ವಿಕೆಟ್ ಪಡೆದು ಆಸೀಸ್‌ ತಂಡವನ್ನು ಆಲೌಟ್‌ ಮಾಡಿದರು.

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನದ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿರುವ ಟೀಂ ಇಂಡಿಯಾ ಎರಡನೇ ದಿನದಾಟದಲ್ಲಿ ಮನಮೋಹನ್ ಸಿಂಗ್ ಅವರಿಗೆ ಗೌರವ ಸಲ್ಲಿಸಲು ಕೈಗೆ ಕಪ್ಪು ಪಟ್ಟಿ ಧರಿಸಿ ಕ್ಷೇತ್ರರಕ್ಷಣೆ ಮಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...