ಅಂತಿಮ ಟೆಸ್ಟ್‌ನಲ್ಲಿ ಬುಮ್ರಾಗೆ ನಾಯಕತ್ವ| ಭಾರತದ 4 ವಿಕೆಟ್ ಪತನ: ಕನ್ನಡಿಗನಿಗೆ ಸ್ಥಾನ

Date:

ಬಾರ್ಡರ್-ಗವಾಸ್ಕರ್‌ ಟ್ರೋಫಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದು ಮೊದಲು ಬ್ಯಾ ಟಿಂಗ್ ಆರಂಭಿಸಿದ್ದು, ಭೋಜನ ವಿರಾಮಕ್ಕೆ ಅಗ್ರ ಕ್ರಮಾಂಕದ ನಾಲ್ವರ ವಿಕೆಟ್ ಕಳೆದುಕೊಂಡಿದೆ.ಟೀಂ ಇಂಡಿಯಾ 38 ಓವರ್‌ಗಳಲ್ಲಿ 81 ರನ್‌ಗಳಿಗೆ 4 ವಿಕೆಟ್ ಪತನವಾಗಿದೆ

ಜನವರಿ 2ರಂದು ನಡೆದ ಬೆಳವಣಿಗೆಗಳು ನೀಡಿದ ಸುಳಿವಿನಂತೆ ರೋಹಿತ್ ಶರ್ಮಾ ಅವರು ಈ ಪಂದ್ಯ ದಿಂದ ಹಿಂದೆ ಸರಿದಿದ್ದಾರೆ. ವೇಗಿ ಜಸ್ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸುವ ಅವಕಾಶ ಪಡೆದಿದ್ದಾರೆ.

ಟಾಸ್ ಗೆದ್ದ ಬುಮ್ರಾ ಮೊದಲು ಬ್ಯಾಟ್ ಆರಂಭಿಸುವ ತೀರ್ಮಾನ ತೆಗೆದುಕೊಂಡರು. ಭಾರತ ತಂಡದಲ್ಲಿ ಎರಡು ಪ್ರಮುಖ ಬದಲಾವಣೆ ಮಾಡಲಾಗಿದ್ದು, ಶುಭ್‌ಮನ್ ಗಿಲ್ ಹಾಗೂ ಕನ್ನಡಿಗ ಪ್ರಸಿದ್ಧ್ ಕೃಷ್ಣ ತಂಡ ಕೂಡಿಕೊಂಡಿದ್ದಾರೆ. ಇನ್ನು ರೋಹಿತ್ ಶರ್ಮಾ ಹಾಗೂ ಆಕಾಶ್‌ದೀಪ್ ಸಿಡ್ನಿ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಮತ್ತೆ ಆರಂಭಿಕನಾಗಿ ಕಣಕ್ಕಿಳಿದ ಕನ್ನಡಿಗ ಕೆ ಎಲ್ ರಾಹುಲ್ ಕೇವಲ 4 ರನ್ ಗಳಿಸಿ ಮಿಚೆಲ್ ಸ್ಟಾರ್ಕ್‌ಗೆ ವಿಕೆಟ್‌ ಒಪ್ಪಿಸಿದರು. ಇನ್ನು ಮೆಲ್ಬರ್ನ್ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್‌ನಲ್ಲಿ ಆಕರ್ಷಕ ಅರ್ಧಶತಕ ಸಿಡಿಸಿದ್ದ ಯಶಸ್ವಿ ಜೈಸ್ವಾಲ್ ಕೇವಲ 10 ರನ್ ಗಳಿಸಿ ಸ್ಕಾಟ್ ಬೊಲೆಂಡ್‌ಗೆ ವಿಕೆಟ್ ಒಪ್ಪಿಸಿದರು.

ಈ ಸುದ್ದಿ ಓದಿದ್ದೀರಾ? IND vs AUS | ಶೋಯೆಬ್ ಅಖ್ತರ್ ದಾಖಲೆ ಮುರಿದ ಜಸ್‌ಪ್ರೀತ್ ಬೂಮ್ರಾ

 ಜೈಸ್ವಾಲ್ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ವಿರಾಟ್ ಕೊಹ್ಲಿ ಮೊದಲ ಎಸೆತದಲ್ಲೇ ಸಿಕ್ಕ ಜೀವದಾನವನ್ನು ಬಳಸಿಕೊಳ್ಳುವತ್ತ ದಿಟ್ಟ ಹೆಜ್ಜೆಯಿಡಲಾರಂಭಿಸಿದ್ದಾರೆ. ಮೂರನೇ ವಿಕೆಟ್‌ಗೆ ಶುಭ್‌ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿ ಅಮೂಲ್ಯ 40 ರನ್‌ಗಳ ಜತೆಯಾಟ ನಿಭಾಯಿಸಿದರು.

ಇನ್ನೇನು ಊಟದ ವಿರಾಮಕ್ಕೆ ಕೆಲವೇ ನಿಮಿಷಗಳು ಬಾಕಿ ಇರುವಾಗ ಶುಭ್‌ಮನ್ ಗಿಲ್, ಸ್ಪಿನ್ನರ್ ನೇಥನ್ ಲಯನ್‌ಗೆ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದರು. ಗಿಲ್ ವಿಕೆಟ್ ಒಪ್ಪಿಸುವ ಮುನ್ನ 64 ಎಸೆತಗಳನ್ನು ಎದುರಿಸಿ 2 ಬೌಂಡರಿ ಸಹಿತ 20 ರನ್ ಗಳಿಸಿದರು. ಪಾನೀಯ ವಿರಾಮದ ವೇಳೆಗೆ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ(17) ಕೂಡ ಬೊಲೆಂಡ್‌ ಬೌಲಿಂಗ್‌ನಲ್ಲಿ ಔಟಾದರು.

ಪಂತ್‌(14) ಹಾಗೂ ರವೀಂದ್ರ ಜಡೇಜಾ(4 ಕ್ರೀಸ್‌ ಕಾಯ್ದುಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...