ಐಎಂಎಲ್ 2025 | ಇಂಡಿಯಾ ಮಾಸ್ಟರ್ಸ್ ಚಾಂಪಿಯನ್; ಮಿಂಚಿದ ಅಂಬಾಟಿ ರಾಯುಡು ​

Date:

ಛತ್ತೀಸ್‌ಗಢದ ರಾಯ್‌ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಇಂಟರ್‌ನ್ಯಾಷನಲ್ ಮಾಸ್ಟರ್ಸ್ ಲೀಗ್(ಐಎಂಎಲ್) ಟಿ20 ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮಾಸ್ಟರ್ಸ್ ತಂಡವನ್ನು ಇಂಡಿಯಾ ಮಾಸ್ಟರ್ಸ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಉಭಯ ತಂಡಗಳ ನಡುವೆ ನಡೆದ ಈ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 147 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಇಂಡಿಯಾ ಮಾಸ್ಟರ್ಸ್ 17 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು.

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ಮಾಸ್ಟರ್ಸ್ ಪರ ಲೆಂಡ್ಲ್ ಸಿಮನ್ಸ್ ಅತಿ ಹೆಚ್ಚು ರನ್ ಗಳಿಸಿದರು. ಸಿಮನ್ಸ್ 41 ಎಸೆತಗಳಲ್ಲಿ 139.02 ಸ್ಟ್ರೈಕ್ ರೇಟ್‌ನಲ್ಲಿ 57 ರನ್ ಗಳಿಸಿದರು. ವಿಂಡೀಸ್ ಪರವಾಗಿ ಸಿಮನ್ಸ್ 1 ಸಿಕ್ಸರ್ ಮತ್ತು 5 ಬೌಂಡರಿಗಳನ್ನು ಬಾರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವರಲ್ಲದೆ, ಆರಂಭಿಕ ಆಟಗಾರ ಡ್ವೇನ್ ಸ್ಮಿತ್ 2 ಸಿಕ್ಸರ್ ಮತ್ತು 4 ಬೌಂಡರಿಗಳೊಂದಿಗೆ 45 ರನ್ ಗಳಿಸಿದರು. ವಿಕೆಟ್ ಕೀಪರ್ ದಿನೇಶ್ ರಾಮ್ದಿನ್ ಅಜೇಯ 12 ರನ್ ಗಳಿಸಿದರು. ಈ ಮೂವರನ್ನು ಹೊರತುಪಡಿಸಿ, ಯಾರೂ ಎರಡಂಕಿ ತಲುಪಲು ಸಾಧ್ಯವಾಗಲಿಲ್ಲ. ನಾಯಕ ಬ್ರಿಯಾನ್ ಲಾರಾ, ವಿಲಿಯಂ ಪರ್ಕಿನ್ಸ್ ಮತ್ತು ಚಾಡ್ವಿಕ್ ವಾಲ್ಟನ್ ತಲಾ 6 ರನ್ ಗಳಿಸಿದರೆ, ರವಿ ರಾಂಪಾಲ್ 2 ರನ್ ಕೊಡುಗೆ ನೀಡಿದರು. ಆಶ್ಲೇ ನರ್ಸ್ 1 ರನ್ ಗಳಿಸಿದರು.

ಈ ಸುದ್ದಿ ಓದಿದ್ದೀರಾ? ‘ದೇವರು ನನ್ನನ್ನು ಈ ಪರಿಸ್ಥಿತಿಯಲ್ಲಿ ಇಟ್ಟಿದ್ದಾನೆ’; ಕೆ.ಎಲ್ ರಾಹುಲ್ ಹೀಗೆ ಹೇಳಿದ್ದೇಕೆ?

ಇಂಡಿಯಾ ಮಾಸ್ಟರ್ಸ್ ಪರ ಒಟ್ಟು 6 ಮಂದಿ ಬೌಲಿಂಗ್ ಮಾಡಿ, ವಿನಯ್ ಕುಮಾರ್ 3 , ಶಾದಾಬ್ ನದೀಮ್ 2 , ಪವನ್ ನೇಗಿ ಮತ್ತು ಸ್ಟುವರ್ಟ್ ಬಿನ್ನಿ ತಲಾ 1 ವಿಕೆಟ್ ಪಡೆದರು.

148 ರನ್​ಗಳ ಗುರಿ ಬೆನ್ನಟ್ಟಿದ ಇಂಡಿಯಾ ಮಾಸ್ಟರ್ಸ್​ ಪರ ಅಂಬಾಟಿ ರಾಯುಡು ಸ್ಫೋಟಕ ಇನಿಂಗ್ಸ್ ಕಟ್ಟಿದರು. ರಾಯುಡು 50 ಎಸೆತಗಳಲ್ಲಿ 148 ಸ್ಟ್ರೈಕ್ ರೇಟ್‌ನಲ್ಲಿ 74 ರನ್ ಗಳಿಸಿದರು. ರಾಯುಡು ಅವರ ಇನಿಂಗ್ಸ್‌ನಲ್ಲಿ 3 ಸಿಕ್ಸರ್‌ಗಳು ಮತ್ತು 9 ಬೌಂಡರಿಗಳು ಸೇರಿದ್ದವು. ಅವರನ್ನು ಹೊರತುಪಡಿಸಿ ನಾಯಕ ಸಚಿನ್ ತೆಂಡೂಲ್ಕರ್ 18 ಎಸೆತಗಳಲ್ಲಿ 1 ಸಿಕ್ಸರ್ ಮತ್ತು 2 ಬೌಂಡರಿಗಳೊಂದಿಗೆ 25 ರನ್ ಗಳಿಸಿದರು.

ಮಧ್ಯಮ ಕ್ರಮಾಂಕದಲ್ಲಿ ಗುರುಕಿರತ್ ಸಿಂಗ್ ಮಾನ್ 14 ರನ್​ಗಳ ಕಾಣಿಕೆ ನೀಡಿದರೆ, ಯೂಸುಫ್ ಪಠಾಣ್‌ಗೆ ಖಾತೆ ತೆರೆಯಲು ಸಹ ಸಾಧ್ಯವಾಗಲಿಲ್ಲ. ಕೊನೆಯಲ್ಲಿ ಯುವರಾಜ್ ಸಿಂಗ್ (13 ರನ್) ಮತ್ತು ಸ್ಟುವರ್ಟ್ ಬಿನ್ನಿ (16 ರನ್) ಜೋಡಿ ಭಾರತವನ್ನು ಗೆಲುವಿನತ್ತ ಕೊಂಡೊಯ್ದಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...