ಲಾರ್ಡ್ಸ್ ಟೆಸ್ಟ್‌ನಲ್ಲಿ ‘ವಾಷಿಂಗ್ಟನ್ ಸುಂದರ್‌’ ಸ್ಪಿನ್ ಕಮಾಲ್: ಟೀಂ ಇಂಡಿಯಾಕ್ಕೆ 193 ರನ್‌ಗಳ ಗುರಿ

Date:

ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಪಿನ್ನರ್ ವಾಷಿಂಗ್ಟನ್‌ ಸುಂದರ್ ಅವರ ಸ್ಪಿನ್ ಮಾಂತ್ರಿಕತೆಗೆ ಬೆನ್ ಸ್ಟೋಕ್ಸ್ ನೇತೃತ್ವದ ಆಂಗ್ಲರ ಬಳಗ 2ನೇ ಇನ್ನಿಂಗ್ಸ್‌ನಲ್ಲಿ ಕೇವಲ 192 ರನ್‌ಗಳಿಗೆ ಆಲೌಟ್ ಆಗಿದೆ.

ನಾಲ್ಕನೇ ದಿನದಾಟವನ್ನು ಆರಂಭಿಸಿದ್ದ ಇಂಗ್ಲೆಂಡ್‌ಗೆ ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಮೊಹಮ್ಮದ್ ಸಿರಾಜ್ ಆರಂಭದಲ್ಲಿಯೇ ಆಘಾತ ನೀಡಿದ್ದರು. ಇಂಗ್ಲೆಂಡ್ ಬ್ಯಾಟರ್‌ಗಳನ್ನು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲು ಬಿಡದೆ ವಿಕೆಟ್ ಪಡೆಯುವ ಮೂಲಕ ಜೊತೆಯಾಟ ನಡೆಯದಂತೆ ನೋಡಿಕೊಂಡರು.

2ನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ ಪರವಾಗಿ ಉತ್ತಮ ಬೌಲಿಂಗ್ ದಾಳಿ ನಡೆಸಿದ ಆಲ್‌ರೌಂಡರ್ ವಾಷಿಂಗ್ಟನ್‌ ಸುಂದರ್ ಕೇವಲ 22 ರನ್ ನೀಡಿ ಜೋ ರೂಟ್, ಸ್ಟೋಕ್ಸ್ ಸೇರಿದಂತೆ ನಾಲ್ಕು ಪ್ರಮುಖ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಳಿದಂತೆ ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಎರಡು ವಿಕೆಟ್ ಪಡೆದರೆ, ಆಕಾಶ್ ದೀಪ್ ಮತ್ತು ನಿತೀಶ್ ಕುಮಾರ್ ರೆಡ್ಡಿ ತಲಾ ಒಂದೊಂದು ವಿಕೆಟ್ ಗಳಿಸಿದರು.

ಇಂಗ್ಲೆಂಡ್ ಪರವಾಗಿ ಬ್ಯಾಟಿಂಗ್‌ನಲ್ಲಿ ‌ಜೋ ರೂಟ್ 40 ಹಾಗೂ ನಾಯಕ ಬೆನ್ ಸ್ಟೋಕ್ಸ್ 33 ಗಳಿಸಿ ಅತ್ಯಧಿಕ ಸ್ಕೋರರ್ ಎನಿಸಿದರು.

ಪಂದ್ಯ ಮುಗಿಯಲು ಇನ್ನೂ ಒಂದು ದಿನ ಬಾಕಿ ಇದ್ದು, ಶುಭಮನ್ ಗಿಲ್ ನೇತೃತ್ವದ ಟೀಮ್ ಇಂಡಿಯಾ 193 ರನ್ ಗಳಿಸಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...