5ನೇ ಟೆಸ್ಟ್ | ಜೈಸ್ವಾಲ್ ಶತಕ: ಆಕಾಶ್ ದೀಪ್ ಸೇರಿ ಮೂವರಿಂದ ಅರ್ಧಶತಕ; ಇಂಗ್ಲೆಂಡ್ ಗೆಲುವಿಗೆ 374 ರನ್‌ಗಳ ಗುರಿ

Date:

ಜು. 31ರಿಂದ ಲಂಡನ್ನಿನ ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಐದನೇ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾ 396 ರನ್‌ಗಳಿಗೆ ಆಲೌಟ್ ಆಗಿದೆ. ಆ ಮೂಲಕ ಇಂಗ್ಲೆಂಡ್ ಗೆಲುವಿಗೆ 374 ರನ್‌ಗಳ ಗುರಿಯನ್ನು ನೀಡಿದೆ.

ಎರಡನೇ ದಿನದಾಟದ ಅಂತ್ಯದ ವೇಳೆಗೆ ನೈಟ್ ವಾಚ್‌ಮೆನ್ ಆಗಿ ಬ್ಯಾಟಿಂಗ್ ಮಾಡಲು ಬಂದಿದ್ದ ಬೌಲರ್ ಆಕಾಶ್ ದೀಪ್ ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಅರ್ಧಶತಕ ಗಳಿಸುವ ಮೂಲಕ ಮಿಂಚಿದರು. ಟೀಮ್ ಇಂಡಿಯಾ ಪರವಾಗಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಜೊತೆಗೆ ಮೂರನೇ ವಿಕೆಟ್‌ಗೆ 107 ರನ್‌ಗಳ ಜೊತೆಯಾಟ ನಡೆಸುವಲ್ಲಿ ಯಶಸ್ವಿಯಾದರು.

ಔಟ್ ಆಗುವುದಕ್ಕೂ ಮುನ್ನ 94 ಎಸೆತಗಳನ್ನು ಎದುರಿಸಿದ ಆಕಾಶ್ ದೀಪ್, 12 ಬೌಂಡರಿಗಳ ನೆರವಿನಿಂದ 66 ರನ್ ಗಳಿಸುವಲ್ಲಿ ಸಫಲರಾದರು.‌ ಮೂರನೇ ವಿಕೆಟ್‌ಗೆ ಜೈಸ್ವಾಲ್ ಹಾಗೂ ಆಕಾಶ್ ದೀಪ್ ಜೋಡಿಯು ನಡೆಸಿದ ಉತ್ತಮ ಜೊತೆಯಾಟದಿಂದ ಟೀಮ್ ಇಂಡಿಯಾ ಉತ್ತಮ ಸ್ಥಿತಿಗೆ ತಲುಪಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಬಳಿಕ ಬ್ಯಾಟಿಂಗ್ ಮುಂದುವರಿಸಿದ ಯಶಸ್ವಿ ಜೈಸ್ವಾಲ್ ಶತಕ ಬಾರಿಸಿ ಮಿಂಚಿದರು. 2 ಸಿಕ್ಸ್ ಹಾಗೂ 14 ಬೌಂಡರಿಗಳ ನೆರವಿನಿಂದ 118 ರನ್ ಗಳಿಸುವಲ್ಲಿ ಸಫಲರಾದರು. ಜೈಸ್ವಾಲ್ ಔಟ್ ಆದ ಬಳಿಕ ರವೀಂದ್ರ ಜಡೇಜಾ ಅರ್ಧಶತಕ (53 ರನ್)ದ ಕೊಡುಗೆ ನೀಡಿದರು. ಎರಡನೇ ಇನ್ನಿಂಗ್ಸ್‌ನ ಕೊನೆಯಲ್ಲಿ ಉಳಿದಿದ್ದ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರಿಂದ ಇಂಗ್ಲೆಂಡ್ ಗೆಲುವಿಗೆ 374 ರನ್‌ಗಳ ಗುರಿಯನ್ನು ನೀಡುವಲ್ಲಿ ಸಫಲರಾದರು.

ವಾಷಿಂಗ್ಟನ್ ಸುಂದರ್ 46 ಎಸೆತಗಳನ್ನು ಎದುರಿಸಿ 4 ಭರ್ಜರಿ ಸಿಕ್ಸರ್ ಹಾಗೂ 4 ಬೌಂಡರಿಗಳ ನೆರವಿನಿಂದ ಅರ್ಧಶತಕ ಗಳಿಸುವ ಮೂಲಕ ಮಿಂಚಿದರು. ‌ಇಂಗ್ಲೆಂಡ್ ಪರವಾಗಿ ಎರಡನೇ ಇನ್ನಿಂಗ್ಸ್‌ನಲ್ಲಿ ಟಿ ಸಿ ಟಂಗ್, 125 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದರು.

ಐದು ಪಂದ್ಯಗಳ ಈ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ತಂಡ ಎರಡರಲ್ಲಿ ಜಯ ಸಾಧಿಸಿದೆ, ಭಾರತ ಒಂದನ್ನು ಗೆದ್ದಿದೆ. ಮತ್ತೊಂದು ಪಂದ್ಯ ಡ್ರಾ ಆಗಿದೆ. ಈ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ ಗೆದ್ದಲ್ಲಿ ಸರಣಿಯನ್ನು ವಶಪಡಿಸಿಕೊಳ್ಳಲಿದೆ. ಶುಭಮನ್ ಗಿಲ್ ನೇತೃತ್ವದ ಟೀಮ್ ಇಂಡಿಯಾ ಕೊನೆಯ ಟೆಸ್ಟ್ ಪಂದ್ಯವನ್ನು ಗೆದ್ದರೆ ಸರಣಿ 2-2 ಸಮಬಲ ಆಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...