ವಿಶ್ವಕಪ್ | ಭಾರತದ ಪರದಾಟ; 97 ಚೆಂಡುಗಳ ನಂತರ ಬೌಂಡರಿ ದಾಖಲಿಸಿದ ಟೀಮ್ ಇಂಡಿಯಾ

Date:

ಅಹಮದಾಬಾದಿನ ಮೊಟೇರಾದ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ – ಆಸ್ಟ್ರೇಲಿಯಾ ನಡುವಣ ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ಬ್ಯಾಟಿಂಗ್ ಆಡುತ್ತಿರುವ ನೀರಸ ಪ್ರದರ್ಶನ ನೀಡುತ್ತಿದೆ.

ಮೊದಲ ಹತ್ತು ಓವರ್‌ಗಳಲ್ಲಿ ಉತ್ತಮ ಬ್ಯಾಟಿಂಗ್‌ ನಡೆಸಿದ ಟೀಂ ಇಂಡಿಯಾ ನಂತರದ ಓವರ್‌ಗಳಲ್ಲಿ ವೇಗದ ರನ್‌ ಗಳಿಸಲು ಪರದಾಡುತ್ತಿದೆ.  47 ರನ್‌ ಗಳಿಸಿದ್ದ ನಾಯಕ ರೋಹಿತ್ ಶರ್ಮಾ ಮ್ಯಾಕ್ಸ್‌ವೆಲ್‌ ಬೌಲಿಂಗ್‌ನಲ್ಲಿ ಟ್ರಾವಿಸ್ ಹೆಡ್ ಹಿಡಿದ ಅದ್ಭುತ ಕ್ಯಾಚ್‌ನಿಂದಾಗಿ ಪೆವಿಲಿಯನ್‌ಗೆ ತೆರಳಿದರು. ಅವರ ಆಟದಲ್ಲಿ 3 ಭರ್ಜರಿ ಸಿಕ್ಸರ್ ಹಾಗೂ 4 ಬೌಂಡರಿಗಳಿದ್ದವು.

ರೋಹಿತ್‌ಗೂ ಮೊದಲು ಶುಭ್‌ಮನ್‌ಗಿಲ್‌ (4) ಮಿಚೆಲ್‌ ಸ್ಟಾರ್ಕ್‌ ಬೌಲಿಂಗ್‌ನಲ್ಲಿ ಜಂಪಾಗೆ ಕ್ಯಾಚ್‌ ನೀಡಿ ಔಟಾಗಿದ್ದರು. ಸತತ ಎರಡು ಶತಕ ಗಳಿಸಿದ್ದ ಶ್ರೇಯಸ್‌ ಅಯ್ಯರ್ (4) ಕೂಡ ಆಸೀಸ್‌ ನಾಯಕ ಕಮ್ಮಿನ್ಸ್ ಬೌಲಿಂಗ್‌ನಲ್ಲಿ ವಿಕೆಟ್ ಕೀಪರ್‌ ಇಂಗ್ಲಿಸ್‌ಗೆ ಕ್ಯಾಚ್‌ ನೀಡಿ ಔಟಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಶ್ವಕಪ್ | ದ್ರಾವಿಡ್, ಕೊಹ್ಲಿ,ಶಮಿ ಯಾರಿಗಾಗಿ ಈ ಬಾರಿಯ ಕಪ್; ರೋಚಕ ಹಣಾಹಣಿಯ ನಿರೀಕ್ಷೆಯಲ್ಲಿ ಕ್ರಿಕೆಟ್ ಜಗತ್ತು

ವಿಶ್ವಕಪ್‌ ಟೂರ್ನಿನಲ್ಲಿ 6 ಅರ್ಧ ಶತಕ ಗಳಿಸಿದ ವಿರಾಟ್‌ ಕೊಹ್ಲಿ 54 ರನ್‌ ಗಳಿಸಿ ಕೀಪರ್‌ ಇಂಗ್ಲಿಸ್‌ಗೆ ಕ್ಯಾಚ್‌ ನೀಡಿ ಔಟಾದರು. ವಿರಾಟ್‌ ಅವರು ಕೆ ಎಲ್‌ ರಾಹುಲ್‌ ಅವರೊಂದಿಗೆ ನಾಲ್ಕನೆ ವಿಕೆಟ್‌ಗೆ 109 ಎಸೆತಗಳಲ್ಲಿ 67 ರನ್‌ ಜೊತೆಯಾಟವಾಡಿದರು.

ಸದ್ಯ ರವೀಂದ್ರ ಜಡೇಜ (6) ಜೊತೆ ಕ್ರೀಸ್‌ನಲ್ಲಿರುವ ಕೆ ಎಲ್‌ ರಾಹುಲ್ 80 ಚೆಂಡುಗಳಲ್ಲಿ 47 ರನ್‌ ಗಳಿಸಿ ಆಡುತ್ತಿದ್ದಾರೆ.

ವಿರಾಟ್‌ ಹಾಗೂ ರಾಹುಲ್ ಜೊತೆ ನಾಲ್ಕನೆ ವಿಕೆಟ್‌ಗೆ ಜೊತೆಯಾಟವಾಡುವಾಗ 97 ಚೆಂಡುಗಳಿಂದ ಬೌಂಡರಿಯೆ ಬಂದಿರಲಿಲ್ಲ. 98 ಎಸೆತಕ್ಕೆ ರಾಹುಲ್‌ ಮ್ಯಾಕ್ಸ್‌ವೆಲ್‌ ಬೌಲಿಂಗ್‌ನಲ್ಲಿ ಬೌಂಡರಿ ಬಾರಿಸಿದರು.

ಇತ್ತೀಚಿನ ವರದಿಗಳಂತೆ ಭಾರತ 33 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 165 ರನ್‌ ಗಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...