ಭಾರತ-ಪಾಕ್‌ ಟಿ20 ವಿಶ್ವಕಪ್: ಒಂದು ಟಿಕೆಟ್‌ ಬೆಲೆ ಬರೋಬ್ಬರಿ 8.34 ಲಕ್ಷ ರೂಪಾಯಿ!

Date:

ಭಾರತ ಮತ್ತು ಪಾಕಿಸ್ತಾನದ ಟಿ20 ವಿಶ್ವಕಪ್ ಕ್ರಿಕೆಟ್ ಎಂದಿಗೂ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸುತ್ತದೆ. ಎಷ್ಟರಮಟ್ಟಿಗೆಂದರೆ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಟಿಕೆಟ್‌ ಬರೋಬ್ಬರಿ 10,000 ಡಾಲರ್‌ಗೆ ಅಂದರೆ 8.34 ಲಕ್ಷ ರೂಪಾಯಿಗೆ ಮಾರಾಟವಾಗಿದೆ.

ಜೂನ್ 9ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತವು ಪಾಕಿಸ್ತಾನವನ್ನು ಎದುರಿಸಲಿದೆ. 34,000 ಪ್ರೇಕ್ಷಕರ ಸಾಮರ್ಥ್ಯ ಹೊಂದಿರುವ ನಸ್ಸೌ ಕೌಂಟಿಯಲ್ಲಿ ಹೊಸದಾಗಿ ಸ್ಥಾಪಿಸಲಾದ ಕ್ರೀಡಾಂಗಣದಲ್ಲಿ ಈ ಪಂದ್ಯವು ಪ್ರೇಕ್ಷಕರನ್ನು ಸೆಳೆಯುವ ನಿರೀಕ್ಷೆಯಿದೆ.

ಇದನ್ನು ಓದಿದ್ದೀರಾ?  ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯ: ಉಗ್ರರಿಂದ ದಾಳಿ ಬೆದರಿಕೆ, ನ್ಯೂಯಾರ್ಕ್‌ನಲ್ಲಿ ಭದ್ರತೆ ಹೆಚ್ಚಳ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಸ್ಸೌ ಕೌಂಟಿ ಡೈಮಂಡ್ ಕ್ಲಬ್, ಕ್ಯಾಬನಾಸ್, ಪ್ರೀಮಿಯಂ ಕ್ಲಬ್ ಲಾಂಜ್‌ಗಳು, ಕಾರ್ನರ್ ಕ್ಲಬ್, ಪೆವಿಲಿಯನ್ ಕ್ಲಬ್ ಮತ್ತು ಬೌಂಡರಿ ಕ್ಲಬ್‌ನಲ್ಲಿ ಆರು ಆತಿಥ್ಯ ಪ್ಯಾಕೇಜ್‌ಗಳು ಲಭ್ಯವಿದೆ. ಆದರೆ ಭಾರತ ಮತ್ತು ಪಾಕ್ ಆಟಕ್ಕೆ ಈಗ ಮೂರು ಪ್ಯಾಕೇಜ್‌ಗಳು ಮಾತ್ರ ಲಭ್ಯವಿವೆ.

ಟಿಕೆಟ್ ಬೆಲೆ ಎಷ್ಟಿದೆ?

ಐಸಿಸಿ ವೆಬ್‌ಸೈಟ್‌ನ ಪ್ರಕಾರ, ಡೈಮಂಡ್ ಕ್ಲಬ್ ಟಿಕೆಟ್‌ಗಳನ್ನು 4 ವರ್ಗಗಳಾಗಿ ವರ್ಗೀಕರಿಸಲಾಗಿದೆ. ಪ್ರತಿ ವರ್ಗದ ಒಂದು ಟಿಕೆಟ್ ಬೆಲೆ 10,000 ಡಾಲರ್ ಅಥವಾ 8,34,323 ರೂಪಾಯಿ ಆಗಿದೆ. ಪ್ರೀಮಿಯಂ ಕ್ಲಬ್ ಲಾಂಜ್‌ಗಳ ವರ್ಗದ ಟಿಕೆಟ್‌ ಒಂದರ ಬೆಲೆ 2,500 ಡಾಲರ್ ಅಥವಾ 2.8 ಲಕ್ಷ ರೂಪಾಯಿ ಆಗಿದೆ. ಕಾರ್ನರ್ ಕ್ಲಬ್ ಟಿಕೆಟ್ ಬೆಲೆ 2,750.00 ಡಾಲರ್ ಅಥವಾ 2.29 ಲಕ್ಷ ರೂಪಾಯಿ ಆಗಿದೆ.

ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಶುಕ್ರವಾರ ಸಂಜೆ ನ್ಯೂಯಾರ್ಕ್‌ಗೆ ಬಂದಿಳಿದಿದ್ದು, ಪಂದ್ಯಾವಳಿಯ ತಯಾರಿಯಲ್ಲಿ ನಿರತರಾಗಿದ್ದಾರೆ. “ನಾವು ಸ್ಟೇಟ್ಸ್‌ನಲ್ಲಿ (ಯುಎಸ್) ಕ್ರಿಕೆಟ್ ಆಡುತ್ತೇವೆ ಎಂದು ನಾನು ಎಂದಿಗೂ ಭಾವಿಸಿರಲಿಲ್ಲ. ಆದರೆ ಈಗ ಅದು ನಿಜವಾಗಿದೆ” ಎಂದು ಯುಎಸ್ ಕಾನ್ಸುಲೇಟ್ ಮುಂಬೈ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ಕೊಹ್ಲಿ ಹೇಳಿದ್ದಾರೆ.

ಈ ನಡುವೆ ಈಗಾಗಲೇ ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯಕ್ಕೆ ಉಗ್ರರಿಂದ ಒಂಟಿ ತೋಳ (ಒಬ್ಬ ದಾಳಿಕೋರ) ಮಾದರಿ ದಾಳಿಯ ಬೆದರಿಕೆಯನ್ನು ಹಾಕಲಾಗಿದ್ದು ನ್ಯೂಯಾರ್ಕ್ ಭದ್ರತೆಯನ್ನು ಹೆಚ್ಚಿಸುತ್ತಿದೆ. ಕ್ರಿಕೆಟ್ ಪಂದ್ಯದಲ್ಲಿ ಭಾಗಿಯಾಗುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭದ್ರತೆಯನ್ನು ಹೆಚ್ಚಿಸಲಾಗುತ್ತದೆ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಗವರ್ನರ್‌ ಕ್ಯಾಥಿ ಹೊಚುಲ್ ತಿಳಿಸಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...