ಐಸಿಸಿ ಮಹಿಳಾ ಅಂಡರ್-19 ಟಿ20 ವಿಶ್ವಕಪ್: ಇಂಗ್ಲೆಂಡ್ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ಟೀಮ್ ಇಂಡಿಯಾ

Date:

ಕೌಲಲಾಂಪುರದ ಬಯುಮಾಸ್ ಓವಲ್‌ನಲ್ಲಿ ಶುಕ್ರವಾರ ನಡೆದ ಐಸಿಸಿ ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತವು ಇಂಗ್ಲೆಂಡ್ ತಂಡವನ್ನು 9 ವಿಕೆಟ್‌ಗಳಿಂದ ಸೋಲಿಸಿ ಫೈನಲ್‌ ಪ್ರವೇಶಿಸಿದೆ.

114 ರನ್‌ಗಳ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ, ಕೇವಲ 15 ಓವರ್‌ಗಳಲ್ಲಿ ಗುರಿ ತಲುಪಿತು. ಆರಂಭಿಕ ಆಟಗಾರ್ತಿ ಜಿ.ಕಮಲಿನಿ 50 ಎಸೆತಗಳಲ್ಲಿ ಅಜೇಯ 56 ರನ್ ಗಳಿಸಿ, ಮಿಂಚಿದರು. ಗೊಂಗಾಡಿ ತ್ರಿಷಾ ಅವರೊಂದಿಗೆ ಅವರ 60 ರನ್ ಗಳ ಆರಂಭಿಕ ಜೊತೆಯಾಟವು ಸುಲಭ ರನ್ ಚೇಸ್‌ಗೆ ವೇದಿಕೆ ಕಲ್ಪಿಸಿತು.

ಇದಕ್ಕೂ ಮುನ್ನ ಬ್ಯಾಟಿಂಗ್ ಆಯ್ದುಕೊಂಡಿದ್ದ ಇಂಗ್ಲೆಂಡ್ ಉತ್ತಮ ಆರಂಭ ಪಡೆಯಿತು. ಆದಾಗ್ಯೂ, ಡೇವಿನಾ ಪೆರಿನ್ ಮತ್ತು ಜೆಮಿಮಾ ಸ್ಪೆನ್ಸ್ ನಡುವಿನ 37 ರನ್‌ಗಳ ಆರಂಭಿಕ ಜೊತೆಯಾಟದ ನಂತರ, ಇಂಗ್ಲೆಂಡ್ ಎರಡು ವಿಕೆಟ್‌ಗಳನ್ನು ವೇಗವಾಗಿ ಕಳೆದುಕೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 01 31 at 6.13.07 PM

ಪೆರಿನ್ ಮತ್ತು ನಾಯಕಿ ಅಬಿ ನಾರ್ಗ್ರೋವ್ ಮೂರನೇ ವಿಕೆಟ್‌ಗೆ 44 ರನ್ ಗಳಿಸುವ ಮೂಲಕ ಇನ್ನಿಂಗ್ಸ್ ಕಟ್ಟಿದರು. ಇಂಗ್ಲೆಂಡ್ 2 ವಿಕೆಟ್ ನಷ್ಟಕ್ಕೆ 81 ರನ್ ಗಳಿಸಿದ್ದಾಗ ಭಾರತದ ಸ್ಪಿನ್ನರ್‌ಗಳಾದ ಆಯುಷಿ ಶುಕ್ಲಾ, ಪರುಣಿಕಾ ಸಿಸೋಡಿಯಾ ಮತ್ತು ವೈಷ್ಣವಿ ಶರ್ಮಾ ಉತ್ತಮ ಬೌಲಿಂಗ್ ಪ್ರದರ್ಶನ ನೀಡುವ ಮೂಲಕ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ತಂಡದ ಮೊತ್ತಕ್ಕೆ ಕೇವಲ 11 ರನ್ ಸೇರಿಸುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಇಂಗ್ಲೆಂಡ್ 16ನೇ ಓವರ್ ವೇಳೆಗೆ 8 ವಿಕೆಟ್ ನಷ್ಟಕ್ಕೆ 92 ರನ್ ಗಳಿಸಿತ್ತು.ಕೊನೆಗೆ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 113 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಗುರಿಯನ್ನು ಟೀಮ್ ಇಂಡಿಯಾ, 15 ಓವರ್‌ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು 117 ರನ್ ಗಳಿಸುವ ಮೂಲಕ ಫೈನಲ್‌ಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಯಿತು.

2023ರ ಐಸಿಸಿ ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. ಶಫಾಲಿ ವರ್ಮಾ ನೇತೃತ್ವದ ಭಾರತ ತಂಡವು ಫೈನಲ್ ಪಂದ್ಯವನ್ನು ಏಳು ವಿಕೆಟ್‌ಗಳಿಂದ ಗೆದ್ದು ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ ದೌರ್ಜನ್ಯ ಪ್ರಕರಣ: ಶಿಕ್ಷೆಯ ಪ್ರಮಾಣ ಕುಸಿತ; ದಲಿತ ಕಳಕಳಿಯ ವಕೀಲರ ನೇಮಕವಾಗಲಿ

ಈ ಬಾರಿ ಇದೇ ಮೈದಾನದಲ್ಲಿ ಭಾನುವಾರ ನಡೆಯಲಿರುವ ಫೈನಲ್‌ನಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ. ಇದಕ್ಕೂ ಮುನ್ನ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾವನ್ನು 5 ವಿಕೆಟ್ ಗಳಿಂದ ಮಣಿಸಿ, ಫೈನಲ್ ಪ್ರವೇಶಿಸಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...