ಮಹಿಳಾ ಹಾಕಿ ಜೂನಿಯರ್ ಏಷ್ಯಾ ಕಪ್ | ಭಾರತಕ್ಕೆ ಚೊಚ್ಚಲ ಪ್ರಶಸ್ತಿ

Date:

ಭಾರತೀಯ ಯುವ ಮಹಿಳಾ ಹಾಕಿ ಆಟಗಾರ್ತಿಯರು ಭಾನುವಾರ ಹೊಸ ಇತಿಹಾಸ ರಚಿಸಿದ್ದಾರೆ.  

ಜಪಾನ್‌ನ ಕಾಕಾಮಿಗಾರಾದಲ್ಲಿ ನಡೆದ 2023ರ ಮಹಿಳಾ ಹಾಕಿ ಜೂನಿಯರ್ ಏಷ್ಯಾ ಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ, ದಕ್ಷಿಣ ಕೊರಿಯಾವನ್ನು 2-1 ಗೋಲುಗಳ ಅಂತರದಲ್ಲಿ ಮಣಿಸಿದ ಭಾರತ, ಇದೇ ಮೊದಲ ಬಾರಿಗೆ ಟೂರ್ನಿಯಲ್ಲಿ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಂದ್ಯದ ದ್ವಿತೀಯ ಕ್ವಾರ್ಟರ್‌ನ 22ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ ಅವಕಾಶದಲ್ಲಿ ಅನು ಗಳಿಸಿದ ಗೋಲಿನ ಮೂಲಕ ಭಾರತ ಮುನ್ನಡೆ ಪಡೆದಿತ್ತು. ಆದರೆ ಇದಾದ ಮೂರೇ ನಿಮಿಷದ ಅವಧಿಯಲ್ಲಿ ಪಾರ್ಕ್ ಸಿಯೊ ಯೆನ್ ಗೋಲಿನ ಮೂಲಕ ದಕ್ಷಿಣ ಕೊರಿಯಾ ಸಮಬಲ ಸಾಧಿಸಿತು.

ನಂತರದಲ್ಲಿ ಉಭಯ ತಂಡಗಳು ಆಕ್ರಮಣಕಾರಿ ಆಟಕ್ಕೆ ಮುಂದಾದವು. ಮೂರನೇ ಕ್ವಾರ್ಟರ್‌ನ 41ನೇ ನಿಮಿಷದಲ್ಲಿ ನೀಲಂ ಭಾರತಕ್ಕೆ ಗೆಲುವಿನ ಗೋಲು ತಂದಿತ್ತರು.

ದಕ್ಷಿಣ ಕೊರಿಯಾದ ಎಂಟು ಪೆನಾಲ್ಟಿ ಕಾರ್ನರ್‌ ಅವಕಾಶಗಳನ್ನು ವಿಫಲಗೊಳಿಸಿದ್ದು ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತು. ಎಫ್‌ಐಎಚ್ ಮಹಿಳಾ ಜೂನಿಯರ್ ವಿಶ್ವಕಪ್ 2023 ಟೂರ್ನಿಗೆ ಭಾರತ ಈಗಾಗಲೇ ಅರ್ಹತೆ ಪಡೆದಿದೆ.

2 ಲಕ್ಷ ನಗದು ಬಹುಮಾನ

ಮಹಿಳಾ ಜೂನಿಯರ್ ಏಷ್ಯಾ ಕಪ್ 2023 ಪ್ರಶಸ್ತಿ ಗೆದ್ದ ಭಾರತ ತಂಡಕ್ಕೆ ಹಾಕಿ ಇಂಡಿಯಾ ನಗದು ಬಹುಮಾನ ಘೋಷಿಸಿದೆ. ಆಟಗಾರ್ತಿಯರಿಗೆ ತಲಾ ₹2 ಲಕ್ಷ ಮತ್ತು ಸಹಾಯಕ ಸಿಬ್ಬಂದಿಗೆ ತಲಾ ₹1 ಲಕ್ಷ ನಗದು ಬಹುಮಾನವನ್ನು ನೀಡಲಾಗುವುದು ಎಂದು ಹಾಕಿ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...