ಏಷ್ಯಾ ಕಪ್ 2023 : ಮಳೆಬಾಧಿತ ಪಂದ್ಯದಲ್ಲಿ ಪಾಕ್ ವಿರುದ್ಧ ಗೌರವಯುತ ಮೊತ್ತ ದಾಖಲಿಸಿದ ಟೀಮ್ ಇಂಡಿಯಾ

Date:

  • ಶತಕದಂಚಿನಲ್ಲಿ ಎಡವಿದ ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ
  • 48.5 ಓವರ್‌ಗಳಲ್ಲಿ ಆಲೌಟಾಗಿ 266 ರನ್ ದಾಖಲಿಸಿದ ರೋಹಿತ್ ಪಡೆ

2023ರ ಏಪ್ಯಾ ಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಮೊದಲ ಪಂದ್ಯವನ್ನಾಡುತ್ತಿರುವ ಟೀಮ್ ಇಂಡಿಯಾ, 48.5 ಓವರ್​ಗಳಲ್ಲಿ 266 ರನ್​ಗಳಿಸಿ ಆಲೌಟ್ ಆಗಿದೆ.

ಶ್ರೀಲಂಕಾದ ಪಲ್ಲೆಕೆಲೆಯಲ್ಲಿ ನಡೆಯುತ್ತಿರುವ ಮಳೆಬಾಧಿತ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರವಾಗಿ ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ ಸಮಯೋಚಿತ ಜೊತೆಯಾಟ ನಡೆಸಿದ ಪರಿಣಾಮ, ಈ ಗೌರವಯುತ ಮೊತ್ತವನ್ನು ದಾಖಲಿಸಿದೆ.

ಪಾಕಿಸ್ತಾನದ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಅಗ್ರ ಕ್ರಮಾಂಕದ ಆಟಗಾರರು ಬೇಗನೆ ವಿಕೆಟ್ ಒಪ್ಪಿಸಿದರೂ, ಈ ಜೋಡಿ ಅಮೋಘ ಜೊತೆಯಾಟ ನೀಡುವ ಮೂಲಕ ತಂಡಕ್ಕೆ ಆಸರೆಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

66 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದಾಗ ಜೊತೆಯಾದ ಈ ಜೋಡಿ ತಂಡವನ್ನು ಸಂಕಷ್ಟದಿಂದ ಪಾರು ಮಾಡುವ ಜವಾಬ್ಧಾರಿಯನ್ನು ವಹಿಸಿಕೊಂಡರು. ಎಚ್ಚರಿಕೆಯಿಂದ ಇನ್ನಿಂಗ್ಸ್‌ಕಟ್ಟಿದ ಈ ಜೋಡಿ 5ನೇ ವಿಕೆಟ್‌ಗೆ ಭರ್ಜರಿ 138 ರನ್‌ಗಳ ಜೊತೆಯಾಟವನ್ನು ನೀಡಿದರು. ಈ ಸಂದರ್ಭದಲ್ಲಿ ಶತಕದತ್ತ ಹೆಜ್ಜೆಯಿಡುತ್ತಿದ್ದ ಇಶಾನ್ ಕಿಶನ್ ಅವರನ್ನು ಹ್ಯಾರಿಸ್ ರೌಪ್ ಔಟ್ ಮಾಡುವ ಮೂಲಕ ಈ ಜೊಡಯನ್ನು ಬೇರಪಡಿಸುವಲ್ಲಿ ಯಶಸ್ವಿಯಾದರು.

ಇಶಾನ್ ಕಿಶನ್ 83 ರನ್‌ಗಳಿಸಿ ಔಟಾದರೆ ಹಾರ್ದಿಕ್ ಪಾಂಡ್ಯ 87 ರನ್‌ಗಳಿಸಿದಾಗ ಶಾಹೀನ್ ಅಫ್ರಿದಿಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್‌ಗೆ ಸೇರಿಕೊಂಡರು. ಇಬ್ಬರು ಆಟಗಾರರು ಕೂಡ ಅದ್ಭುತ ಶತಕಗಳಿಸುವ ಅವಕಾಶವನ್ನು ಕಳೆದುಕೊಂಡರು.

ಟೀಮ್ ಇಂಡಿಯಾದ ಅಗ್ರ ಕ್ರಮಾಂಕದ ನಾಲ್ವರು ಆಟಗಾರರು 66 ರನ್‌ಗಳಾಗಿದ್ದಾಗ ವಿಕೆಟ್ ಕಳೆದುಕೊಂಡಿದ್ದರು. ಅದರಲ್ಲೂ ನಾಯಕ ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ ಕೇವಲ 43 ರನ್‌ಗಳಾಗಿದ್ದಾಗಲೇ ಪೆವಿಲಿಯನ್ ಸೇರಿದ್ದರು.

ಪಾಕ್ ಪರ ಬೌಲಿಂಗ್‌ನಲ್ಲಿ ವೇಗಿಗಳಾದ ಶಾಹೀನ್ ಅಫ್ರಿದಿ 35 ರನ್ ನೀಡಿ 4 ವಿಕೆಟ್ ಗಳಿಸಿ ಯಶಸ್ವಿಯಾದರೆ, ಹಾರಿಸ್ ರವೂಫ್ ನಸೀಂ ಶಾ ತಲಾ ಮೂರು ವಿಕೆಟ್‌ಗಳನ್ನು ಪಡೆಯುವಲ್ಲಿ ಸಫಲರಾದರು.

ಏಕದಿನ ಕ್ರಿಕೆಟ್​ನಲ್ಲಿ ಭಾರತ-ಪಾಕಿಸ್ತಾನ್ ಇದುವರೆಗೆ 132 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಭಾರತ ತಂಡವು ಕೇವಲ 55 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿದೆ. ಮತ್ತೊಂದೆಡೆ ಪಾಕಿಸ್ತಾನ್ ತಂಡವು 73 ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ. ಇದಾಗ್ಯೂ ಕೊನೆಯ 5 ಏಕದಿನ ಪಂದ್ಯಗಳಲ್ಲಿ ಭಾರತ ತಂಡವು 4 ಬಾರಿ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...