ಚಾಂಪಿಯನ್ಸ್ ಟ್ರೋಫಿಯ ಪಾಕ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಯಾಣ ಅಸಂಭವ; ಹೈಬ್ರಿಡ್ ಮಾದರಿ ಸರಣಿ ಸಾಧ್ಯತೆ

Date:

ಮುಂದಿನ ವರ್ಷ 2025ರ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ಐಸಿಸಿ ಏಕದಿನ ಚಾಂಪಿಯನ್ಸ್‌ ಟ್ರೋಫಿ ಎರಡು ವಿಭಿನ್ನ ದೇಶಗಳಲ್ಲಿ ಹೈಬ್ರಿಡ್ ಮಾದರಿಯಲ್ಲಿ ನಡೆಯುವ ಸಾಧ್ಯತೆಯಿದೆ. ಭಾರತ ತಂಡ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಳ್ಳುವುದು ಅಸಂಭವವಾಗಿರುವುದರಿಂದ ಹೈಬ್ರಿಡ್‌ ಮಾದರಿಯಲ್ಲಿ ಸರಣಿ ನಡೆಯುವ ಸಾಧ್ಯತೆಯಿದೆ.

ಪಾಕಿಸ್ತಾನವು ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಆರಂಭವಾದ 1998ರ ನಂತರದಿಂದ ಇದೇ ಮೊದಲ ಬಾರಿಗೆ 2025ರಲ್ಲಿ ಆಯೋಜಿಸುವ ಹಕ್ಕುಗಳನ್ನು ಪಡೆದುಕೊಂಡಿದೆ. ಮೂಲಗಳ ಪ್ರಕಾರ ಕೆಲವು ಪಂದ್ಯಗಳು ಯುಎಇ ಅಥವಾ ಶ್ರೀಲಂಕಾದಲ್ಲಿ ನಡೆಯಲಿದೆ.

ಪಾಕಿಸ್ತಾನ ಕ್ರಿಕೆಟ್ ಮಂಡಳಿ ಕಳೆದ ತಿಂಗಳು ವೇಳಾಪಟ್ಟಿಯ ಕರಡನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ ಸಲ್ಲಿಸಿತ್ತು. ವೇಳಾಪಟ್ಟಿಯ ಪ್ರಕಾರ ಭಾರತದ ಪಂದ್ಯಗಳು ಲಾಹೋರ್‌ನಲ್ಲಿ ನಡೆಯಲಿವೆ. ಆದಾಗ್ಯೂ ಇಲ್ಲಿಯವರೆಗೂ ಬಿಸಿಸಿಐನಿಂದ ಪ್ರವಾಸ ಕೈಗೊಳ್ಳುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾಂಪಿಯನ್ಸ್‌ ಟ್ರೋಫಿಗಾಗಿ ಪಾಕಿಸ್ತಾನಕ್ಕೆ ಭಾರತ ತಂಡ ಪ್ರವಾಸ ಕೈಗೊಳ್ಳುವುದು ಅತ್ಯಂತ ಅಸಂಭವವಾಗಿದೆ. ಅಂತಿಮವಾಗಿ ಸರ್ಕಾರ ಈ ಬಗ್ಗೆ ನಿರ್ಧಾರ ಕೈಕೊಳ್ಳಬೇಕಾಗಿದೆ. ಈ ಸಂದರ್ಭದಲ್ಲಿ ಹೈಬ್ರಿಡ್‌ ಮಾದರಿ ರೂಪಿಸಲಾಗುತ್ತದೆ.ಭಾರತವು ತನ್ನ ಪಂದ್ಯಗಳನ್ನು ಏಷ್ಯಾ ಕಪ್‌ ರೀತಿ ಯುಎಇ ಅಥವಾ ಶ್ರೀಲಂಕಾದಲ್ಲಿ ಅಡಬಹುದು. ಐಸಿಸಿ ತನ್ನ ನಿಲುವನ್ನು ಹೊಂದಿದ್ದರೂ, ನಾವು ಈ ರೀತಿ ಯೋಚಿಸುತ್ತಿದ್ದೇವೆ. ಮುಂದೆ ಹೇಗಾಗುತ್ತದೆ ಎಂಬುದನ್ನು ನೋಡೋಣ. ಈಗಿರುವ ಸಂದರ್ಭಕ್ಕೆ ತಕ್ಕಂತೆ ಹೈಬ್ರಿಡ್ ಮಾದರಿಯಲ್ಲಿ ಪಂದ್ಯಗಳನ್ನು ಆಡಬಹುದು ಎಂದು ಮೂಲಗಳು ತಿಳಿಸಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಸುದ್ದಿ ಓದಿದ್ದೀರಾ? ಗೌತಮ್ ಗಂಭೀರ್: ಖ್ಯಾತಿಗಿಂತ ಹೆಚ್ಚು ವಿವಾದಗಳನ್ನೇ ಉಸಿರಾಡಿದ ಕ್ರಿಕೆಟಿಗನಿಗೆ ಹೊಣೆಗಾರಿಕೆಯ ಹುದ್ದೆ

ಭಾರತದಿಂದ ಈ ಬೆಳವಣಿಗೆ ನಡೆದ ನಂತರ ಪಿಸಿಬಿ ಅಧ್ಯಕ್ಷ ಮೋಸಿನ್‌ ನಖ್ವಿ ಸಂಪೂರ್ಣ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನದಲ್ಲಿ ಆಯೋಜಿಸಲು ಶ್ರಮವಹಿಸುತ್ತಿದ್ದಾರೆ. ಜುಲೈ ನಂತರದಲ್ಲಿ ಕೊಲೊಂಬೊದಲ್ಲಿ ನಡೆಯುವ ಐಸಿಸಿ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವ ಸಾಧ್ಯತೆಯಿದೆ.

ಭಾರತವು 2012-13ರ ನಂತರ ದ್ವಿಪಕ್ಷೀಯ ಕ್ರಿಕೆಟ್ ಸರಣಿ ಆಡಿಲ್ಲ. 2008ರಿಂದ ಪಾಕಿಸ್ತಾನಕ್ಕೆ ಕ್ರಿಕೆಟ್ ಪ್ರವಾಸವನ್ನು ಕೂಡ ಕೈಗೊಂಡಿಲ್ಲ. ಗಡಿಯಾಚೆಯ ಭಯೋತ್ಪಾದನೆಯನ್ನು ನಿಲ್ಲಿಸುವವರೆಗೂ ಪಾಕ್‌ ಜೊತೆ ಕ್ರಿಕೆಟ್ ಆಡುವುದಿಲ್ಲ ಎಂದು ಕಳೆದ ವರ್ಷ ಕೇಂದ್ರ ಕ್ರೀಡಾ ಮಂತ್ರಿಯಾಗಿದ್ದ ಅನುರಾಗ್‌ ಠಾಕೂರ್‌ ಹೇಳಿದ್ದರು.

ಕಳೆದ ವರ್ಷ ಕೂಡ ಏಷ್ಯಾ ಕಪ್‌ನಲ್ಲಿ ಭಾರತ ತಂಡ ಪಾಕ್‌ಗೆ ತೆರಳಲು ನಿರಾಕರಿಸಿದ ಕಾರಣ ಶ್ರೀಲಂಕಾದಲ್ಲಿ ಹೈಬ್ರಿಡ್‌ ಮಾದರಿ ಆಯೋಜಿಸಲಾಗಿತ್ತು. ಕಳೆದ ಬಾರಿ ಇಂಗ್ಲೆಂಡ್‌ನಲ್ಲಿ ನಡೆದ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಪಾಕಿಸ್ತಾನ ವಿಜೇತ ತಂಡವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...