IND vs AUS 4th T20: ಸ್ಪಿನ್ ದಾಳಿಗೆ ಆಸೀಸ್ ತತ್ತರ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

Date:

ಭರವಸೆಯ ಸ್ಪಿನ್ ಬೌಲರ್‌ಗಳ ಬಿಗಿ ದಾಳಿಯ ನೆರವಿನಿಂದ ಟೀಂ ಇಂಡಿಯಾ ನಾಲ್ಕನೇ ಟಿ20 ಪಂದ್ಯವನ್ನು 48 ರನ್‌ಗಳಿಂದ ಗೆದ್ದು ಐದು ಪಂದ್ಯಗಳ ಸರಣಿಯಲ್ಲಿ 2-1 ಮುನ್ನಡೆ ಸಾಧಿಸಿದೆ.

ಟೀಮ್ ಇಂಡಿಯಾ ನೀಡಿದ್ದ 168 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ತಂಡ ಉತ್ತಮ ಆರಂಭವನ್ನು ಪಡೆಯಿತು. ಮ್ಯಾಥ್ಯೂ ಶಾರ್ಟ್‌ 25 ರನ್‌ ಗಳಿಸಿದಾಗ ಅಕ್ಷರ್ ಪಟೇಲ್‌ ಅವರು ಬೌಲಿಂಗ್‌ನಲ್ಲಿ ಎಲ್‌ಬಿಗೆ ಔಟಾದರು.

ಮಧ್ಯಮ ಕ್ರಮಾಂಕದಲ್ಲಿ ಜೋಶ್‌ ಇಂಗ್ಲಿಸ್ (12), ಉತ್ತಮ ಇನಿಂಗ್ಸ್ ಕಟ್ಟಲಿಲ್ಲ. ನಾಯಕ ಮಿಚೆಲ್ ಮಾರ್ಷ್ 24 ಚೆಂಡುಗಳಲ್ಲಿ 4 ಬೌಂಡರಿ ನೆರವಿನಿಂದ 30 ರನ್‌ ಬಾರಿಸಿದ್ದಾಗ ತಾಳ್ಮೆ ಕಳೆದುಕೊಂಡು ಔಟಾದರು. ಕಳೆದ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದ ಟಿಮ್‌ ಡೇವಿಡ್‌ 14 ರನ್‌ಗಳಿಗೆ ಆಟ ಮುಗಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಭಾರತೀಯ ಮಹಿಳಾ ಕ್ರಿಕೆಟ್‌ನ ಮಿಂಚು: ಹರ್ಮನ್​ಪ್ರೀತ್ ಕೌರ್

ಆಲ್‌ರೌಂಡರ್‌ ಮಾರ್ಕಸ್ ಸ್ಟೋಯ್ನಿಸ್ 17 ರನ್‌ ಬಾರಿಸಿ ಪೆವಿಲಿಯನ್‌ಗೆ ತೆರಳಿಸಿದರು. ನಂತರ ಬಂದ ಯಾವೊಬ್ಬ ಬ್ಯಾಟರ್‌ ನೆಲಕಚ್ಚಿ ನಿಂತು ಬ್ಯಾಟ್ ಮಾಡುವಲ್ಲಿ ವಿಫಲರಾದರು. ಭಾರತ ತಂಡದ ಬಿಗಿ ದಾಳಿ ನಡೆಸಿ ಅಬ್ಬರಿಸಿತು. ಅಂತಿಮವಾಗಿ ಆಸ್ಟ್ರೇಲಿಯಾ 18.2 ಓವರ್‌ಗಳಲ್ಲಿ 119 ರನ್‌ಗಳಿಗೆ ಆಲೌಟ್‌ ಆಯಿತು.

11.3 ಓವರ್‌ಗಳಲ್ಲಿ 91 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡು ಸುಸ್ಥಿತಿಯಲ್ಲಿದ್ದ ಆಸೀಸ್‌ ನಂತರ 28 ರನ್‌ಗಳಿಗೆ 7 ವಿಕೆಟ್‌ ಕಳೆದುಕೊಂಡು ಸೋಲು ಅನುಭವಿಸಿತು. ಭಾರತದ ಪರ ಸ್ಪಿನ್ ಬೌಲರ್‌ಗಳಾದ ವಾಷಿಂಗ್ಟನ್‌ ಸುಂದರ್‌ 3, ಅಕ್ಷರ್ ಪಟೇಲ್‌, ಶಿವಂ ದುಬೆ ತಲಾ 2 ವಿಕೆಟ್‌ ಉರುಳಿಸಿದರೆ, ಅರ್ಷದೀಪ್‌, ಬೂಮ್ರಾ, ವರುಣ್‌ ಚಕ್ರವರ್ತಿ ತಲಾ 1 ವಿಕೆಟ್‌ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...