ಛತ್ತೀಸ್‌ಗಢ | ಜನರೇಟರ್‌ ನೆರವಿನಿಂದ ನಡೆದ ಭಾರತ-ಆಸೀಸ್ ನಡುವಿನ 4ನೇ ಟಿ20 ಪಂದ್ಯ!

Date:

ನಿನ್ನೆ ನಡೆದ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕನೆ ಟಿ-20 ಕ್ರಿಕೆಟ್ ಪಂದ್ಯದಲ್ಲಿ, ಟೀಮ್ ಇಂಡಿಯಾ 20 ರನ್‌ಗಳ ಅಂತರದಿಂದ ಗೆಲ್ಲುವ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ ಇನ್ನೂ ಒಂದು ಪಂದ್ಯ ಬಾಕಿ ಉಳಿದಿರುವಂತೆಯೇ 3-1 ಮುನ್ನಡೆಯೊಂದಿಗೆ ಸರಣಿಯನ್ನು ತನ್ನ ಕೈವಶ ಮಾಡಿಕೊಂಡಿತ್ತು.

ಈ ಪಂದ್ಯ ನಡೆದಿದ್ದು ಛತ್ತೀಸ್‌ಗಢದ ರಾಯ್‌ಪುರದಲ್ಲಿರುವ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರೀಡಾಂಗಣದಲ್ಲಿ. ಆದರೆ, ಈ ಮಹತ್ವದ ಪಂದ್ಯ ನಡೆದಿದ್ದು ವಿದ್ಯುತ್ ಸಂಪರ್ಕ ಇಲ್ಲದೆ, ಕೇವಲ ಜನರೇಟರ್‌ನ ನೆರವಿನಿಂದ ಎಂದರೆ ನೀವು ನಂಬಲೇಬೇಕು.

ಹೌದು. ಇದಕ್ಕೆ ಕಾರಣ 2009ರಿಂದ ವಿದ್ಯುತ್ ಶುಲ್ಕ ಬಾಕಿಯನ್ನು ಪಾವತಿ ಮಾಡದೆ ಇರುವುದು. ಈ ಕ್ರೀಡಾಂಗಣವು ರೂ. ₹3.16 ಕೋಟಿ ವಿದ್ಯುತ್ ಶುಲ್ಕವನ್ನು ಬಾಕಿ ಉಳಿಸಿಕೊಂಡ ಹಿನ್ನೆಲೆಯಲ್ಲಿ, ಕಳೆದ ಐದು ವರ್ಷಗಳ ಹಿಂದೆಯೇ ಈ ಕ್ರೀಡಾಂಗಣಕ್ಕೆ ವಿದ್ಯುತ್‌ ಪೂರೈಕೆಯನ್ನು ಕಡಿತಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಛತ್ತೀಸ್‌ಗಢದಲ್ಲಿ ಕೆಲ ದಿನಗಳ ಹಿಂದಷ್ಟೇ ಮತದಾನ ಪ್ರಕ್ರಿಯೆ ಮುಗಿದಿದ್ದು, ನಾಳೆ(ಡಿ.3) ಫಲಿತಾಂಶ ಪ್ರಕಟವಾಗಲಿದೆ. ಈ ನಡುವೆಯೇ ಈ ಸುದ್ದಿ ಸಾಕಷ್ಟು ಚರ್ಚೆಗೂ ಕಾರಣವಾಗಿದೆ.

ಇದನ್ನು ಓದಿದ್ದೀರಾ? ಟಿ20 । ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 3-1 ಸರಣಿ ಜಯ

ಬಿಲ್ ಬಾಕಿ ಇರುವ ಬಗ್ಗೆ ಮಾಧ್ಯಮಗಳು ಸುದ್ದಿ ಮಾಡುತ್ತಿದ್ದಂತೆಯೇ ಛತ್ತೀಸ್‌ಗಢ ರಾಜ್ಯ ಕ್ರಿಕೆಟ್ ಒಕ್ಕೂಟವು ಮುಖಭಂಗದಿಂದ ತಪ್ಪಿಸಲು ಹಾಗೂ ಪಂದ್ಯವು ಸುಗಮವಾಗಿ ಸಾಗಲು ಜನರೇಟರ್‍‌ನ ವ್ಯವಸ್ಥೆ ಮಾಡಿದ್ದವು. ಆದರೆ ಈ ಜನರೇಟರ್‍‌ ವ್ಯವಸ್ಥೆಗಾಗಿ ಕ್ರೀಡಾಂಗಣದ ಅಧಿಕಾರಿಗಳು 1.4 ಕೋಟಿ ಖರ್ಚು ಮಾಡಿದ್ದಾರೆ. ಅಂದರೆ ಬಾಕಿ ಇರುವ ವಿದ್ಯುತ್ ಬಿಲ್‌ನ( ₹3.16 ಕೋಟಿ) 40 ಶೇಕಡಾದಷ್ಟು ಎಂದು ‘ಟೈಮ್ಸ್‌ ಆಫ್ ಇಂಡಿಯಾ‘ ವರದಿ ಮಾಡಿದೆ.

ರಾಜ್ಯ ಕ್ರಿಕೆಟ್ ಒಕ್ಕೂಟದ ಮನವಿಯ ಮೇರೆಗೆ ಈ ಕ್ರೀಡಾಂಗಣಕ್ಕೆ ತಾತ್ಕಾಲಿಕ ವಿದ್ಯುತ್ ಪೂರೈಕೆಯನ್ನು ಒದಗಿಸಲಾಗಿದ್ದರೂ, ಈ ವಿದ್ಯುತ್ ಪ್ರೇಕ್ಷಕರ ಗ್ಯಾಲರಿ ಹಾಗೂ ಬಾಕ್ಸ್ ಗಳಿಗೆ ಮಾತ್ರ ಸಾಕಾಗಿತ್ತು. ಈ ಹಿನ್ನೆಲೆಯಲ್ಲಿ ಪಂದ್ಯದ ವೇಳೆ ಜನರೇಟರ್ ನೆರವಿನಿಂದ ಹೊನಲು ಬೆಳಕಿನ ವ್ಯವಸ್ಥೆ ಮಾಡಿದೆ ಎಂದು ವರದಿ ತಿಳಿಸಿದೆ.

2018ರಲ್ಲಿ ನಡೆದಿದ್ದ ಮ್ಯಾರಥಾನ್‌ ವೇಳೆ ಅಥ್ಲೀಟ್‌ಗಳು ಭಾಗವಹಿಸಿದ್ದಾಗ, ಕ್ರೀಡಾಂಗಣದಲ್ಲಿ ವಿದ್ಯುತ್‌ ಪೂರೈಕೆ ಇಲ್ಲ ಎಂಬ ಸಂಗತಿ ಬೆಳಕಿಗೆ ಬಂದು ಭಾರೀ ಗದ್ದಲವಾಗಿತ್ತು. ಇದಾದ ನಂತರ, ವಿದ್ಯುತ್ ಶುಲ್ಕವನ್ನು 2009ರಿಂದ ಪಾವತಿಸಲಾಗಿಲ್ಲ ಎಂದು ಪ್ರಕಟಿಸಲಾಗಿತ್ತು. ಆ ವೇಳೆಗೆ ವಿದ್ಯುತ್ ಶುಲ್ಕ ಬಾಕಿ ಮೊತ್ತವು ರೂ. 3.16 ಕೋಟಿಗೂ ಅಧಿಕವಾಗಿತ್ತು.

2018ರಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದಾಗಿನಿಂದ ಇಲ್ಲಿಯವರೆಗೆ ಈ ಕ್ರೀಡಾಂಗಣದಲ್ಲಿ ಮೂರು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳು ನಡೆದಿವೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...