ಸಿಡ್ನಿಯಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಟಿಂಗ್ ನಡೆಸಿದ ಆಸ್ಟ್ರೇಲಿಯಾ ತಂಡ ಹರ್ಷಿತ್ ರಾಣಾ 39\4 ಬೌಲಿಂಗ್ ದಾಳಿಗೆ 46.4 ಓವರ್‌ಗಳಲ್ಲಿ 236 ರನ್‌ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಆಲೌಟ್ ಆಗಿದೆ. ಆ ಮೂಲಕ ಭಾರತದ ಗೆಲುವಿಗೆ 237 ರನ್‌ಗಳ ಗುರಿ ನೀಡಿದೆ.
ಆಸೀಸ್‌ನ ಗುರಿ ಬೆನ್ನಟ್ಟಿರುವ ಭಾರತ 13 ಓವರ್‌ಗಳಲ್ಲಿ ನಾಯಕ ಶುಭ್‌ಮನ್ ಗಿಲ್ (24) ವಿಕೆಟ್ ಕಳೆದುಕೊಂಡು 83 ರನ್ ಗಳಿಸಿದೆ. ರೋಹಿತ್ ಶರ್ಮಾ 32 ಹಾಗೂ ವಿರಾಟ್ ಕೊಹ್ಲಿ 14 ರನ್‌ನೊಂದಿಗೆ ಬ್ಯಾಟಿಂಗ್ ಮಾಡುತ್ತಿದ್ದಾರೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಪರ ಆರಂಭಿಕ ಬ್ಯಾಟರ್‌ಗಳಾದ ಮಿಚಲ್ ಮಾರ್ಷ್ ಹಾಗೂ ಟ್ರಾವಿಸ್ ಹೆಡ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 61 ರನ್‌ಗಳ ಜೊತೆಯಾಟ ಆಡಿದರು. ಈ ಹಂತದಲ್ಲಿ 29 ರನ್ ಗಳಿಸಿದ್ದ ಹೆಡ್ ಸಿರಾಜ್‌ಗೆ ವಿಕೆಟ್ ಒಪ್ಪಿಸಿ ಹೊರನಡೆದರು.
ಇದನ್ನು ಓದಿದ್ದೀರಾ? ಏಕದಿನ ವೃತ್ತಿ ಜೀವನದಲ್ಲಿ ಸತತ 2 ಬಾರಿ ಶೂನ್ಯಕ್ಕೆ ವಿರಾಟ್ ಕೊಹ್ಲಿ ಔಟ್; ನಿವೃತ್ತಿ ಮುನ್ಸೂಚನೆಯೇ?
ನಂತರ ಬಂದ ಮ್ಯಾಥ್ಯೂ ಶಾರ್ಟ್ (30 ), ನಾಯಕ ಮಿಚೆಲ್ ಮಾರ್ಷ್ (41) ಹಾಗೂ ರೆನ್‌ಶಾ (56) ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಮಧ್ಯಮ ಕ್ರಮಾಂಕದಲ್ಲಿ ಅಲೆಕ್ಸ್ ಕ್ಯಾರಿ (24) ಹಾಗೂ ಕೂಪರ್ ಕೊನೊಲಿ (23) ರನ್ ಸಿಡಿಸುವ ಮೂಲಕ ತಂಡದ ಮೊತ್ತ 200ರ ಗಡಿದಾಟಲು ನೆರವಾದರು. ಅಂತಿಮವಾಗಿ ಆಸ್ಟ್ರೇಲಿಯಾ 46.4 ಓವರ್‌ಗಳಲ್ಲಿ 236 ರನ್‌ಗಳಿಗೆ ಆಲೌಟ್ ಆಯಿತು.
ಭಾರತದ ಪರ ಹರ್ಷಿತ್ ರಾಣಾ 39\4 ಹಾಗೂ ವಾಷಿಂಗ್ಟನ್ ಸುಂದರ್ 44\2 ಆಸ್ಟ್ರೇಲಿಯಾ ಕುಸಿತದಲ್ಲಿ ಪ್ರಮುಖ ಪಾತ್ರವಹಿಸಿದರು. ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಕುಲದೀಪ್ ಯಾದವ್, ಅಕ್ಸರ್ ಪಟೇಲ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.





