India vs Australia Test | ಆರಂಭದಲ್ಲೇ ಮುಗ್ಗರಿಸಿದ ಭಾರತ, 32 ರನ್‌ಗೆ ಮೂರು ವಿಕೆಟ್

Date:

ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಪರ್ತ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿರುವ ಭಾರತ ಆರಂಭದಲ್ಲೇ ಮುಗ್ಗರಿಸಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದಿನಿಂದ ಆರಂಭವಾಗಿದೆ.

ಭಾರತ ತಂಡವು 32 ರನ್ ಗಳಿಸುವಷ್ಟರಲ್ಲಿ ಪ್ರಮುಖ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು. ವಿರಾಟ್‌ ಕೊಹ್ಲಿ ವೈಫಲ್ಯ ಕಂಡಿದ್ದು, ಜೈಸ್ವಾಲ್, ಪಡಿಕ್ಕಲ್ ಶೂನ್ಯಕ್ಕೆ ಔಟ್ ಆಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನುಭವಿ ಬ್ಯಾಟ‌ರ್ ವಿರಾಟ್ ಕೊಹ್ಲಿ ಐದು ರನ್ ಗಳಿಸಿ ನಿರ್ಗಮಿಸಿದರು. ಆ ಮೂಲಕ ಕೊಹ್ಲಿ ಅವರ ಕಳಪೆ ಪ್ರದರ್ಶನ ಮುಂದುವರಿಯಿತು. ಭಾರತೀಯ ಅಗ್ರ ಕ್ರಮಾಂಕದ ಬ್ಯಾಟರ್‌ಗಳ ರಕ್ಷಣಾತ್ಮಕ ಆಟವು ತಂಡಕ್ಕೆ ಹಿನ್ನಡೆಯಾಗಿ ಪರಿಣಮಿಸುತ್ತಿದೆ.

ಬ್ಯಾಟ್ ಮೂಲಕ ಮೊದಲ ರನ್ ಇನಿಂಗ್ಸ್‌ನ 24ನೇ ಎಸೆತದಲ್ಲಿ ದಾಖಲಾಯಿತು. ಈ ಹಿಂದೆ 2001ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲೂ ನಾಲ್ಕನೇ ಓವರ್‌ನ ಕೊನೆಯ ಎಸೆತದಲ್ಲಿ ಬ್ಯಾಟ್ ಮೂಲಕ ಮೊದಲ ರನ್ ದಾಖಲಾಗಿತ್ತು.

ಇಬ್ಬರು ಹೊಸ ಮುಖ

ಭಾರತ ತಂಡದಲ್ಲಿ ಎರಡು ಹೊಸಮುಖಗಳಿದ್ದು, ಆಲ್​ರೌಂಡರ್​ಗಳಾದ ನಿತೀಶ್ ಕುಮಾರ್ ರೆಡ್ಡಿ ಹಾಗೂ ಹರ್ಷೀತ್ ರಾಣಾ ಪದಾರ್ಪಣೆ ಮಾಡಿದ್ದಾರೆ. ಗಾಯದ ಹಿನ್ನೆಲೆಯಲ್ಲಿ ಶುಭಮನ್ ಗಿಲ್ ಅವಕಾಶ ವಂಚಿತರಾಗಿದ್ದಾರೆ. ಕನ್ನಡಿಗರಾದ ಕೆ.ಎಲ್. ರಾಹುಲ್ ಹಾಗೂ ದೇವದತ್ತ ಪಡಿಕ್ಕಲ್‌ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಸ್ಪಿನ್‌ ವಿಭಾಗದಲ್ಲಿ ವಾಷಿಂಗ್ಟನ್ ಸುಂದರ್ ಕಾಣಿಸಿಕೊಂಡರೆ, ನಾಲ್ವರು ವೇಗದ ಬೌಲರ್‌ಗಳಿಗೆ ತಂಡದಲ್ಲಿ ಅವಕಾಶ ಸಿಕ್ಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...