India vs Australia Test | ಟಾಸ್ ಗೆದ್ದ ಭಾರತ ಬ್ಯಾಟಿಂಗ್‌ ಆಯ್ಕೆ, ಇಬ್ಬರಿಗೆ ಚೊಚ್ಚಲ ಅವಕಾಶ

Date:

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದಿನಿಂದ (ನ.22) ಆರಂಭವಾಗಿದೆ.

ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ಪರ್ತ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾದ ಉಸ್ತುವಾರಿ ನಾಯಕ ಜಸ್‌ಪ್ರೀತ್ ಬೂಮ್ರಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಉಭಯ ತಂಡಗಳ ನಡುವಿನ ಈ ಪಂದ್ಯಕ್ಕೆ ಪರ್ತ್‌ನಲ್ಲಿ ಹೊಸದಾಗಿ ನಿರ್ಮಿಸಲಾದ ಆಪ್ಟಸ್ ಸ್ಟೇಡಿಯಂ ಆತಿಥ್ಯವಹಿಸಿದೆ. ಈ ಪಂದ್ಯಕ್ಕೆ ರೋಹಿತ್ ಶರ್ಮಾ ಅಲಭ್ಯರಾಗಿರುವ ಕಾರಣ, ವೇಗಿ ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತ ತಂಡದಲ್ಲಿ ಎರಡು ಹೊಸಮುಖಗಳಿದ್ದು, ಆಲ್​ರೌಂಡರ್​ಗಳಾದ ನಿತೀಶ್ ಕುಮಾರ್ ರೆಡ್ಡಿ ಹಾಗೂ ಹರ್ಷೀತ್ ರಾಣಾ ಪದಾರ್ಪಣೆ ಮಾಡಿದ್ದಾರೆ. ಇವರಿಬ್ಬರಿಗೂ ಚೊಚ್ಚಲ ಟೆಸ್ಟ್ ಪಂದ್ಯ ಇದಾಗಿದೆ. ಹರ್ಷಿತ್​ ರಾಣಾಗೆ ಅಶ್ವಿನ್ ಚೊಚ್ಚಲ ಕ್ಯಾಪ್ ನೀಡಿದರೆ, ನಿತೀಶ್​ಗೆ ವಿರಾಟ್ ಕೊಹ್ಲಿ ಚೊಚ್ಚಲ ಕ್ಯಾಪ್ ಹಸ್ತಾಂತರಿಸಿದರು.

ಗಾಯದ ಹಿನ್ನೆಲೆಯಲ್ಲಿ ಶುಭಮನ್ ಗಿಲ್ ಅವಕಾಶ ವಂಚಿತರಾಗಿದ್ದಾರೆ. ಕನ್ನಡಿಗರಾದ ಕೆ ಎಲ್ ರಾಹುಲ್ ಹಾಗೂ ದೇವದತ್ತ ಪಡಿಕ್ಕಲ್‌ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಸ್ಪಿನ್‌ ವಿಭಾಗದಲ್ಲಿ ವಾಷಿಂಗ್ಟನ್ ಸುಂದರ್ ಕಾಣಿಸಿಕೊಂಡರೆ, ನಾಲ್ವರು ವೇಗದ ಬೌಲರ್‌ಗಳಿಗೆ ತಂಡದಲ್ಲಿ ಅವಕಾಶ ಸಿಕ್ಕಿದೆ.

ಈ ಸುದ್ದಿ ಓದಿದ್ದೀರಾ? ಸಂಜು – ತಿಲಕ್ ಅಬ್ಬರದ ಅದ್ಭುತ ಆಟದಲ್ಲಿ ಐಪಿಎಲ್ ಹರಾಜಿನ ಸುಳಿವಿದೆಯೇ?

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರಬೇಕಾದರೆ ಟೀಂ ಇಂಡಿಯಾ ಈ ಸರಣಿಯನ್ನು 4-0 ಅಂತರದಿಂದ ಗೆಲ್ಲಬೇಕಿದೆ. ಇದರ ಜೊತೆಗೆ ಸತತ ಎರಡು ಬಾರಿ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಗೆದ್ದುಕೊಂಡಿರುವ ಭಾರತಕ್ಕೆ ಹ್ಯಾಟ್ರಿಕ್ ಸರಣಿ ಗೆಲುವು ಸಾಧಿಸುವ ಅವಕಾಶವಿದೆ.

ಭಾರತ ಕೊನೆಯ ಬಾರಿಗೆ 2022-23ರಲ್ಲಿ ತವರಿನಲ್ಲಿ ಆಸ್ಟ್ರೇಲಿಯಾವನ್ನು 2-1 ಅಂತರದಲ್ಲಿ ಸೋಲಿಸುವ ಮೂಲಕ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಗೆದ್ದುಕೊಂಡಿತ್ತು.

ಉಭಯ ತಂಡಗಳ ಪ್ಲೇಯಿಂಗ್ 11

ಆಸ್ಟ್ರೇಲಿಯಾ ತಂಡ: ಉಸ್ಮಾನ್ ಖವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲಬುಶೇನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹ್ಯಾಜಲ್‌ವುಡ್.

ಭಾರತ ತಂಡ: ಕೆಎಲ್ ರಾಹುಲ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್, ನಿತೀಶ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಜಸ್ಪ್ರೀತ್ ಬುಮ್ರಾ (ನಾಯಕ), ಮೊಹಮ್ಮದ್ ಸಿರಾಜ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...