ENG vs IND 4TH TEST | ಭಾರತ 358 ರನ್‌ಗಳಿಗೆ ಆಲೌಟ್; ಇಂಗ್ಲೆಂಡ್‌ ಶುಭಾರಂಭ

Date:

ಮ್ಯಾಂಚಿಸ್ಟರ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್‌ನ ಎರಡನೇ ದಿನದಾಟ ಮುಕ್ತಾಯವಾಗಿದ್ದು, ಟೀಂ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 358 ರನ್‌ಗಳಿಗೆ ಆಲೌಟ್ ಆಗಿದೆ. ಇಂಗ್ಲೆಂಡ್‌ ತನ್ನ ಮೊದಲ ಇನಿಂಗ್ಸ್‌ನಲ್ಲಿ 2 ವಿಕೆಟ್‌ಗೆ 225 ರನ್ ಗಳಿಸಿ ಶುಭಾರಂಭ ಮಾಡಿದೆ.

ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರರಾದ ಬೆನ್ ಡಕೆಟ್ (94 ರನ್) ಮತ್ತು ಜ್ಯಾಕ್ ಕ್ರೌಲಿ (84 ರನ್) ಶತಕದ ಜೊತೆಯಾಟ ನೀಡಿ ತಂಡಕ್ಕೆ ಭದ್ರ ಬುನಾದಿ ಹಾಕಿಕೊಟ್ಟರು. ದಿನದಾಟ ಮುಕ್ತಾಯವಾಗುವ ವೇಳೆಗೆ ಓಲಿ ಪೋಪ್ (20 ರನ್) ಮತ್ತು ಜೋ ರೂಟ್ (11 ರನ್) ಕ್ರೀಸ್‌ನಲ್ಲಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಭಾರತದ ಪರ ಬೌಲಿಂಗ್‌ನಲ್ಲಿ ರವೀಂದ್ರ ಜಡೇಜಾ ಮತ್ತು ಅಂಶುಲ್ ಕಾಂಬೋಜ್ ತಲಾ ಒಂದು ವಿಕೆಟ್ ಪಡೆದು ಮಿಂಚಿದರು. ಮೂರನೇ ದಿನದಾಟದಲ್ಲಿ ಇಂಗ್ಲೆಂಡ್ ತಂಡ ಉತ್ತಮ ಮುನ್ನಡೆಗಾಗಿ ಪ್ರಯತ್ನಿಸಲಿದ್ದು, ಭಾರತ ತಂಡ ತಮ್ಮ ಬೌಲಿಂಗ್‌ನಲ್ಲಿ ಮತ್ತಷ್ಟು ಒತ್ತಡ ಹೇರಲು ಕಾತರವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

358 ರನ್​ಗಳಿಗೆ ಭಾರತ ಆಲೌಟ್

ಭಾರತ ಗುರುವಾರ ಮೊದಲ ಇನಿಂಗ್ಸ್‌ನಲ್ಲಿ 4 ವಿಕೆಟ್‌ಗೆ 264 ರನ್‌ಗಳಿಂದ ಆಟ ಮುಂದುವರೆಸಿತು. ಆಲ್‌ರೌಂಡರ್‌ ರವೀಂದ್ರ ಜಡೇಜಾ (20) ದೊಡ್ಡ ಇನಿಂಗ್ಸ್‌ ಕಟ್ಟುವಲ್ಲಿ ವಿಫಲರಾದರು. ಆರನೇ ವಿಕೆಟ್‌ಗೆ ಶಾರ್ದೂಲ್‌ ಠಾಕೂರ್ ಹಾಗೂ ವಾಷಿಂಗ್ಟನ್‌ ಸುಂದರ್ ಜೋಡಿ ತಂಡ ತಮ್ಮ ಮೇಲೆ ಇಟ್ಟ ಭರವಸೆಗೆ ಪೂರಕವಾಗಿ ಬ್ಯಾಟ್ ಮಾಡಿದರು. ಈ ಜೋಡಿ 101 ಎಸೆತಗಳಲ್ಲಿ 48 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಈ ವೇಳೆ ಶರ್ದೂಲ್‌ ಠಾಕೂರ್ 88 ಎಸೆತಗಳಲ್ಲಿ 5 ಬೌಂಡರಿ ನೆರವಿನಿಂದ 41 ರನ್ ಬಾರಿಸಿ ಔಟ್ ಆದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಹದಾಯಿ: ನಾಯಕರೇ ನಾಡದ್ರೋಹಿಗಳು

ಠಾಕೂರ್ ಔಟ್ ಆಗುತ್ತಿದ್ದಂತೆ ರಿಷಭ್ ಪಂತ್ ಮೈದಾನಕ್ಕೆ ಇಳಿದರು. ಗಾಯದಿಂದ ಬಳಲುತ್ತಿದ್ದರು ರಿಷಭ್‌ ಪಂತ್ ಕ್ರೀಡಾ ಸ್ಪೂರ್ತಿ ಮೆರೆದರು. ಇವರು 37 ರನ್‌ ಬಾರಿಸಿದ್ದಾಗ ಗಾಯಕ್ಕೆ ತುತ್ತಾಗಿದ್ದರು. ಗುರುವಾರ ಮೈದಾನಕ್ಕೆ ಇಳಿದು ಇವರು ತಮ್ಮ ನೈಜ ಆಟವನ್ನು ಆಡಿದರು. ರಿಷಭ್‌ 75 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್ ಸೇರಿದಂತೆ 54 ರನ್‌ ಬಾರಿಸಿ ಜೋಫ್ರಾ ಆರ್ಚರ್‌ಗೆ ವಿಕೆಟ್‌ ಒಪ್ಪಿಸಿದರು. ವಾಷಿಂಗ್ಟನ್‌ ಸುಂದರ್‌ (27) ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರು. ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕಲು ಪರದಾಟ ನಡೆಸಿದರು. ಅಂತಿಮವಾಗಿ ಟೀಂ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ 358 ರನ್​ಗಳಿಗೆ ಆಲೌಟ್ ಆಯಿತು.

ಇಂಗ್ಲೆಂಡ್ ಪರ ನಾಯಕ ಬೆನ್ ಸ್ಟೋಕ್ಸ್‌ 72 ರನ್‌ ನೀಡಿ 5 ವಿಕೆಟ್‌ ಕಬಳಿಸಿದರು. ವೇಗದ ಬೌಲರ್‌ ಜೋಫ್ರಾ ಆರ್ಚರ್ 3 ವಿಕೆಟ್ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...