IND – ENG 4TH TEST | ಇಂಗ್ಲೆಂಡ್‌ ಬೃಹತ್‌ ಮೊತ್ತಕ್ಕೆ ರಾಹುಲ್‌, ಗಿಲ್‌ ತಿರುಗೇಟು

Date:

ಭಾರತ ಹಾಗೂ ಇಂಗ್ಲೆಂಡ್‌ ನಡುವಣ ಮ್ಯಾಂಚಿಸ್ಟರ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್‌ ಪಂದ್ಯ ರೋಚಕ ಘಟ್ಟದತ್ತ ಸಾಗಿದೆ. ಇಂಗ್ಲೆಂಡ್‌ ಸೊಗಸಾದ ಬ್ಯಾಟಿಂಗ್‌ಗೆ ಟೀಮ್ ಇಂಡಿಯಾದ ಆರಂಭಿಕ ಕೆ ಎಲ್ ರಾಹುಲ್ ಹಾಗೂ ನಾಯಕ ಶುಭಮನ್‌ ಗಿಲ್‌ ಭರ್ಜರಿ ತಿರುಗೇಟು ನೀಡಿದ್ದಾರೆ. ಟೀಮ್ ಇಂಡಿಯಾ ಇನ್ನು 137 ರನ್‌ಗಳ ಹಿನ್ನಡೆ ಅನುಭವಿಸುತ್ತಿದ್ದರೂ, ಉತ್ತಮ ಮೊತ್ತ ದಾಖಲಿಸಿಸುವತ್ತ ಸಾಗಿದೆ.

ಶನಿವಾರ ನಾಲ್ಕನೇ ದಿನದಾಟದಲ್ಲಿ ಇಂಗ್ಲೆಂಡ್‌ ಮೊದಲ ಇನಿಂಗ್ಸ್‌ನಲ್ಲಿ 7 ವಿಕೆಟ್‌ಗೆ 544 ರನ್‌ ಗಳಿಂದ ಆಟ ಮುಂದುವರೆಸಿತು. ಲಿಯಾಮ್ ಡಾಸನ್ (26) ಅವರಿಗೆ ವೇಗಿ ಜಸ್ಪ್ರೀತ್ ಬುಮ್ರಾ ಪೆವಿಲಿಯನ್‌ ದಾರಿ ತೋರಿಸಿದರು. 9ನೇ ವಿಕೆಟ್‌ಗೆ ನಾಯಕ ಬೆನ್‌ ಸ್ಟೋಕ್ಸ್‌ ಹಾಗೂ ಬ್ರೈಡನ್ ಕಾರ್ಸೆ ಜೋಡಿ ಅಮೋಘ ಜೊತೆಯಾಟದ ಕಾಣಿಕೆ ನೀಡಿತು. ಈ ಜೊಡಿಯನ್ನು ಕಟ್ಟಿ ಹಾಕುವಲ್ಲಿ ಟೀಮ್ ಇಂಡಿಯಾ ಬೌಲರ್‌ಗಳು ವಿಫಲರಾದರು. ಈ ಜೊಡಿ 97 ಎಸೆತಗಳಲ್ಲಿ 95 ರನ್‌ ಸಿಡಿಸಿತು.

ಇಂಗ್ಲೆಂಡ್‌ ನಾಯಕ ಬೆನ್‌ ಸ್ಟೋಕ್ಸ್‌ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಮಹತ್ವದ ಸಮಯದಲ್ಲಿ ಫಾರ್ಮ್‌ಗೆ ಮರಳಿದ್ದು ತಂಡಕ್ಕೆ ಆಧಾರವಾಗಿದ್ದಾರೆ. ಸ್ಟೋಕ್ಸ್‌ 198 ಎಸೆತಗಳಲ್ಲಿ 11 ಬೌಂಡರಿ, 3 ಸಿಕ್ಸರ್‌ ಸಹಾಯದಿಂದ 141 ರನ್‌ ಸಿಡಿಸಿದರು. ಅಂತಿಮವಾಗಿ ಇಂಗ್ಲೆಂಡ್‌ 669 ರನ್‌ಗಳಿಗೆ ಆಲೌಟ್ ಆಗಿದೆ. ಭಾರತದ ಪರ ರವೀಂದ್ರ ಜಡೇಜಾ 4 ವಿಕೆಟ್‌, ಜಸ್ಪ್ರೀತ್ ಬುಮ್ರಾ, ವಾಷಿಂಗ್ಟನ್‌ ಸುಂದರ್‌ ತಲಾ 2 ವಿಕೆಟ್‌ ಪಡೆದು ಮಿಂಚಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ ಜಯಗಳಿಸಿದ್ದು ಹೇಗೆ? ಗೆಲುವಿಗೆ ತಂತ್ರ ರೂಪಿಸಿದ್ದು ಹೇಗಿತ್ತು?

ಸ್ಟೋಕ್ಸ್‌ ಸಾಧನೆ ಭಾರತದ ವಿರುದ್ಧ ಶತಕ ಬಾರಿಸಿರುವ ಬೆನ್‌ ಸ್ಟೋಕ್ಸ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ 7000 ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ 7 ಸಾವಿರ ರನ್‌ ಹಾಗೂ 200 ಕ್ಕೂ ಹೆಚ್ಚು ವಿಕೆಟ್‌ ಪಡೆದ ವಿಶ್ವದ ಮೂರನೇ ಆಲ್‌ರೌಂಡರ್‌ ಎಂಬ ಹಿರಿಮೆ ತಮ್ಮದಾಗಿಸಿಕೊಂಡರು. ಇವರಿಗಿಂತ ಮೊದಲು ಗ್ಯಾರಿ ಸೋಬರ್ಸ್ ಮತ್ತು ಜಾಕ್ವೆಸ್ ಕಾಲಿಸ್ ಈ ಸಾಧನೆ ಮಾಡಿದ್ದಾರೆ.

ಇನಿಂಗ್ಸ್‌ ಹಿನ್ನಡೆಯೊಂದಿಗೆ ಎರಡನೇ ಇನಿಂಗ್ಸ್‌ ಆರಂಭಿಸಿದ ಟೀಮ್ ಇಂಡಿಯಾದ ಆರಂಭ ಕಳಪೆಯಾಗಿತ್ತು. ಮೊದಲ ಓವರ್‌ನಲ್ಲೇ ಟೀಮ್ ಇಂಡಿಯಾದ ಆರಂಭಿಕ ಯಶಸ್ವಿ ಜೈಸ್ವಾಲ್‌ ಹಾಗೂ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ಸಾಯಿ ಸುದರ್ಶನ್‌ ಔಟಾದರು.

ಖಾತೆ ತೆರೆಯುವ ಮುನ್ನವೇ ಟೀಮ್ ಇಂಡಿಯಾ ಎರಡು ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಈ ವೇಳೆಗೆ ತಂಡಕ್ಕೆ ಆಧಾರವಾಗಿದ್ದು, ಆರಂಭಿಕ ಆಟಗಾರ ಕೆಎಲ್ ರಾಹುಲ್‌ ಮತ್ತು ನಾಯಕ ಶುಭಮನ್‌ ಗಿಲ್ ಜೋಡಿ ಅಮೋಘ ಜೊತೆಯಾಟದ ಕಾಣಿಕೆ ನೀಡಿತು.

ಈ ಜೋಡಿ 377 ಎಸೆತಗಳನ್ನು ಎದುರಿಸಿ ಅಜೇಯ 174 ರನ್‌ಗಳ ಜೊತೆಯಾಟವನ್ನು ನೀಡಿದೆ. ಕೆಎಲ್ ರಾಹುಲ್ 8 ಬೌಂಡರಿ ನೆರವಿನಿಂದ ಅಜೇಯ 87 ರನ್‌ ಹಾಗೂ ನಾಯಕ ಗಿಲ್ 10 ಬೌಂಡರಿ ಸಹಾಯದಿಂದ ಅಜೇಯ 78 ರನ್‌ ಸಿಡಿಸಿ, ಕೊನೆಯ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಭಾರತ ಇನಿಂಗ್ಸ್‌ ಮುನ್ನಡೆ ಸಾಧಿಸಲು 137 ರನ್‌ ಅವಶ್ಯಕತೆ ಇದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...