IND – ENG 5TH TEST | ಆಂಗ್ಲರ ಬೌಲಿಂಗ್‌ ದಾಳಿಗೆ ಟೀಂ ಇಂಡಿಯಾ 224 ರನ್‌ಗಳಿಗೆ ಆಲೌಟ್

Date:

ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯದ ಎರಡನೇ ದಿನದ ಮೊದಲ ಸೆಷನ್‌ನಲ್ಲಿ ಭಾರತದ ಮೊದಲ ಇನಿಂಗ್ಸ್‌ನಲ್ಲಿ 224 ರನ್‌ಗಳಿಗೆ ಆಲೌಟ್ ಆಗಿದೆ.

ಇಂಗ್ಲೆಂಡ್‌ನ ಬಿಗುವಿನ ಬೌಲಿಂಗ್ ಮತ್ತು ಚುರುಕಿನ ಫೀಲ್ಡಿಂಗ್‌ನಿಂದಾಗಿ 69.4 ಓವರ್‌ಗಳಲ್ಲಿ ತಂಡ ಬ್ಯಾಟಿಂಗ್ ವೈಫಲ್ಯವನ್ನು ಅನುಭವಿಸಿತು. ಗುಸ್ ಆಟ್ಕಿನ್ಸನ್‌ರ ಭರ್ಜರಿ ಬೌಲಿಂಗ್ 33/5 ವಿಕೆಟ್‌) ಭಾರತದ ಬ್ಯಾಟರ್‌ಗಳನ್ನು ಕಟ್ಟಿ ಹಾಕಿದರು. ಜೋಶ್ ಟಂಗ್‌ ಅವರ ಮೂರು ವಿಕೆಟ್‌ಗಳು ಕೂಡ (57ಕ್ಕೆ 3) ನಿರ್ಣಾಯಕವಾದವು.

ಎರಡನೇ ದಿನದ ಆರಂಭದಲ್ಲಿ ಕರುಣ್ ನಾಯರ್ (57 ರನ್‌) ಮತ್ತು ವಾಷಿಂಗ್ಟನ್ ಸುಂದರ್ (26 ರನ್‌) ಭರವಸೆಯ ಆಟವಾಡಿದರೂ, ಇಂಗ್ಲೆಂಡ್ ಬೌಲರ್‌ಗಳ ಒತ್ತಡವನ್ನು ತಡೆಯಲು ಸಾಧ್ಯವಾಗಲಿಲ್ಲ. ನಾಯರ್‌ ಅವರ ಜವಾಬ್ದಾರಿಯುತ ಆಟವು ತಂಡಕ್ಕೆ ಸ್ಥಿರತೆ ತಂದಿತಾದರೂ, ಟಂಗ್‌ ಬೌಲಿಂಗ್‌ನಲ್ಲಿ ಎಲ್‌ಬಿಡಬ್ಲ್ಯೂ ಆಗಿ ವಿಕೆಟ್ ಕಳೆದುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮೂರು ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ ಫೈನಲ್‌ಗಳಿಗೆ ಇಂಗ್ಲೆಂಡ್ ಆತಿಥ್ಯ

ಸುಂದರ್ ಕೂಡ ಆಟ್ಕಿನ್ಸನ್‌ರ ಕಿಲ್ಲರ್ ಶಾರ್ಟ್ ಎಸೆತಕ್ಕೆ ಡೀಪ್ ಸ್ಕ್ವೇರ್‌ನಲ್ಲಿ ಕ್ಯಾಚ್ ಕೊಟ್ಟು ಔಟಾದರು. ಕೊನೆಯ ಕ್ಷಣಗಳಲ್ಲಿ ಆಟ್ಕಿನ್ಸನ್‌ ಅವರು ಎರಡು ವಿಕೆಟ್‌ಗಳು ಭಾರತದ ಇನಿಂಗ್ಸ್‌ಗೆ ತೆರೆ ಎಳೆದವು, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ ಕೃಷ್ಣ ಶೂನ್ಯಕ್ಕೆ ಔಟಾದರು.

ಮೊದಲ ದಿನದಲ್ಲಿ ಭಾರತದ ಆರಂಭಿಕರಾದ ಯಶಸ್ವಿ ಜೈಸ್ವಾಲ್ (2 ರನ್‌) ಮತ್ತು ಕೆಎಲ್ ರಾಹುಲ್ (14 ರನ್‌) ಆರಂಭದಲ್ಲೇ ವಿಕೆಟ್ ಕಳೆದುಕೊಂಡಿದ್ದು ತಂಡಕ್ಕೆ ಆಘಾತವಾಯಿತು. ಸಾಯಿ ಸುದರ್ಶನ್ (38 ರನ್‌) ಮತ್ತು ಶುಭಮನ್ ಗಿಲ್ (21 ರನ್‌) ಕೆಲವು ಆಕರ್ಷಕ ಬೌಂಡರಿಗಳನ್ನು ಬಾರಿಸಿದರೂ, ಇಂಗ್ಲೆಂಡ್‌ನ ಫೀಲ್ಡರ್‌ಗಳು ರನ್‌ಔಟ್ ಮತ್ತು ಕ್ಯಾಚ್‌ಗಳ ಮೂಲಕ ಮೇಲುಗೈ ಸಾಧಿಸಿದರು.

ರವೀಂದ್ರ ಜಡೇಜ (9 ರನ್‌) ಮತ್ತು ಧ್ರುವ್ ಜುರೆಲ್ (19 ರನ್‌) ಕೂಡ ತಮ್ಮ ಆಟವನ್ನು ದೀರ್ಘಕಾಲ ಮುಂದುವರಿಸಲಿಲ್ಲ. ಇಂಗ್ಲೆಂಡ್‌ನ ಶಿಸ್ತುಬದ್ಧ ಬೌಲಿಂಗ್ ಮತ್ತು ಭಾರತದ ಬ್ಯಾಟಿಂಗ್‌ನ ಅಸ್ಥಿರತೆಯಿಂದಾಗಿ ತಂಡವು ಎರಡನೇ ದಿನದ ಮೊದಲ ಸೆಷನ್‌ನಲ್ಲೇ ಆಲೌಟ್ ಆಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಜುಗೆ ಧೋನಿ ಕೀಪಿಂಗ್ ಗ್ಲೌಸ್ ಹಸ್ತಾಂತರ; ಮುಂದೆ ನಾಯಕತ್ವವೂ? ಸಿಎಸ್‌ಕೆ ಯೋಜನೆ ಬಗ್ಗೆ ಕುಂಬ್ಳೆ ವಿಶ್ಲೇಷಣೆ

ಭಾರತದ ಟಿ20 ವಿಶ್ವಕಪ್ ಗೆಲುವಿನಲ್ಲಿ ರುವಾರಿ ಎಂದೇ ಮಿಂಚುತ್ತಿರುವ ಸಂಜು ಸ್ಯಾಮ್ಸನ್,...

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

BREAKING NEWS | ದಾವಣಗೆರೆ, ಬಾಗಲಕೋಟೆ ಉಪಚುನಾವಣೆ ದಿನಾಂಕ ಘೋಷಣೆ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆ ಘೋಷಣೆಯ...