ಭಾರತ vs ಇಂಗ್ಲೆಂಡ್ ಕ್ರಿಕೆಟ್: ತಂಡದಿಂದ ಕೊಹ್ಲಿ, ಬುಮ್ರಾ, ರೋಹಿತ್‌ ಔಟ್; ಸ್ಟಾರ್‌ಗಳನ್ನೇ ಕೈಬಿಟ್ಟ ಬಿಸಿಸಿಐ

Date:

ಭಾರತ ಮತ್ತು ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವೆ ನಡೆಯಲಿರುವ ಕ್ರಿಕೆಟ್‌ ಸರಣಿಯಲ್ಲಿ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ, ಜಸ್​ಪ್ರೀತ್ ಬುಮ್ರಾ ಹಾಗೂ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ನಿರ್ಧರಿಸಿದೆ. ಸರಣಿಯಲ್ಲಿ ಮೂವರನ್ನೂ ತಂಡದಿಂದ ಹೊರಗಿಡಲಿದೆ ಎಂದು ವರದಿಯಾಗಿದೆ.

ಈಗ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಸರಣಿ ಮುಗಿದ ಬೆನ್ನಲ್ಲೇ ಇಂಗ್ಲೆಂಡ್‌ ಜೊತೆಗೆ ಭಾರತ ತಂಡ ಟಿ20 ಹಾಗೂ ಏಕದಿನ ಸರಣಿಯಲ್ಲಿ ಆಡಲು ತೆರಳಲಿದೆ. ಈ ಸರಣಿಗಳಲ್ಲಿ ಭಾರತ ತಂಡದ ಮೂವರು ಸ್ಟಾರ್‌ ಆಟಗಾರರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ಮುಂದಾಗಿದೆ.

ಭಾರತ ಮತ್ತು ಇಂಗ್ಲೆಷ್‌ ನಡುವಿನ ಟಿ20 ಸರಣಿ ಜನವರಿ 22ರಿಂದ ಆರಂಭವಾಗಲಿದೆ. ಟಿ20ಯಲ್ಲಿ ಒಟ್ಟು 5 ಪಂದ್ಯಗಳು ಇರಲಿವೆ. ಮುಖ್ಯವಾಗಿ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ಈಗಾಗಲೇ ರೋಹಿತ್ ಮತ್ತು ಕೊಹ್ಲಿ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ, ಅವರು ಟಿ20ಯಲ್ಲಿ ಭಾರತ ತಂಡದಲ್ಲಿ ಆಡುವುದಿಲ್ಲ. ಇನ್ನು, ಬುಮ್ರಾ ಅವರು ವಿಶ್ರಾಂತಿ ಪಡೆಯಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಆಹಾರ ಸಮಾನತೆಗೆ ಸರ್ಕಾರದಿಂದ ಮತ್ತೊಂದು ಸ್ವಾಗತಾರ್ಹ ಹೆಜ್ಜೆ

ನಂತರ, ಫೆಬ್ರವರಿ 6ರಿಂದ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಏಕದಿನ ಕ್ರಿಕೆಟ್‌ಗೆ ಕೊಹ್ಲಿ, ರೋಹಿತ್, ಬುಮ್ರಾ – ಮೂವರು ನಿವೃತ್ತಿ ಘೋಷಿಸಿಲ್ಲ. ಆದಾಗ್ಯೂ, ಸರಣಿಯಲ್ಲಿ ಮೂವರಿಗೆ ವಿಶ್ರಾಂತಿ ನೀಡಲು ಬಿಸಿಸಿಐ ಯೋಜಿಸಿದೆ. ಈ ಬಗ್ಗೆ ಮೂವರೊಂದಿಗೂ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಬಿಸಿಸಿಐ ಕಾಯುತ್ತಿದೆ.

ಮೂವರೂ ತಂಡದಿಂದ ಹೊರಗುಳಿಯುವುದರಿಂದ ತಂಡ ನಾಯಕರು ಯಾರಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಈಗಾಗಲೇ, ಟಿ20 ತಂಡದ ನಾಯಕರಾಗಿ ಸೂರ್ಯಕುಮಾರ್ ಯಾದವ್ ಇದ್ದಾರೆ. ಅವರೇ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲೂ ತಂಡವನ್ನು ಮುನ್ನಡೆಸಲಿದ್ದಾರೆ. ಆದರೆ, ಏಕದಿನ ಸರಣಿಯಲ್ಲಿ ತಂಡದ ನಾಯಕ ಯಾರಾಗುತ್ತಾರೆ ಎಂಬುದೇ ಪ್ರಶ್ನೆಯಾಗಿದೆ. ಈಗ ತಂಡದ ಉಪನಾಯಕನಾಗಿರುವ ಶುಭ್​​ಮನ್ ಗಿಲ್ ಅವರು ನಾಯಕತ್ವ ವಹಿಸಬಹುದು ಎಂದೂ ಹೇಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...