ಚಾಂಪಿಯನ್ಸ್‌ ಟ್ರೋಫಿ | ಟಾಸ್‌ ಗೆದ್ದ ನ್ಯೂಜಿಲೆಂಡ್; ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ

Date:

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೀಗ್‌ ಹಂತದ ಕೊನೆಯ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ನ್ಯೂಜಿಲೆಂಡ್ ತಂಡ ಭಾರತವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ. ಎರಡೂ ತಂಡಗಳಲ್ಲಿ ಬದಲಾವಣೆ ಮಾಡಲಾಗಿದೆ. ಟೀಂ ಇಂಡಿಯಾದಲ್ಲಿ ಹರ್ಷಿತ್‌ ರಾಣಾ ಬದಲಿಗೆ ವರುಣ್‌ ಚಕ್ರವರ್ತಿ ಅವರನ್ನು ಸೇರಿಸಲಾಗಿದೆ. ನ್ಯೂಜಿಲೆಂಡ್‌ ತಂಡದಲ್ಲಿ ಡೇವೊನ್‌ ಕಾನ್ವೆ ಬದಲು ಡೇರಿಲ್‌ ಮಿಷಲ್‌ ಆಡಲಿದ್ದಾರೆ.

ಸ್ಟಾರ್‌ ಬ್ಯಾಟರ್ ವಿರಾಟ್‌ ಕೊಹ್ಲಿಗೆ ಈ ಪಂದ್ಯ ಮಹತ್ವವಾಗಿದ್ದು, ಏಕದಿನ ಅಂತಾರಾಷ್ಟ್ರೀಯ ಮಾದರಿಯಲ್ಲಿ 300ನೇ ಪಂದ್ಯವಾಡುತ್ತಿದ್ದಾರೆ.

ತಲಾ 4 ಅಂಕ ಗಳಿಸಿದ್ದರೂ ರನ್‌ರೇಟ್‌ ಆಧಾರದಲ್ಲಿ ಸದ್ಯ ಕಿವೀಸ್‌ ಎ ಗುಂಪಿನ ಅಗ್ರಸ್ಥಾನಿಯಾಗಿ ಹೊರಹೊಮ್ಮಿದ್ದರೆ, ಭಾರತ ಎರಡನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಭಾರತ ಗೆದ್ದರೆ ತನ್ನ ಗುಂಪಿನಿಂದ ಅಗ್ರಸ್ಥಾನಿಯಾಗಿ ಹೊಮ್ಮಲಿದೆ. ವಿಜೇತ ತಂಡ ಸೆಮೀಸ್‌ ಪಂದ್ಯವನ್ನು ಆತ್ಮವಿಶ್ವಾಸದಿಂದ ಎದುರಿಸುವ ಅವಕಾಶವನ್ನು ಪಡೆದುಕೊಳ್ಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡೂ ತಂಡಗಳು ಬಲಿಷ್ಠವಾಗಿವೆ. ಟೀಮ್ ಇಂಡಿಯಾ ಹೇಗೆ ಎಲ್ಲ ವಿಭಾಗಗಳಲ್ಲಿ ಬಲಾಢ್ಯವಾಗಿದೆಯೋ ಹಾಗೆ ನ್ಯೂಜಿಲೆಂಡ್ ತಂಡ ಸಹ ಉತ್ತಮ ತಂಡ ಹೊಂದಿದೆ. ಎರಡೂ ತಂಡಗಳು ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ನೆಚ್ಚಿನ ತಂಡಗಳು.

ಈ ಸುದ್ದಿ ಓದಿದ್ದೀರಾ? ಚಾಂಪಿಯನ್ಸ್‌ ಟ್ರೋಫಿ | ಪಾಕ್‌ ವಿರುದ್ಧದ ಒಂದು ಪಂದ್ಯ – ವಿರಾಟ್ ಕೊಹ್ಲಿಗೆ ಹಲವು ದಾಖಲೆಗಳ ಕಿರೀಟ

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಪಿಚ್ ಸ್ಪಿನ್ನರ್‌ಗಳಿಗೆ ಅನುಕೂಲ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಪಿಚ್‌ನಲ್ಲಿ ಬ್ಯಾಟರ್‌ಗಳು ರನ್‌ ಗಳಿಸುವುದು ಕಷ್ಟ. ಹೀಗಾಗಿ ಇಲ್ಲಿ ಕಡಿಮೆ ಸ್ಕೋರ್‌ ಪಂದ್ಯವನ್ನು ನೀರಿಕ್ಷಿಸಬಹುದಾಗಿದೆ. ವೇಗದ ಬೌಲರ್‌ಗಳಿಗೆ ಹೊಸ ಚೆಂಡಿನಲ್ಲಿ ನೆರವು ಸಿಗಲಿದೆ. ಸಮಯ ಕಳೆದಂತೆ ಸ್ಪಿನ್ ಬೌಲರ್‌ಗಳು ಸಹ ಅಬ್ಬರಿಸಬಲ್ಲರು.
ದೈಬೈ ಕ್ರೀಡಾಂಗಣದಲ್ಲಿ ಇದುವರೆಗೆ ಒಟ್ಟು 60 ಏಕದಿನ ಪಂದ್ಯಗಳನ್ನು ಆಡಲಾಗಿದ್ದು, ಅವುಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ 22 ಪಂದ್ಯಗಳನ್ನು, ಎರಡನೆ ಬಾರಿಗೆ ಬ್ಯಾಟ್ ಮಾಡಿದ ತಂಡ 36 ಪಂದ್ಯಗಳನ್ನು ಗೆದ್ದಿದೆ.

ಬಲಿಷ್ಠ ತಂಡ ನ್ಯೂಜಿಲೆಂಡ್ ಸಹ ಬಲಿಷ್ಠವಾಗಿದೆ ಈ ತಂಡದಲ್ಲಿ ನುರಿತ ಸ್ಪಿನ್ ಹಾಗೂ ವೆಗದ ಬೌಲರ್‌ಗಳು ಇದ್ದು, ಟೀಮ್ ಇಂಡಿಯಾಗೆ ಕಾಟ ನೀಡಬಹುದು. ಕಿವೀಸ್‌ ಸಹ ಈ ಪಂದ್ಯವನ್ನು ಗೆದ್ದು ಅಗ್ರ ಸ್ಥಾನಕ್ಕೇ ಏರಲು ಪ್ಲ್ಯಾನ್‌ ಮಾಡಿಕೊಂಡಿದೆ. ನ್ಯೂಜಿಲೆಂಡ್ ತಂಡದ ಬ್ಯಾಟರ್‌ಗಳು ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಟಾಮ್‌ ಲಾಥಮ್‌, ವಿಲ್‌ ಯಂಗ್, ರಚಿನ್ ರವೀಂದ್ರ ಈಗಾಗಲೇ ಟೂರ್ನಿಯಲ್ಲಿ ಶತಕ ಸಿಡಿಸಿದ್ದಾರೆ. ಇವರನ್ನು ಬಿಟ್ಟಂತೆ ಕೇನ್‌ ವಿಲಿಯಮ್ಸನ್‌ ಲಯಕ್ಕೆ ಮರಳುವ ಅನಿವಾರ್ಯತೆ ಇದೆ. ಇನ್ನು ಬೌಲರ್‌ಗಳು ಶಿಸ್ತು ಬದ್ದ ದಾಳಿ ನಡೆಸಬೇಕಿದೆ.

ಭಾರತ ತಂಡ:

ರೋಹಿತ್‌ ಶರ್ಮ(ನಾಯಕ), ಶುಭಮನ್ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ರಿಷಬ್‌ ಪಂತ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜ, ವಾಷಿಂಗ್ಟನ್‌ ಸುಂದರ್‌, ಮೊಹಮ್ಮದ್‌ ಶಮಿ, ಕುಲ್ದೀಪ್‌ ಯಾದವ್‌, ವರುಣ್‌ ಚಕ್ರವರ್ತಿ.

ನ್ಯೂಜಿಲೆಂಡ್ ತಂಡ:
ಮಿಚೆಲ್‌ ಸ್ಯಾಂಟ್ನರ್‌ (ನಾಯಕ), ಮಿಚೆಲ್‌ ಬ್ರೇಸ್‌ವೆಲ್‌, ಡೆವೋನ್‌ ಕಾನ್ವೆ, ರಚಿನ್‌ ರವೀಂದ್ರ, ಕೇನ್‌ ವಿಲಿಯಮ್ಸನ್‌, ಡೆರಿಲ್‌ ಮಿಚೆಲ್‌, ಟಾಮ್‌ ಲೇಥಂ, ಗ್ಲೆನ್‌ ಫಿಲಿಫ್ಸ್‌, ಕೈಲ್‌ ಜೆಮಿಸನ್‌, ಮ್ಯಾಟ್‌ ಹೆನ್ರಿ, ವಿಲ್‌ ಒ’ರೂರ್ಕ್,

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...