IND vs SA 2nd Test | 549 ರನ್​​ಗಳ ಕಠಿಣ ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭಿಕ ಆಘಾತ

Date:

ಗುವಾಹಟಿಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ದಕ್ಷಿಣ ಆಫ್ರಿಕಾ ತಂಡ 5 ವಿಕೆಟ್ ನಷ್ಟಕ್ಕೆ 260 ರನ್​​ಗಳಿಸಿ ಡಿಕ್ಲೇರ್ ಘೋಷಿಸಿದೆ. ಈ ಮೂಲಕ ಟೀಮ್ ಇಂಡಿಯಾಗೆ ಕೊನೆಯ ಇನಿಂಗ್ಸ್​ನಲ್ಲಿ ಬರೋಬ್ಬರಿ 549 ರನ್​​ಗಳ ಕಠಿಣ ಗುರಿ ನೀಡಿದೆ.

ಇದಕ್ಕೂ ಮುನ್ನ ನಡೆದ ಮೊದಲ ಇನಿಂಗ್ಸ್​ನಲ್ಲಿ ದಕ್ಷಿಣ ಆಫ್ರಿಕಾ ತಂಡವು 288 ರನ್​​ಗಳ ಮುನ್ನಡೆ ಸಾಧಿಸಿತ್ತು. ಅದರಂತೆ ಇದೀಗ ಟೀಮ್ ಇಂಡಿಯಾ ಈ ಪಂದ್ಯವನ್ನು ಗೆಲ್ಲಲು ಬರೋಬ್ಬರಿ 549 ರನ್​ ಕಲೆಹಾಕಲೇಬೇಕು.

ಈ ಕಠಿಣ ಗುರಿಯನ್ನು ಬೆನ್ನಟ್ಟಿರುವ ಟೀಂ ಇಂಡಿಯಾ 2ನೇ ಇನಿಂಗ್ಸ್‌ ಆರಂಭಿಸಿದ್ದು,ಇತ್ತೀಚಿನ ವರದಿಗಳಂತೆ 9 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 21 ರನ್‌ ಗಳಿಸಿದೆ. 13 ರನ್‌ ಗಳಿಸಿದ್ದ ಯಶಸ್ವಿ ಜೈಸ್ವಾಲ್‌ ಜಾನ್ಸೆನ್‌ ಬೌಲಿಂಗ್‌ನಲ್ಲಿ ಔಟಾದರು. ಕೆ ಎಲ್‌ ರಾಹುಲ್ ಹಾಗೂ ಸಾಯಿ ಸುದರ್ಶನ್‌ ಬ್ಯಾಟಿಂಗ್‌ ಆಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ನಾಯಕ ನಿರ್ಧಾರವನ್ನು ಸಮರ್ಥಿಸುವಂತೆ ಬ್ಯಾಟ್ ಬೀಸಿದ ದಕ್ಷಿಣ ಆಫ್ರಿಕಾದ ಆಟಗಾರರು ಪ್ರಥಮ ಇನಿಂಗ್ಸ್​ನಲ್ಲಿ ಬರೋಬ್ಬರಿ 489 ರನ್​ ಕಲೆಹಾಕಿದ್ದರು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಗಳಿಸಿದ್ದು ಕೇವಲ 201 ರನ್​​ಗಳು ಮಾತ್ರ. 288 ರನ್​​ಗಳ ಮುನ್ನಡೆ ಪಡೆದರೂ ದಕ್ಷಿಣ ಆಫ್ರಿಕಾ ತಂಡ ಭಾರತದ ಮೇಲೆ ಫಾಲೋಆನ್ ಹೇರಿರಲಿಲ್ಲ. ಬದಲಾಗಿ ಮೂರನೇ ದಿನದಾಟದ ಅಂತ್ಯದಲ್ಲಿ ದ್ವಿತೀಯ ಇನಿಂಗ್ಸ್ ಆರಂಭಿಸಿದ್ದರು.

ಅದರಂತೆ ಇದೀಗ ನಾಲ್ಕನೇ ದಿನದಾಟದ ಭೋಜನಾ ವಿರಾಮದ ಬೆನ್ನಲ್ಲೇ 260 ರನ್​ಗಳಿಸಿ ಡಿಕ್ಲೇರ್ ಘೋಷಿಸಿದೆ. ಈ ಮೂಲಕ ಭಾರತ ತಂಡಕ್ಕೆ ಕೊನೆಯ ಇನಿಂಗ್ಸ್​ನಲ್ಲಿ ಬರೋಬ್ಬರಿ 549 ರನ್​​ಗಳ ಗುರಿ ನೀಡಿದೆ.

ಇದನ್ನು ಓದಿದ್ದೀರಾ? IND – SA 2nd Test | ಭಾರತ 201ಕ್ಕೆ ಆಲೌಟ್; ಫಾಲೋಆನ್‌ ನೀಡದೆ ಬ್ಯಾಟಿಂಗ್ ಆರಂಭಿಸಿದ ದಕ್ಷಿಣ ಆಫ್ರಿಕಾ

ಸರಣಿ ಸೋಲಿನತ್ತ ಭಾರತ:
ದಕ್ಷಿಣ ಆಫ್ರಿಕಾ ತಂಡವು 549 ರನ್​ಗಳ ಗುರಿ ನೀಡಿರುವುದರಿಂದ ಇಂಡಿಯಾಗೆ ಸರಣಿ ಸೋಲು ಖಚಿತವಾಗಿದೆ. ಏಕೆಂದರೆ ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಭಾರತ ತಂಡವು ಸರಣಿಯನ್ನು 1-1 ಅಂತರದಿಂದ ಸಮಗೊಳಿಸಬಹುದು.

ಆದರೆ ಅತ್ತ ಮೊದಲ ಪಂದ್ಯದಲ್ಲಿ ಗೆಲುವು ದಾಖಲಿಸಿರುವ ದಕ್ಷಿಣ ಆಫ್ರಿಕಾ ತಂಡವು ಈ ಪಂದ್ಯವನ್ನು ಡ್ರಾಗೊಳಿಸಿದರೂ 1-0 ಅಂತರದಿಂದ ಸರಣಿ ಜಯಿಸಬಹುದು. ಹೀಗಾಗಿಯೇ ದಕ್ಷಿಣ ಆಫ್ರಿಕಾ ತಂಡ ನೀಡಿದ 549 ರನ್​ಗಳ ಗುರಿ ಟೀಮ್ ಇಂಡಿಯಾವನ್ನು ಸರಣಿ ಸೋಲಿನತ್ತ ಕೊಂಡೊಯ್ಯಲಿದೆ.

ಏಕೆಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಕೊನೆಯ ಇನಿಂಗ್ಸ್​ನಲ್ಲಿ 500+ ಸ್ಕೋರ್ ಬೆನ್ನತ್ತಿರುವುದು ಕೇವಲ ಒಂದು ಬಾರಿ ಮಾತ್ರ. ಅದು ಕೂಡ 1939 ರಲ್ಲಿ. ಅಂದು ದಕ್ಷಿಣ ಆಫ್ರಿಕಾ ನೀಡಿದ 696 ರನ್​​ಗಳ ಗುರಿ ಬೆನ್ನತ್ತಿದ ಇಂಗ್ಲೆಂಡ್ 656 ರನ್​ಗಳಿಸಿ ಪಂದ್ಯವನ್ನು ಡ್ರಾಗೊಳಿಸಲಷ್ಟೇ ಶಕ್ತರಾಗಿದ್ದರು.

ಇದಾದ ಬಳಿಕ ಯಾವುದೇ ತಂಡ ನಾಲ್ಕನೇ ಇನಿಂಗ್ಸ್​ನಲ್ಲಿ 500 ರನ್​ಗಳನ್ನು ಕಲೆಹಾಕಿದ ಇತಿಹಾಸವಿಲ್ಲ. ಇದೀಗ ದಕ್ಷಿಣ ಆಫ್ರಿಕಾ ತಂಡವು ಟೀಮ್ ಇಂಡಿಯಾಗೆ 549 ರನ್​​ಗಳ ಗುರಿ ನೀಡಿದೆ. ಹೀಗಾಗಿ ಈ ಪಂದ್ಯವು ಡ್ರಾನಲ್ಲಿ ಅಂತ್ಯಗೊಳ್ಳಬಹುದು ಅಥವಾ ದಕ್ಷಿಣ ಆಫ್ರಿಕಾ ಗೆಲುವು ದಾಖಲಿಸಿಬಹುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...