ಅಂತಿಮ ಟಿ20ಯಲ್ಲಿ ಗೆದ್ದು ಸರಣಿ ಉಳಿಸಿಕೊಂಡ ವಿಂಡೀಸ್: ಸೂರ್ಯ ಕುಮಾರ್ ಯಾದವ್‌ ಹೋರಾಟ ವ್ಯರ್ಥ

Date:

ಭಾರತದ ವಿರುದ್ಧದ ಟಿ20 ಸರಣಿಯ ನಿರ್ಣಾಯಕ ಐದನೇ ಪಂದ್ಯದಲ್ಲಿ ಬ್ರ್ಯಾಂಡನ್ ಕಿಂಗ್ (ಅಜೇಯ 85) ಹಾಗೂ ನಿಕೋಲಸ್ ಪೂರನ್ (47) ಅವರ ಸ್ಪೋಟಕ ಆಟದ ನೆರವಿನಿಂದ ವೆಸ್ಟ್‌ ಇಂಡೀಸ್ ತಂಡ 8 ವಿಕೆಟ್‌ಗಳ ಅಂತರದಲ್ಲಿ ಜಯಗಳಿಸಿ 5 ಪಂದ್ಯಗಳ ಸರಣಿಯನ್ನು 3-2 ರಿಂದ ತನ್ನದಾಗಿಸಿಕೊಂಡು ಏಕದಿನ, ಟೆಸ್ಟ್‌ ಸೋಲಿನ ಸೇಡನ್ನು ತೀರಿಸಿಕೊಂಡಿತು.

ಟೀಂ ಇಂಡಿಯಾ ನೀಡಿದ್ದ 166 ರನ್‌ಗಳ ಗುರಿಯನ್ನು ಬೆನ್ನಟ್ಟಿದ ರೋವ್‌ಮನ್ ಪೊವೆಲ್ ಸಾರಥ್ಯದ ವೆಸ್ಟ್‌ ಇಂಡೀಸ್ 18 ಓವರ್‌ಗಳಲ್ಲಿ ಗೆಲುವನ್ನು ಮುಡಿಗೇರಿಸಿಕೊಂಡಿತು. ಆರಂಭಿಕ ಆಟಗಾರರಾದ ಬ್ರ್ಯಾಂಡನ್ ಕಿಂಗ್ 55 ಎಸೆತಗಳಲ್ಲಿ 6 ಸಿಕ್ಸ್ರರ್ ಹಾಗೂ 5 ಬೌಂಡರಿಯೊಂದಿಗೆ ಅಜೇಯ 85 ರನ್ ಹಾಗೂ ನಿಕೋಲಸ್ ಪೂರನ್ 35 ಚೆಂಡುಗಳಲ್ಲಿ 4 ಭರ್ಜರಿ ಸಿಕ್ಸರ್, 1 ಬೌಂಡರಿಯೊಂದಿಗೆ 47 ರನ್‌ ಸಿಡಿಸಿ ಜಯದ ರೂವಾರಿಗಳಾದರು.

ಇದಕ್ಕೂ ಮೊದಲು ಟಾಸ್‌ ಗೆದ್ದ ಹಾರ್ದಿಕ್‌ ಪಾಂಡ್ಯ ಬ್ಯಾಟಿಂಗ್‌ ಆಯ್ದುಕೊಂಡರು. ಸೂರ್ಯಕುಮಾರ್ ಯಾದವ್ (61; 45ಎ, 4X4, 6X3) ಅವರ ಅರ್ಧ ಶತಕದ ನೆರವಿನಿಂದ ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 169 ರನ್ ಗಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆತಿಥೇಯ ತಂಡದ ಅಕಿಲ್ ಹುಸೇನ್ ಮೊದಲ ಓವರ್‌ನಲ್ಲಿಯೇ ಯಶಸ್ವಿ ಜೈಸ್ವಾಲ್ ವಿಕೆಟ್ ಗಳಿಸಿದರು. ಮೂರನೇ ಓವರ್‌ನಲ್ಲಿ ಅಕಿಲ್ ಬೌಲಿಂಗ್‌ನಲ್ಲಿ ಶುಭಮನ್ ಗಿಲ್ ಎಲ್‌ಬಿ ಬಲೆಗೆ ಬಿದ್ದರು. ಈ ಹಂತದಲ್ಲಿ ಸೂರ್ಯ ಅವರೊಂದಿಗೆ ಜೊತೆಗೂಡಿದ ತಿಲಕ್ ವರ್ಮಾ (27; 18ಎ, 4X3, 6X2) ತಂಡಕ್ಕೆ ತುಸು ಚೇತರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಭಾರತ – ವೆಸ್ಟ್‌ ಇಂಡೀಸ್‌ ಐದನೇ ಟಿ20 | ನಿರ್ಣಾಯಕ ಪಂದ್ಯದಲ್ಲಿ ಯಾರ ಮುಡಿಗೆ ಟ್ರೋಫಿ?

ರಾಷ್ಟನ್ ಚೇಸ್ ಎಂಟನೇ ಓವರ್‌ನಲ್ಲಿ ವರ್ಮಾ ವಿಕೆಟ್ ಗಳಿಸಿ ಜೊತೆಯಾಟ ಮುರಿದರು. ನಂತರ ಬಂದ ಬ್ಯಾಟರ್‌ಗಳು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಇರಲಿಲ್ಲ. ಆದರೆ ಸೂರ್ಯ ಮಾತ್ರ ಅಬ್ಬರಿಸಿದರು. ನಾಯಕ ಹಾರ್ದಿಕ್ ಪಾಂಡ್ಯ 18 ಎಸೆತಗಳಲ್ಲಿ 14 ರನ್ ಗಳಿಸಿದರು.

ಸಂಕ್ಷಿಪ್ತ ಸ್ಕೋರ್‌:
ಭಾರತ: 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 165
(ಸೂರ್ಯ ಕುಮಾರ್‌ ಯಾದವ್‌ 61, ತಿಲಕ್ ವರ್ಮಾ 27, ಅಕಿಲ್ ಹುಸೇನ್
24ಕ್ಕೆ2, ಜೇಸನ್‌ ಹೋಲ್ಡರ್‌ 36ಕ್ಕೆ2, ರೊಮೆರಿಯೊ ಶೇಫರ್ಡ್ 31ಕ್ಕೆ4)

ವೆಸ್ಟ್‌ ಇಂಡೀಸ್: 18 ಓವರ್‌ಗಳಳ್ಲಿ 2 ವಿಕೆಟ್‌ ನಷ್ಟಕ್ಕೆ 171
(ಬ್ರ್ಯಾಂಡನ್ ಕಿಂಗ್ ಅಜೇಯ 85 ಹಾಗೂ ನಿಕೋಲಸ್ ಪೂರನ್ 47 )

ಪಂದ್ಯ ಶ್ರೇಷ್ಠ: ರೊಮೆರಿಯೊ ಶೇಫರ್ಡ್
ಸರಣಿ ಶ್ರೇಷ್ಠ: ನಿಕೋಲಸ್ ಪೂರನ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...