ಭಾರತ – ವೆಸ್ಟ್ ಇಂಡೀಸ್ ಟೆಸ್ಟ್ | ಬಿಸಿಸಿಐಯಿಂದ 15 ಸದಸ್ಯರ ತಂಡ ಘೋಷಣೆ

Date:

ಏಷ್ಯಾಕಪ್ ಮುಕ್ತಾಯವಾಗುತ್ತಿದ್ದಂತೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಎರಡು ಪಂದ್ಯಗಳ ತವರು
ಟೆಸ್ಟ್ ಸರಣಿ ನಡೆಯಲಿದೆ. ಇದಕ್ಕಾಗಿ ಬಿಸಿಸಿಐ 15 ಸದಸ್ಯರುಗಳ ಭಾರತ ಟೆಸ್ಟ್ ತಂಡವನ್ನು ಘೋಷಿಸಿದೆ.

ಶುಭಮನ್‌ ಗಿಲ್‌ ಮುಂದಾಳತ್ವದಲ್ಲಿ ಕಣಕ್ಕಿಳಿಯಲಿರುವ ಈ ತಂಡದಲ್ಲಿ 7 ಆಟಗಾರರಿಗೆ ಸ್ಥಾನ ಲಭಿಸಿಲ್ಲ. ಕನ್ನಡಿಗ ದೇವದತ್ತ ಪಡಿಕ್ಕಲ್, ಎನ್. ಜಗದೀಶನ್ ಅವರಿಗೆ ಅವಕಾಶ ನೀಡಲಾಗಿದೆ. ಕರುಣ್ ನಾಯ‌ರ್, ಅಭಿಮನ್ಯು ಈಶ್ವರನ್ ಅವರನ್ನು ತಂಡದಿಂದ ಕೈಬಿಡಲಾಗಿದೆ.

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟರ್ ಆಗಿ ರಿಷಭ್ ಪಂತ್ ಕಾಣಿಸಿಕೊಂಡಿದ್ದರು. ಆದರೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಪಂತ್ ಅಲಭ್ಯರಾಗಿದ್ದಾರೆ. ಉಪನಾಯಕರಾಗಿ ರವೀಂದ್ರ ಜಡೇಜಾ ಅವರನ್ನು ಹೆಸರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಂಗ್ಲರ ವಿರುದ್ಧದ ಸರಣಿಯಲ್ಲಿ 4 ಮ್ಯಾಚ್ ಆಡಿದ್ದ ಕರುಣ್ ನಾಯರ್‌ಗೆ ಈ ಬಾರಿ ಅವಕಾಶ ಸಿಕ್ಕಿಲ್ಲ. ಏಕೆಂದರೆ ಇಂಗ್ಲೆಂಡ್ ವಿರುದ್ಧ 8 ಇನಿಂಗ್ಸ್ ಆಡಿದ್ದ ಕರುಣ್ ಕಲೆಹಾಕಿದ್ದು ಕೇವಲ 205 ರನ್‌ಗಳು ಮಾತ್ರ. ಹೀಗಾಗಿ ಅವರನ್ನು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕೈ ಬಿಡಲಾಗಿದೆ.

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಶಾರ್ದೂಲ್ ಠಾಕೂರ್ ಆಲ್​ರೌಂಡರ್ ಆಗಿ ಕಣಕ್ಕಿಳಿದಿದ್ದರು. ಇದಾಗ್ಯೂ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಹೀಗಾಗಿ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಶಾರ್ದೂಲ್ ಅವರನ್ನು ಹೊರಗಿಡಲಾಗಿದೆ.

15 ಸದಸ್ಯರ ಭಾರತ ತಂಡ: ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ಸಾಯಿ ಸುದರ್ಶನ್,
ದೇವದತ್‌ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜ (ಉಪನಾಯಕ), ವಾಷಿಂಗ್ಟನ್ ಸುಂದ‌ರ್, ಜಸ್‌ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ, ಎನ್. ಜಗದೀಶನ್ (ವಿಕೆಟ್ ಕೀಪರ್), ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಕುಲೀಪ್ ಯಾದವ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ್ತೆ ಲಲಿತ್ ಮೋದಿ: ಐಪಿಎಲ್ 2026ಕ್ಕೂ ಮುನ್ನ ಭಾರೀ ಬದಲಾವಣೆ ಸಾಧ್ಯತೆ?

ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯ ಮಾಲೀಕತ್ವದಲ್ಲಿ ಶೀಘ್ರದಲ್ಲೇ ಬದಲಾವಣೆಯಾಗುವ ಸಾಧ್ಯತೆಯಿದ್ದು, ಜಾಗತಿಕ ಹೂಡಿಕೆ...

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆಗೆ ಸರ್ಕಾರದ ಅನುಮತಿ

ಬೆಂಗಳೂರಿನ ಐತಿಹಾಸಿಕ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026 ಹಾಗೂ ಅಂತರರಾಷ್ಟ್ರೀಯ...

ಟೀಕೆಗಳ ಸುಳಿಯಲ್ಲೂ ಮಿನುಗಿದ ಕೇರಳದ ತಾರೆ: ಸಂಜು ಸ್ಯಾಮ್ಸನ್ ಎಂಬ ಛಲದಂಕಮಲ್ಲ

ಮೈದಾನದಲ್ಲಿ ಎಂ ಎಸ್  ಧೋನಿಯಂತೆಯೇ ಅತೀವ ಶಾಂತ ಸ್ವಭಾವವನ್ನು ಕಾಯ್ದುಕೊಳ್ಳುವ ಸಂಜು...